![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 6, 2018, 12:20 PM IST
ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಪ್ರಾಸಿಕ್ಯೂಶನ್ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಾಸಿಕ್ಯೂಶನ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ಏಕಸದಸ್ಯ ಪೀಠ, ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರವಿ ಬೆಳಗೆರೆ,
ತಮ್ಮ ಆರೋಗ್ಯ ಸ್ಥಿತಿಯ ಹಳೆಯ ದಾಖಲೆಗಳನ್ನು ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ಪಡೆದುಕೊಂಡಿದ್ದಾರೆ. ಆರೋಗ್ಯ ಸ್ಥಿತಿ ಉತ್ತಮವಾಗಿದ್ದರೂ ನ್ಯಾಯಾಲಯಕ್ಕೆ ಸುಳ್ಳು ಹೇಳಿ ಪಡೆದುಕೊಂಡಿರುವ ಜಾಮೀನು ರದ್ದುಪಡಿಸುವಂತೆ ಸುಬ್ರಹ್ಮಣ್ಯ ಪುರ ಠಾಣೆ ಪೊಲೀಸರ ಪರವಾಗಿ ಪ್ರಾಸಿಕ್ಯೂಶನ್ ಕೋರಿದೆ.
ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಶಶಿಧರ್ ಮುಂಡೇವಾಡಿಗೆ ಸುಪಾರಿ ಕೇಸ್‌ನಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರವಿಬೆಳಗೆರೆಗೆ ಡಿಸೆಂಬರ್ 21ರಂದು ಸೆಷನ್ಸ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ, ಮೊದಲ ಆರೋಪಿ ಶಶಿಧರ್ ಮುಂಡೇವಾಡಿ, ರವಿಬೆಳಗೆರೆ, ಮತ್ತೂಬ್ಬ ಆರೋಪಿ ವಿಜುಬಡಿಗೇರ್ ವಿರುದ್ಧ ಇತ್ತೀಚೆಗೆ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ.
You seem to have an Ad Blocker on.
To continue reading, please turn it off or whitelist Udayavani.