ಅವರು ಕಾರಲ್ಲಿ ಬಂದರೆ, ಇವರು ಎತ್ತಿನಗಾಡಿ ಏರಿದರು!


Team Udayavani, Apr 5, 2018, 7:15 AM IST

uppooru-jayaprakash-shetty.jpg

ಬ್ರಹ್ಮಾವರ: ಗ್ರಾಮ ಪಂಚಾಯತ್‌, ತಾ.ಪಂ., ಜಿ.ಪಂ. ಸದಸ್ಯರಾಗಿ, ಪಕ್ಷಗಳ ವಿವಿಧ ಹುದ್ದೆಗಳನ್ನು ಅಲಂಕರಿಸಿ ಶಾಸಕ ರಾಗುವುದು ಸಾಮಾನ್ಯ.  ಆದರೆ ಸ್ವತಂತ್ರ ಅಭ್ಯರ್ಥಿಯಾಗಿ ನೇರವಾಗಿ ಶಾಸಕರಾಗಿ ಆಯ್ಕೆಯಾದ ಕೀರ್ತಿ ಉಪ್ಪೂರು ಜಯಪ್ರಕಾಶ ಶೆಟ್ಟಿ ಅವರಿಗೆ ಸಲ್ಲುತ್ತದೆ. 32ನೇ ವಯಸ್ಸಿನಲ್ಲಿ ಶಾಸನ ಸಭೆಗೆ ಆಯ್ಕೆ ಯಾಗಿದ್ದರು ಎನ್ನುವುದು ಇನ್ನೊಂದು ವಿಶೇಷ. ಜಯಪ್ರಕಾಶ ಶೆಟ್ಟಿ ಅವರು 1967ರಿಂದ 71ರ ತನಕ ಬ್ರಹ್ಮಾವರದ ಶಾಸಕರಾಗಿದ್ದರು. ವೀರೇಂದ್ರ ಪಾಟೀಲ್‌ ಆಗ ಮುಖ್ಯಮಂತ್ರಿಯಾಗಿದ್ದರು. 
 
ಜಯಪ್ರಕಾಶ ಶೆಟ್ಟಿ ಅವರ ಅಂದಿನ ದಿನಗಳನ್ನು ಸಹೋದರಿ ಸಬಿತಾ ಆರ್‌. ಹೆಗ್ಡೆ ಹೀಗೆ ನೆನಪಿಸಿಕೊಂಡಿದ್ದಾರೆ: ಜಯ ಪ್ರಕಾಶ ಅವರು ಉಡುಪಿ ಎಂಜಿಎಂ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡು ವಾಗಲೇ ವಿಭಿನ್ನವಾಗಿ ಗುರುತಿಸಿಕೊಂಡ ವರು. ಶ್ರೀಮಂತರೆಲ್ಲ ಕಾರಿನಲ್ಲಿ ಬರು ತ್ತಿದ್ದಾಗ ಇವರು ಎತ್ತಿನಗಾಡಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ಮಳೆಗಾಲ ದಲ್ಲಿ ಓಲೆ ಕೊಡೆಯೊಂದಿಗೆ ಕಾಲೇಜಿಗೆ ತೆರಳಿ ಎಲ್ಲರ ಗಮನ ಸೆಳೆಯುತ್ತಿದ್ದರು. ಪ್ರತಿ ವಿಚಾರದಲ್ಲೂ ಧೈರ್ಯದಿಂದ ವಿಭಿನ್ನ ವಾಗಿ ಮುನ್ನಡೆಯುವ ಗುಣ ಹೊಂದಿದ್ದ ಅವರಲ್ಲಿ ಸಣ್ಣಪುಟ್ಟ ಕೀಟಲೆಗಳಿಗೇನೂ ಕಡಿಮೆ ಇರಲಿಲ್ಲ. ಪರಿಣಾಮ ದ್ವಿತೀಯ ವರ್ಷದಲ್ಲೇ ಟಿ.ಸಿ. ದೊರೆಯಿತು! ಮಂಗಳೂರು ವಿ.ವಿ.  ಕಾಲೇಜಿನಲ್ಲಿ ಪದವಿ ಪೂರೈಸಿದರು. ಬಳಿಕ ಉಡುಪಿ ಯಲ್ಲಿ ಎಲ್‌ಎಲ್‌ಬಿ ಮುಗಿಸಿ ವೃತ್ತಿಯಲ್ಲಿ ತೊಡಗಿದರು.

ಹಠಾತ್‌ ಶಾಸಕ ಅಭ್ಯರ್ಥಿ 
ಅದುವರೆಗೆ ರಾಜಕೀಯ ಕಡೆ ಮುಖ ಮಾಡಿರದ ಶೆಟ್ಟಿ ಅವರು  1967ರಲ್ಲಿ ವಿಧಾನ ಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಿಂತರು. ಕಾಲೇಜು ದಿನಗಳಲ್ಲಿ ಅವರ ಚಟುವಟಿಕೆಗಳನ್ನು ಗಮನಿಸಿದ್ದ ಯುವ ಜನತೆ ಹುಚ್ಚೆದ್ದರು. ಪ್ರಬಲ ಅಭ್ಯರ್ಥಿ ಕಾಂಗ್ರೆಸ್‌ನ ಎಸ್‌.ಡಿ. ಪಿಂಟೊ ಅವರನ್ನು ಮಣಿಸಿದರು. ಅದೂ ರಾಜ್ಯದ 2ನೇ ಗರಿಷ್ಠ ಅಂತರದಲ್ಲಿ (12,500ಕ್ಕೂ ಮಿಕ್ಕಿದ ಮತ) ವಿಜಯಿಯಾದರು.

ಗೆದ್ದ ಮೇಲೆ ಉತ್ತಮ ಸೇವೆ ನೀಡಿದ್ದರು. ಬಳಿಕ ಸ್ವತಂತ್ರ ಪಕ್ಷವನ್ನು ಸೇರಿದರು. ಆದರೆ ಹೊಲಸು ರಾಜಕೀಯ ವ್ಯವಸ್ಥೆಯಿಂದ ಬೇಸತ್ತು ಮುಂದೆ ಚುನಾವಣೆಗಳಿಂದ ಹಿಂದೆ ಸರಿದರು ಎಂದು ಸಹೋದರಿ ಸಬಿತಾ ಆರ್‌. ಹೆಗ್ಡೆ ಸ್ಮರಿಸುತ್ತಾರೆ.

ಕೂಡು ಕುಟುಂಬದ ಅಂದಿನ ಕಾಲದಲ್ಲಿ ಶೆಟ್ಟಿ ಅವರು ರಾಜಕೀಯ ಹಾಗೂ ಮನೆ ಯನ್ನು ಬೇರೆ ಬೇರೆಯಾಗಿ ಪರಿಗಣಿಸಿ ಮನೆಯ ಸದಸ್ಯರೊಂದಿಗೆ ಬೆರೆಯುತ್ತಿದ್ದರು ಎನ್ನುತ್ತಾರೆ ಸಬಿತಾ ಆರ್‌. ಹೆಗ್ಡೆ. ಜಯಪ್ರಕಾಶ ಶೆಟ್ಟಿ ಅವರು 2015ರಲ್ಲಿ ನಿಧನ ಹೊಂದಿದರು.

– ಪ್ರವೀಣ್‌ ಮುದ್ದೂರು

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.