ರಾಜಸ್ಥಾನದಲ್ಲಿ ಅಂಬೇಡ್ಕರ್, ಗಾಂಧೀಜಿ ಪ್ರತಿಮೆ ಧ್ವಂಸ; ಮೂವರ ಸೆರೆ
Team Udayavani, Apr 5, 2018, 5:06 PM IST
ಅಖ್‌ರೋಲ್ : ರಾಜಸ್ಥಾನದ ಅಖ್‌ರೋಲ್ ನಲ್ಲಿ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಬುಧವಾರ ತಡರಾತ್ರಿ ಈ ದುಷ್ಕೃತ್ಯ ನಡೆದಿದೆ.
ರಾಜಸ್ಥಾನದ ರಾಜಾ ಸಮಂದ್ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ಅವರ ಎದೆಮಟ್ಟದ ಪ್ರತಿಮೆಯನ್ನು ಅಪವಿತ್ರಗೊಳಿಸಲಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಇಂದು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ. ಬಂಧಿತರನ್ನು ಕುಲದೀಪ್ ವಾಲ್ಮೀಕಿ, ಅರವಿಂದ ವಾಲ್ಮೀಕಿ ಮತ್ತು ಅಂಕಿತ್ ಗೆಹಲೋತ್ ಎಂದು ಗುರುತಿಸಲಾಗಿದೆ.
ಇವರು ಕಳೆದ ಸೋಮವಾರ ನಾಥದ್ವಾರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಲಿಮಾಂಗ್ರಾ ಕಾಲನಿಯಲ್ಲಿನ ಪ್ರತಿಮೆಯನ್ನು ಧ್ವಂಸಗೊಳಿಸಿದ್ದರು. ಬಂಧಿತರನ್ನು ಇಂದು ಗುರುವಾರ ಕೋರ್ಟಿಗೆ ಹಾಜರಪಡಿಸಲಾಯಿತು.
ಮೂವರೂ ಬಂಧಿತರು ವಿದ್ಯಾರ್ಥಿಗಳಾಗಿದ್ದು ಇವರು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ತಮ್ಮ ಸಹಪಾಠಿಗಳೊಂದಿಗೆ ಜಗಳ ಮಾಡಿದ ಬಳಿಕ ಈ ದುಷ್ಕೃತ್ಯ ಎಸಗಿರುವುದಾಗಿ ತನಿಖೆಯಿಂದ ಗೊತ್ತಾಗಿದೆ ಎಂದು ಸಹಾಯಕ ಎಸ್‌ಐ ಶುಕಲಾಲ್ ಪಾಂಚೋಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.