ಕೊಕ್ಕಡ ಯುವಕರ ಸಮಯೋಚಿತ ಕಾರ್ಯ


Team Udayavani, Apr 5, 2018, 12:22 PM IST

blore-5.jpg

ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಆಗಮಿಸಿ ಪ್ರಾಣ ಕಳೆದುಕೊಳ್ಳುವ ಯೋಚನೆಯಲ್ಲಿದ್ದ ಬೆಂಗಳೂರಿನ ಮಹಿಳೆ ಹಾಗೂ ಮಕ್ಕಳನ್ನು ಕೊಕ್ಕಡದ ಯುವಕರು ಸಾವಿನ ದವಡೆಯಿಂದ ಪಾರು ಮಾಡಿ ಮರಳಿ ಮನೆಗೆ ಸೇರುವಂತೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಕೊಕ್ಕಡದ ಯುವಕರ ಸಮಯೋಚಿತ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೆಚ್ಚುಗೆ ಸೂಚಿಸಿದ್ದಾರೆ.

ಕೊಕ್ಕಡದ ರಫೀಕ್‌ ಬೋಳದಬೈಲು ಹಾಗೂ ಅಝೀಜ್‌ ಬೆಂಗಳೂರಿನಿಂದ ಬಸ್ಸಿನಲ್ಲಿ ಧರ್ಮಸ್ಥಳಕ್ಕೆ ವಾಪಸಾಗುತ್ತಿದ್ದ ವೇಳೆ ತಮ್ಮ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಹಾಗೂ ಮಕ್ಕಳು ಅಳುತ್ತಾ ಇರುವುದನ್ನು ಸೂಕ್ಷ್ಮ ವಾಗಿ ಗಮನಿಸಿದ್ದರು. ಮಹಿಳೆ ಯಾರೊಂದಿಗೋ ಮೊಬೈಲ್‌ನಲ್ಲಿ ಅಳುತ್ತಾ ಮಾತನಾಡಿ, ತಾನು ಮಕ್ಕಳೊಂದಿಗೆ ಸಾಯಲು ಹೊರಟಿದ್ದಾಗಿ ಹೇಳುತ್ತಿದ್ದುದನ್ನು ಗಮನಿಸಿದ ರಫಿಕ್‌ ಹಾಗೂ ಅಝೀಜ್‌ ಮಹಿಳೆಯನ್ನು ಮಾತನಾಡಿಸಿದರು.

ಆಗ ಆಕೆ ತಾನು ರಾಮನಗರ ನಿವಾಸಿ ಚಂದ್ರಕಲಾ, ತನ್ನ ಮಕ್ಕಳಾದ ಭಾವನಾ ಹಾಗೂ ವಿದ್ಯಾಶ್ರೀ ಜತೆಗೆ ಗಂಡನ ಹೆತ್ತವರ ಕಿರುಕುಳ ತಡೆಯಲಾರದೆ ಯಾರಲ್ಲೂ ಹೇಳದೆ ಬಂದಿರುವುದಾಗಿ ತಿಳಿಸಿದರು. ಕೊಟ್ಟಿಗೆಹಾರ ಬಳಿ ಬಸ್ಸಿನಿಂದ ಇಳಿದ ಮಹಿಳೆಯನ್ನು ಹಿಂಬಾಲಿಸಿ ಗಮನಿಸುತ್ತಿದ್ದ ಈ ಯುವಕರಿಗೆ ಮಹಿಳೆಯಲ್ಲಿ ಉಳಿದಿರುವ ಹಣ ಕೇವಲ 20 ರೂ. ಎಂದು ತಿಳಿದಾಗ ಉಪಾಹಾರ ಹಾಗೂ ನೀರು ತೆಗೆದುಕೊಟ್ಟಿದ್ದಾರೆ. ಬಳಿಕ ಮಹಿಳೆಯ ಪತಿಯ ಮೊಬೈಲ್‌ ಸಂಖ್ಯೆ ಪಡೆದುಕೊಂಡು ಕರೆ ಮಾಡಿದರು. ಮಹಿಳೆಯ ಪತಿ ಕೂಡಲೇ ಬೆಂಗಳೂರಿನಿಂದ ಹೊರಟು ಬರುವುದಾಗಿ ತಿಳಿಸಿದ್ದು, ಆ ತನಕ ಪತ್ನಿ ಮತ್ತು ಮಕ್ಕಳನ್ನು ರಕ್ಷಿಸಲು ಮನವಿ ಮಾಡಿಕೊಂಡಿದ್ದರು.

ಮಾಧ್ಯಮ ಸಂಪರ್ಕ: ಬೆಳ್ತಂಗಡಿ ತಾಲೂಕು ಕೋಮು ಸೂಕ್ಷ್ಮ ಪ್ರದೇಶವಾದ್ದರಿಂದ ಯುವಕರು ಮಹಿಳೆ ಮತ್ತು ಮಕ್ಕಳೊಂದಿಗೆ ಧರ್ಮಸ್ಥಳಕ್ಕೆ ತೆರಳಿದರು. ತಪ್ಪು ತಿಳುವಳಿಕೆಯಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಬಾರದು ಎನ್ನುವ ಮುಂಜಾಗ್ರತೆಯಿಂದ ಕೊಕ್ಕಡದ ಮಾಧ್ಯಮ ವರದಿಗಾರರನ್ನು ಸಂಪರ್ಕಿಸಿದರು.

ಮಾಧ್ಯಮ ವರದಿಗಾರರು ಮಂಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಮಾಹಿತಿ ನೀಡಿದರು. ಮಹಿಳೆ ಮತ್ತು ಮಕ್ಕಳೊಂ ದಿಗೆ ಯುವಕರು ಬಸ್ಸಿನಿಂದ ಇಳಿಯುವ ಹೊತ್ತಿಗೆ ಪೊಲೀಸ್‌ ವಾಹನ ಸಿದ್ಧವಾಗಿದ್ದು, ಅವರನ್ನು ಪೊಲೀಸ್‌ ಸುಪರ್ದಿಗೆ ಒಪ್ಪಿಸಲಾಯಿತು. 

ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಬಂದ ಪತಿಯ ಜತೆಯಲ್ಲಿ ಮಹಿಳೆ ಹಾಗೂ ಮಕ್ಕಳನ್ನು ಕಳುಹಿಸಿಕೊಡಲಾಗಿದೆ. ಮಕ್ಕಳೊಂದಿಗೆ ಸಾಯಲು ಹೋಗುತ್ತಿದ್ದೇನೆ ಅನ್ನುವ ಮಹಿಳೆಯ ಮಾತುಗಳನ್ನು ಕೇಳಿಸಿಕೊಂಡು ಸಮಯೋಚಿತವಾಗಿ ವರ್ತಿಸಿ ಮೂರು
ಜೀವಗಳನ್ನು ಉಳಿಸಿದ ಯುವಕರ ಕಾರ್ಯಕ್ಕೆ ಎಸ್‌ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಮನೆಯಲ್ಲಿ ಹಿಂದಿನ ರಾತ್ರಿ ನಡೆದ ಘಟನೆಯಿಂದ ನನ್ನ ಹೆಂಡತಿ, ಮಕ್ಕಳನ್ನು ಕರೆದುಕೊಂಡು ಹೋಗಿದ್ದು, ಎಲ್ಲಿ ಹೋಗಿದ್ದಾರೆ ಅನ್ನುವ ಮಾಹಿತಿಯೇ ನಮಗೆ ಇರಲಿಲ್ಲ. ಕೊಕ್ಕಡದ ಯುವಕರ ಸಾಂತ್ವನದಿಂದ ಹೆಂಡತಿ ಮಕ್ಕಳನ್ನು ಮರಳಿ ಪಡೆಯುವಂತಾಯಿತು. ರಕ್ಷಿಸಿದ ಯುವಕರಿಗೆ ಒಳಿತಾಗಲಿ. 
ಶಿವಾಜಿ ರಾವ್‌, ಮಹಿಳೆಯ ಪತಿ

ಗುರುಮೂರ್ತಿ ಎಸ್‌. ಕೊಕ್ಕಡ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.