ನೀತಿ ಸಂಹಿತೆ ಜಾರಿ ಬಳಿಕ ಕೊಡಗಿನಲ್ಲಿ 1.23 ಲ.ರೂ. ನಗದು ವಶ 


Team Udayavani, Apr 5, 2018, 7:00 AM IST

Z-DC-ELECTION-1.jpg

ಮಡಿಕೇರಿ: ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಆನೆಚೌಕೂರು ಚೆಕ್‌ ಪೋಸ್ಟ್‌ ಬಳಿ 1.23 ಲಕ್ಷ ರೂ ನಗದು ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಇದುವರೆಗೆ 16 ಲೀಟರ್‌ ಲಿಕ್ಕರ್‌ ವಶಪಡಿಸಿಕೊಂಡು ಎಫ್ಐಆರ್‌ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಮಾಹಿತಿ ನೀಡಿದ್ದಾರೆ.  
 
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಚುನಾವಣೆ ಸಂಬಂಧ ಯಾರೂ ಸಹ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಬಾರದು. ಉಲ್ಲಂಘಿಸಿದರೆ ಚುನಾವಣಾ ಆಯೋಗದ ನಿರ್ದೇಶ ದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶ್ರೀವಿದ್ಯಾ ಅವರು ತಿಳಿಸಿದರು.

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಚುನಾವಣಾ ಆಯೋಗದ ನಿರ್ದೇಶನದಂತೆ ಇದೇ ಏಪ್ರಿಲ್‌8 ರಂದು ಮಿಂಚಿನ ನೋಂದಣಿ ಹೆಸರಿನಲ್ಲಿ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.  ಅಂದು  ಜಿಲ್ಲೆಯ 530 ಮತಗಟ್ಟೆಗಳಲ್ಲಿ ಬೂತ್‌ ಮಟ್ಟದ ಅಧಿಕಾರಿಗಳು ಹಾಜರಿದ್ದು, ಸೇರ್ಪಡೆಗೆ ಸಂಬಂಧಿಸಿದ ನಮೂನೆ-6ನ್ನು ಸ್ವೀಕರಿಸಲಿ ದ್ದಾರೆ. ಅಲ್ಲದೇ ಅದೇ ದಿನ ತಾಲ್ಲೂಕು ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ ಯಲ್ಲಿಯು ಸಹ ಅರ್ಜಿಗಳನ್ನು ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಕೊಳ್ಳ ಬಹುದು ಎಂದರು.

ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪ ವಿಭಾಗಾಧಿಕಾರಿ ರಮೇಶ್‌ ಪಿ.ಕೊನರೆಡ್ಡಿ, ಸಹಾಯಕ ಚುನಾವಣಾಧಿಕಾರಿಗಳಾಗಿ ಎನ್‌.ಕೆ. ಶಾರಾದಾಂಬಾ  ಮತ್ತು ವಿ.ಎನ್‌.ಬಾಡಕರ್‌. ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ಉಪ ನಿರ್ದೇಶಕ ಕೆ.ರಾಜು, ಸಹಾಯಕ ಚುನಾವಣಾಧಿಕಾರಿ ಗಳಾಗಿ ಆರ್‌.ಗೋವಿಂದ ರಾಜು ಮತ್ತು ಎನ್‌.ಕೆ.ಶಾರಾದಾಂಬಾ ಅವರನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದರಿ ನೀತಿ ಸಂಹಿತೆ ಬಗ್ಗೆ ದೂರು ಸ್ವೀಕರಿಸಲು 24×7 ಚುನಾವಣಾ ನಿಯಂತ್ರಣ ಕೊಠಡಿಯನ್ನು ತೆರೆಯ ಲಾಗಿದ್ದು, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುವ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ದೂರುಗಳನ್ನು ನೀಡಬಹುದು, ದೂರವಾಣಿ ಸಂಖ್ಯೆಗಳು 08272- 224300, 08272- 222700, 08272- 224900 ಮತ್ತು 08272- 223700 ಹಾಗೆಯೇ ಮಾದರಿ ನೀತಿ ಸಂಹಿತೆ ಬಗ್ಗೆ ದೂರು ನೀಡಲು 8277365932 ದೂರವಾಣಿಗೆ ಸಂದೇಶವನ್ನು ಕಳುಹಿಸಬಹುದಾಗಿದೆ. 

ಮಾದರಿ ನೀತಿ ಸಂಹಿತೆ ಬಗ್ಗೆ ದೂರು ಸ್ವೀಕರಿಸಲು  ಚುನಾವಣಾ ನಿಯಂತ್ರಣ ಕೊಠಡಿಯನ್ನು 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಯಲ್ಲಿ ತೆರೆಯಲಾಗಿದ್ದು, ಮಡಿಕೇರಿ ವಿಧಾನಸಭಾ ಚುನಾ ವಣೆಗೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿ ಯವರ ಕಚೇರಿ 08272-225400 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿರಾಜಪೇಟೆ ತಾಲ್ಲೂಕು ಕಚೇರಿ 08274-256328 ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ.ಸಿಇಒ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್‌ ಕುಮಾರ್‌ ಅವರು ಹಾಜರಿದ್ದರು. 

ಗುರುತಿನ ಚೀಟಿ ಇದ್ದರೆ ಸಾಲದು 
ಮತದಾರರ ಗುರುತಿನ ಚೀಟಿ ಇದ್ದರೆ ಸಾಲದು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಎಲ್ಲಾ ನಾಗರಿಕರು ತಮ್ಮ ಬೂತ್‌ ಮಟ್ಟದ ಅಧಿಕಾರಿಗಳನ್ನು, ತಾಲೂಕು ಕಚೇರಿಯನ್ನು ಮತ್ತು ಉಪ ವಿಭಾಗಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಖಾತ್ರಿ ಪಡಿಸಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.  ಮತ ದಾರರು ಹೆಸರು ಗಳನ್ನು ನೋಂದಣಿ ಮಾಡಲು ಎಪ್ರಿಲ್‌ 14 ಕೊನೆಯ ದಿನಾಂಕ ವಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳುವಂತೆ ಅವರು ಕೋರಿದರು.  

ಎ. 7: ಮತದಾನ ಜಾಗೃತಿ ಮ್ಯಾರಥಾನ್‌  
ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತದಾರರನ್ನು ಪ್ರರೇಪಿಸಲು ಮ್ಯಾರಥಾನ್‌ ಸ್ಫರ್ಧೆಯು ಇದೇ ಏ.7 ರಂದು ಬೆಳಗ್ಗೆ 9 ಗಂಟೆಗೆ ನಗರದ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಗೊಳ್ಳಲಿದೆ ಎಂದು ಜಿ.ಪಂ. ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರ ಅವರು ತಿಳಿಸಿದರು. 
            
ಮ್ಯಾರಥಾನ್‌ನಲ್ಲಿ 19 ರಿಂದ 40 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು,41 ರಿಂದ 60 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು ಹಾಗೂ 60 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು ಈ ಗುಂಪುಗಳಾಗಿ ವಿಂಗಡಿಸಲಾಗಿದೆ.ಮ್ಯಾರಥಾನ್‌ ಸ್ಫರ್ಧೆಯಲ್ಲಿ ವಿಜೇತರಿಗೆ ವಯೋಮಾನವಾರು ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ವಿತರಿಸಲಾಗುವುದು. ಆಸಕ್ತರು ಏಪ್ರಿಲ್‌ 6 ರೊಳಗೆ ತಮ್ಮ ಹೆಸರುಗಳನ್ನು ಬಾಲಕಿಯರ ಬಾಲಮಂದಿರ, ಕೋಟೆ ಆವರಣ (ಹಳೇ ಜೈಲು ಕಟ್ಟಡ), ಮಡಿಕೇರಿ (ದೂರವಾಣಿ: 08272 220126) ಇಲ್ಲಿ ನೋಂದಾಯಿಸಬಹುದಾಗಿದೆ .

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.