ಚನ್ನಪಟ್ಟಣದಲ್ಲೂ ಸ್ಪರ್ಧೆ: ಕುಮಾರಸ್ವಾಮಿ
Team Udayavani, Apr 4, 2018, 4:21 PM IST
ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ
ಘೋಷಣೆ ಮಾಡುವ ಮೂಲಕ ರಾಜ್ಯದ ಜನತೆಯಲ್ಲಿ ಮೂಡಿದ್ದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ಚನ್ನಪಟ್ಟಣದಲ್ಲಿ ಮಂಗಳವಾರ ಆಯೋಜಿಸಿದ್ದ ಕುಮಾರಪರ್ವ ಸಮಾವೇಶದಲ್ಲಿ ಮಾತನಾಡಿ, ತಾವು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು. ಚನ್ನಪಟ್ಟಣದ
ಜನತೆಯ ಅಭಿಮಾನಕ್ಕೆ ತಲೆಬಾಗಿ ತಾವು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿದ್ದು, ತಮಗೆ ಆಶೀರ್ವಾದ ಮಾಡುವಂತೆ ಕೋರಿದರು.
ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ವಿಚಾರದಲ್ಲಿ ಗೊಂದಲುಗಳು ಉಂಟಾಗಿ ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಕಳೆದ
ಯುಗಾದಿಯಂದು ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ತಾವೇ ಸ್ಪರ್ಧೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೂ ಕ್ಷೇತ್ರದ ಜನತೆಯಲ್ಲಿ ಹಾಗೂ ವಿರೋಧ ಪಕ್ಷದ ನಾಯಕರಲ್ಲಿ ಕುಮಾರಸ್ವಾಮಿ ಅವರು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಅನುಮಾನಗಳು ಗಾಳಿಸುದ್ದಿಯಂತೆ ಹರಡಿದ್ದವು.
ಕುಮಾರಪರ್ವದ ಯಶಸ್ಸಿನ ಹಿನ್ನೆಲೆ ಈ ಭರವಸೆ ನೀಡಿದ್ದಾರೆ ಎಂಬ ಗುಸುಗುಸುಗಳು ಕೇಳಿಬಂದಿದ್ದವು. ಆದರೆ ಇದೀಗ ಎಚ್‌ಡಿಕೆ ಸೇರಿದಂತೆ ಮಾಜಿ ಪ್ರಧಾನಿ ದೇವೇಗೌಡರೂ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದು, ಕ್ಷೇತ್ರದಲ್ಲಿನ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಕುತೂಹಲ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸತತ ಒಂದು ಗಂಟೆಗಳ ಸುದೀರ್ಘ ಭಾಷಣ ಮಾಡುತ್ತಾ ರಾಜ್ಯದ ರಾಜಕಾರಣ, ಜನತೆಯ ಸ್ಥಿತಿ ಗತಿಗಳ ಬಗ್ಗೆ ಹೇಳುತ್ತಾ ಮಧ್ಯ ಮಧ್ಯ ತಮ್ಮ ಅಂತಿಮ ಸ್ಪಷ್ಟನೆಯನ್ನು ತಿಳಿಸುವ ಇರಾದೆ ವ್ಯಕ್ತಪಡಿಸಿ ರಾಮನಗರ ಜಿಲ್ಲೆಯನ್ನು ಸ್ಮರಿಸಿದಂತೆಲ್ಲಾ ನೆರೆದಿದ್ದ ಜನರಲ್ಲಿ ಕುತೂಹಲ ಮನೆ ಮಾಡಿತ್ತು. ಅಭಿವೃದ್ಧಿಯ ಬಗ್ಗೆ ಮಾತನಾಡುವ ವೇಳೆ ಕಾರ್ಯಕರ್ತರು ಹರ್ಷಗೊಂಡರು.
ಹರ್ಷೋದ್ಘಾರ: ಸತತ ಒಂದು ಗಂಟೆಯ ಭಾಷಣದ ಬಳಿಕ ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ತಾವು ಸ್ಪರ್ಧೆ ಮಾಡುತ್ತಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಸಮಯದ ಅಭಾವದಿಂದ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರಕ್ಕೆ ಬರುವುದು ಅಪರೂಪವಾಗಬಹುದು. ಈ ಹಿನ್ನೆಲೆಯಲ್ಲಿ ಪ್ರತಿ ಕಾರ್ಯಕರ್ತರೂ ತಾವೇ ಕುಮಾರಸ್ವಾಮಿ ಎಂದು ತಮ್ಮ ಪರ ಮತಯಾಚನೆ ಮಾಡುವಂತೆ ಮನವಿ ಮಾಡಿದರು. ಆಗ ಜನರ ಹರ್ಷೋದ್ಘಾರ ಮಾಡಿದರು.
ಮಂಗಳವಾರ ನಡೆದ ಕುಮಾರ ಪರ್ವ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಜನಸಾಗರವೇ ಹರಿದು ಬಂದಿತು. ವೇದಿಕೆ ಬಳಿ 50 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರೆ, ಇತ್ತ ಕುಮಾರಸ್ವಾಮಿ ಅವರನ್ನು ತಾಲೂಕಿನ ಕೆಂಗಲ್‌ನಿಂದ ಕರೆತಂದ ಜನಸಾಗರವು ವೇದಿಕೆಗೆ ಬಂದ ಕ್ಷಣ ನಿಜಕ್ಕೂ ಜನಸಾಗರದಲ್ಲೇ ಸಮಾವೇಶ ತುಂಬಿತ್ತು. ಸಮಾವೇಶದಲ್ಲಿಯೂ 70 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡರು.
6 ಕಿ.ಮೀ. ಮೆರವಣಿಗೆ: ಬೆಳಗ್ಗೆ 11 ಗಂಟೆಗೆ ಆಯೋಜಿಸಿದ್ದ ಸಮಾವೇಶಕ್ಕೆ ತಾಲೂಕಿನ ಕೆಂಗಲ್ ಬಳಿ 12 ಗಂಟೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್‌ಡಿ.ಕುಮಾರಸ್ವಾಮಿ ಅವರು ಕೆಂಗಲ್ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ಬೈಕ್ ರ್ಯಾಲಿಯೊಂದಿಗೆ ಮೆರವಣಿಗೆ ಹೊರಟರು. ಸತತ 6 ಕಿ.ಮೀ. ದೂರದ 4 ಗಂಟೆಗಳ ಮೆರವಣಿಗೆಯ ನಂತರ ಸಂಜೆ 4 ಗಂಟೆಗೆ ವೇದಿಕೆ ಏರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ದುರಾಡಳಿತದಿಂದ ಜನತೆ ಬಳಿಲಿದ್ದಾರೆ. ನನಗೆ ಅನಾರೋಗ್ಯದ ಸಮಸ್ಯೆ ಇದೆ. ವೈದ್ಯರ ಸಲಹೆಗಳನ್ನು ಧಿಕ್ಕರಿಸಿ ನಾನು ರಾಜ್ಯದ ಜನತೆಯ ಹಿತ ಕಾಯಲು ಶ್ರಮಿಸುತ್ತಿದ್ದೇನೆ. ನನಗೆ ಒಂದು ಅವಕಾಶ ನೀಡಿ.
ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ
ಆಗ ಅನುಭವದ ಕೊರತೆ ಇತ್ತು ತಾವು 20 ತಿಂಗಳ ಅವಧಿಯ ಮುಖ್ಯಮಂತ್ರಿ ಅಧಿಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ
ಮಾಡಿದ್ದೇನೆ. ಆದರೂ ಆಗ ನನಗೆ ರಾಜಕೀಯ ರಂಗದ ಅನುಭವ ಇರಲಿಲ್ಲ. ಆದರೆ ಇಂದು ರಾಜಕೀಯ ರಂಗವನ್ನು ಕರಗತ ಮಾಡಿಕೊಂಡಿದ್ದೇನೆ. ಕಳೆದ 11 ವರ್ಷಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳ ತಮ್ಮ ದುರಾಡಳಿತದಿಂದ ರಾಜ್ಯದ ಜನತೆಯ ಜೊತೆಗೆ ಚೆಲ್ಲಾಟ ಆಡಿದ್ದಾರೆ. ಇಂದು ರಾಜ್ಯದ ಜನತೆಗೆ ಒಳಿತು ಮಾಡಲು ಶ್ರಮಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದ್ದೇನೆ. ನನಗೆ ರಾಜ್ಯದ ಜನತೆ ಒಮ್ಮೆ ಅವಕಾಶ ನೀಡುವಂತೆ ಕುಮಾರಸ್ವಾಮಿ ಮನವಿ ಮಾಡಿದರು.
ಬ್ಯಾರೇಜ್ ದೇವೇಗೌಡರ ಕೊಡುಗೆ ಚನ್ನಪಟ್ಟಣ ತಾಲೂಕಿನ ನೀರಾವರಿ ಭಗೀರಥ ಎಂದು ಸ್ವಯಂಘೋಷಣೆ ಮಾಡಿಕೊಂಡಿರುವ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್‌ರಿಗೆ ತಾಲೂಕಿನ ನಿಜವಾದ ಇತಿಹಾಸ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರು ಇಗ್ಗಲೂರು ಬ್ಯಾರೇಜ್ ನಿರ್ಮಾಣದಲ್ಲಿ ದೇವೇಗೌಡರ ಕೊಡುಗೆ ಏನೂ ಇಲ್ಲ ಎಂದು ಪ್ರಚಾರ ಮಾಡುತ್ತಿದ್ದಾರೆ. ಆದರೆ 1984ರಲ್ಲಿ ಇಗ್ಗಲೂರೂ ಬ್ಯಾರೇಜ್‌ಗೆ ಹೊರ ರೂಪದೊಂದಿಗೆ ಮರುಜೀವ ನೀಡಿದ್ದು ದೇವೇಗೌಡ ಎಂಬುದು ಮರೆಯದ ಇತಿಹಾಸ ಎಂದು ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.