ಸಿದ್ದು ಪರ ಒಕ್ಕಲಿಗ ಮುಖಂಡರ ಬ್ಯಾಟಿಂಗ್
Team Udayavani, Apr 4, 2018, 4:01 PM IST
ಮೈಸೂರು: ಒಕ್ಕಲಿಗರನ್ನು ಎಚ್.ಡಿ.ದೇವೇಗೌಡರು ಕೊಂಡು ಕೊಂಡಿದ್ದಾರಾ? ಯಾರು ಎಷ್ಟೇ ಅಪಪ್ರಚಾರ
ಮಾಡಿದರೂ ಈ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನತೆ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಲಿದ್ದಾರೆ
ಎಂದು ಕ್ಷೇತ್ರದ ಒಕ್ಕಲಿಗ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಚಾಮುಂಡೇಶ್ವರಿ ಕ್ಷೇತ್ರದ ಒಕ್ಕಲಿಗ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. ಮಾವಿನಹಳ್ಳಿ ಲಾಯರ್ ಸಿದ್ದೇಗೌಡ ಮಾತನಾಡಿ, ಕ್ಷೇತ್ರದ ಒಕ್ಕಲಿಗರು ಜಾತಿ ನೋಡದೆ ಕ್ಷೇತ್ರದ ಅಭಿವೃದ್ಧಿ ನೋಡಿ ಮತ ಹಾಕುತ್ತಾ ಬಂದಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ ಸೂಕ್ತ ಅಭ್ಯರ್ಥಿ ಇಲ್ಲ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ, ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರಿಬ್ಬರಲ್ಲಿ ಯಾರು ಉತ್ತಮರು ಎಂಬುದನ್ನು ಕ್ಷೇತ್ರದ ಜನತೆ ತೀರ್ಮಾನ ಮಾಡಿ ಮತ ನೀಡಲಿದ್ದಾರೆ ಎಂದು ಹೇಳಿದರು.
ಎಚ್.ಡಿ.ದೇವೇಗೌಡರು ಹೇಳಿರುವಂತೆ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ಕೊನೆಯಾಗುವುದಿಲ್ಲ. ಅವರ ಗೆಲುವಿಗೆ ಬೇಕಾದ ತಂತ್ರಗಳನ್ನು ತಮಗೂ ಮಾಡಲು ಗೊತ್ತಿದೆ ಎಂದರು. ಮುಖಂಡರಾದ ನರಸೇಗೌಡ ಮಾತನಾಡಿ, ಮುಡಾ ಅಧ್ಯಕ್ಷ, ಜಿಪಂ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಸಿದ್ದರಾಮಯ್ಯ ಅವರು ಒಕ್ಕಲಿಗರಿಗೇ ನೀಡುತ್ತಾ ಬಂದಿದ್ದಾರೆ. ಜತೆಗೆ ಮೈಸೂರಿನಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಒಂದೂವರೆ ಎಕರೆ ಸಿಎ ನಿವೇಶನ ಕೊಡಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ನಾಮಕರಣ ಮಾಡಿಸಿದರು. ಕೆಂಪೇಗೌಡ ಜಯಂತಿ ಆಚರಣೆ ಮಾಡಿದರು. ಹೀಗಾಗಿ ಅವರ ಪರ ಒಕ್ಕಲಿಗರಿದ್ದಾರೆ ಎಂದು ಹೇಳಿದರು.ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೃಷ್ಣಮಾದೇಗೌಡ ಮಾತನಾಡಿ, ಜಿ.ಟಿ.ದೇವೇಗೌಡ, ಎಪಿಸಿಸಿಯಿಂದ ಶಾಸಕರಾಗುವವರೆಗೆ ಅವರ ಬೆಳವಣಿಗೆಗೆ ಸಿದ್ದರಾಮಯ್ಯ ಅವರು ಕಾರಣ.
ಸಿದ್ದರಾಮಯ್ಯ ಒಕ್ಕಲಿಗರ ವಿರೋಧಿ ಎಂದು ಅಪಪ್ರಚಾರ ಮಾಡಿಸುತ್ತಿರುವ ಶಾಸಕ ಜಿ.ಟಿ.ದೇವೇಗೌಡರು ಇದನ್ನು ಅರ್ಥ ಮಾಡಿಕೊಂಡು ಕಾಲೆಳೆಯುವ ಪ್ರಯತ್ನ ಬಿಡಲಿ, ಸಿದ್ದರಾಮಯ್ಯ ಗೆದ್ದರೆ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಹೀಗಾಗಿ ತಾವೆಲ್ಲಾ ಬೆಂಬಲ ಘೋಷಣೆ ಮಾಡಿದ್ದೇವೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹದೇವ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಂದಿನಿ ಚಂದ್ರಶೇಖರ್ ಸೇರಿದಂತೆ ಹಲವು ಒಕ್ಕಲಿಗ ಮುಖಂಡರು ಹಾಜರಿದ್ದರು.
ಸಿಎಂಗೆ ಇದು ಕೊನೆ ಚುನಾವಣೆ ಐದು ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿರುವ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರು, ತಮ್ಮನ್ನು ರಾಜಕೀಯವಾಗಿ ಬೆಳೆಸಿದ ಚಾಮುಂಡೇಶ್ವರಿ ಕ್ಷೇತ್ರದ ಜನರ ಋಣ ತೀರಿಸಲು ಕೊನೆ ಚುನಾವಣೆಗಾಗಿ ಈ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಹೇಳಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಯುವಕರು ಮಠಾಧೀಶರು, ಸಮಾಜದ ಮುಖಂಡರ ಭಾವಚಿತ್ರ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವುದನ್ನು ನಿಲ್ಲಿಸಲಿ ಎಂದ ಅವರು, ಕೆಂಪಯ್ಯ, ರಾಮಯ್ಯ ಅವರ ಮೂಲಕ ಸಿದ್ದರಾಮಯ್ಯ ಅವರು ಹಣ ಹಂಚಿಕೆ ಮಾಡಿಸುತ್ತಿದ್ದಾರೆ ಎಂಬುದಕ್ಕೆ ಆಧಾರ ಏನಿದೆ, ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ ಎಂದು ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಒಂದು ಜಾತಿಗೆ ಸೀಮಿತವಾಗಿ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ಕಳೆದ ಐದು
ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ 400 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಅವರ ರಾಜಕೀಯ ಕೊನೆಯಾಗಲಿದೆ ಎನ್ನಲು ಎಚ್.ಡಿ.ದೇವೇಗೌಡರೇನು ಒಕ್ಕಲಿಗರನ್ನು
ಕೊಂಡುಕೊಂಡಿದ್ದಾರಾ? ಶಾಸಕ ಜಿ.ಟಿ.ದೇವೇಗೌಡ, ಕ್ಷೇತ್ರದ ಜನರ ಕಷ್ಟ ವಿಚಾರಿಸಲಿಲ್ಲ. ಅಭಿವೃದ್ಧಿಯನ್ನೂ ಮಾಡಲಿಲ್ಲ.
ಸತ್ಯನಾರಾಯಣ, ಮಾಜಿ ಶಾಸಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.