ಮೇಲ್ಮನವಿ ಸಲ್ಲಿಸದಿರಲು ಸ್ಮಿತ್, ಬ್ಯಾನ್ಕ್ರಾಫ್ಟ್ ನಿರ್ಧಾರ
Team Udayavani, Apr 5, 2018, 7:15 AM IST
ಸಿಡ್ನಿ: ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದು ಕಠಿಣ ಶಿಕ್ಷೆಗೆ ಗುರಿಯಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಹಾಗೂ ಬ್ಯಾನ್ಕ್ರಾಫ್ಟ್ ನಿಷೇಧದ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ನಿರ್ಧರಿಸಿದ್ದಾರೆ.
ತಂಡದ ನಾಯಕನಾಗಿ ಆಗಿರುವ ತಪ್ಪಿಗೆ ಪೂರ್ಣ ಜವಾಬ್ದಾರನಾಗಿರುತ್ತೇನೆ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ ಹೊರಡಿಸಿರುವ ಶಿಕ್ಷೆಯ ಪ್ರಮಾಣದ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ. ನನಗೆ ವಿಧಿಸಿರುವ ಶಿಕ್ಷೆಯನ್ನು ಅನುಭವಿಸಲು ಸಿದ್ಧನಾಗಿದ್ದೇನೆ ಎಂದು ಸ್ಟೀವನ್ ಸ್ಮಿತ್ ಟ್ವೀಟರ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಪ್ರಕರಣದ ಕೇಂದ್ರ ಬಿಂದುವಾಗಿದ್ದ ಕ್ಯಾಮರೂನ್ ಬ್ಯಾನ್ಕ್ರಾಫ್ಟ್ ಕೂಡ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಶಿಕ್ಷೆ ಅನುಭವಿಸುವುದಾಗಿ ಟ್ವೀಟರ್ನಲ್ಲಿ ಹೇಳಿಕೊಂಡಿದ್ದಾರೆ. ಆದರೆ ಡೇವಿಡ್ ವಾರ್ನರ್ ಈ ಕುರಿತಂತೆ ಇನ್ನು ಪ್ರತಿಕ್ರಿಯೆ ನೀಡಿಲ್ಲ.
ಕೆಲ ದಿನಗಳ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಬ್ಯಾನ್ಕ್ರಾಫ್ಟ್ ಚೆಂಡು ವಿರೂಪಗೊಳಿಸಿ ಸಿಕ್ಕಿಬಿದ್ದಿದ್ದರು. ನಾಯಕನ ಅರಿವಿಗೆ ಬಂದಿದ್ದರೂ ಚೆಂಡು ವಿರೂಪಗೊಳಿಸುವುದನ್ನು ಸ್ಮಿತ್ ತಡೆಯಲಿಲ್ಲ. ಹೀಗಾಗಿ ಸ್ಮಿತ್ , ಉಪನಾಯಕ ವಾರ್ನರ್ಗೆ 12 ತಿಂಗಳು ನಿಷೇಧ ಹಾಗೂ ಬ್ಯಾನ್ಕ್ರಾಫ್ಟ್ಗೆ 9 ತಿಂಗಳು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.