ಸುಪ್ರೀಂ ತೀರ್ಪು ರಾಜಕೀಯ ಪ್ರೇರಿತ


Team Udayavani, Apr 6, 2018, 12:20 PM IST

tirpu.jpg

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ನೀಡಿರುವ ತೀರ್ಪು ರಾಜಕೀಯ ಪ್ರೇರಿತ. ಇದರ ವಿರುದ್ಧ ಸೇಡು ತೀರಿಸಿಕೊಳ್ಳಲು ಇದು ಸಕಾಲವಾಗಿದ್ದು, ರಾಜ್ಯ ಚುನಾವಣಾ ಪ್ರಚಾರಕ್ಕೆ ಬರುವ ಬಿಜೆಪಿ ನಾಯಕರ ವಿರುದ್ಧ ಜನತೆ ತಿರುಗಿಬೀಳಬೇಕು ಎಂದು ದಲಿತ ಮುಖಂಡ ಮಾವಳ್ಳಿ ಶಂಕರ್‌ ಹೇಳಿದ್ದಾರೆ.

ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು (ಯುವಿಸಿಇ) ಹಳೆಯ ವಿದ್ಯಾರ್ಥಿಗಳ ಸಂಘದ ಸಭಾಂಗಣದಲ್ಲಿ ಗುರುವಾರ ಬೆಂಗಳೂರು ವಕೀಲರ ಸಮುದಾಯ ಹಮ್ಮಿಕೊಂಡಿದ್ದ “ಎಸ್ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ-1989ರ ಬಗ್ಗೆ ಸುಪ್ರೀಂ ಕೋರ್ಟ್‌ನ ವಿವಾದಾತ್ಮಕ ತೀರ್ಪು’ ಕುರಿತ ಸಂವಾದದಲ್ಲಿ ಮಾತನಾಡಿದರು.

ಈಚೆಗೆ ಮೈಸೂರಿನಲ್ಲಿ ಅಮಿತ್‌ ಶಾ ವಿರುದ್ಧ ದಲಿತರು ದನಿ ಎತ್ತುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಆದರೆ, ಈ ಆಕ್ರಮಣ ಮತ್ತಷ್ಟು ತೀವ್ರವಾಗಬೇಕು. ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು, ದಲಿತರ ಕಾಯ್ದೆ ದುರ್ಬಲಗೊಳಿಸುತ್ತಿರುವ ಈ ಇಬ್ಬರೂ ನಾಯಕರಿಗೆ (ನರೇಂದ್ರ ಮೋದಿ ಮತ್ತು ಅಮಿತ್‌ ಶಾ) ಖಡಕ್‌ ಎಚ್ಚರಿಕೆ ನೀಡಬೇಕು ಎಂದರು. 

ಟಾರ್ಗೆಟ್‌ ಮಾಡಿ: ಪ್ರಸ್ತುತ ರಾಜ್ಯ ವಿಧಾನಸಭಾ ಚುನಾವಣೆ ಮತ್ತು ಬರುವ ವರ್ಷ ಲೋಕಸಭಾ ಚುನಾವಣೆ ಇದೆ. ಇಂತಹ ಸಂದರ್ಭದಲ್ಲಿ ಈ ತೀರ್ಪು ಹೊರಬಿದ್ದಿದೆ. ಈ ಮೂಲಕ ಮೇಲ್ಜಾತಿಯ ವೋಟುಗಳನ್ನು ಒಗ್ಗೂಡಿಸಿ, ಕೆಳಜಾತಿಗಳನ್ನು ಒಡೆಯುವುದು ಇದರ ಹುನ್ನಾರವಾಗಿದೆ ಹೀಗಾಗಿ ಚುನಾವಣೆ ಪ್ರಚಾರಕ್ಕೆ ಬರುವ ಇಬ್ಬರೂ ನಾಯಕರನ್ನು ಟಾರ್ಗೆಟ್‌ ಮಾಡಬೇಕು ಎಂದರು.

ಇದಕ್ಕೂ ಮುನ್ನ ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಮುನಿಸ್ವಾಮಿ ಮಾತನಾಡಿ, ಬಿಜೆಪಿಯ ಆಂತರ್ಯ ಈ ತೀರ್ಪಿನಲ್ಲಿ ಎದ್ದು ಕಾಣುತ್ತಿದೆ. ಆಗಾಗ್ಗೆ ಬಿಜೆಪಿಯು ಇಂತಹ “ಟೆಸ್ಟ್‌ ಡೋಸ್‌’ ಕೊಡುತ್ತಲೇ ಇರುತ್ತದೆ. ಆದರೆ, ನಾವು ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಆಳುವವರ ಮನಃಸ್ಥಿತಿ ಬಯಲು: ಪುರುಷೋತ್ತಮ್‌ ದಾಸ್‌ ಮಾತನಾಡಿ, ಎಸ್ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ತೀರ್ಪಿನಲ್ಲಿ ನಮ್ಮನ್ನು ಆಳುತ್ತಿರುವವರ ಮನಃಸ್ಥಿತಿಯನ್ನು ಬಯಲುಗೊಳಿಸಿದೆ. ಇದರ ವಿರುದ್ಧ ಹೋರಾಡಬೇಕಾದರೆ, ನಮ್ಮದೂ ಒಂದು “ಗೌಪ್ಯ ಕಾರ್ಯಸೂಚಿ’ ಬೇಕು ಎಂದು ಹೇಳಿದರು.

ವಕೀಲ ಬಿ.ಟಿ. ವೆಂಕಟೇಶ್‌, ಪೀಪಲ್ಸ್‌ ವಾರ್ಚ್‌ ನಿರ್ದೇಶಕ ಹೆನ್ರಿ ತಿಪಾನಿ ಮಾತನಾಡಿದರು. ಅಖೀಲ ಭಾರತ ವಕೀಲರ ಸಂಘದ ನಾರಾಯಣಸ್ವಾಮಿ, ದಲಿತ ಮುಖಂಡ ಮೋಹನ್‌ರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.