ಕಾವೇರಿ ನೀರು ಸರ್ವಹಣಾ ಮಂಡಳಿ ಬೇಡ

Team Udayavani, Apr 6, 2018, 12:49 PM IST

m3-kaveri-nir.jpg

ಮೈಸೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿರುವ ತಮಿಳುನಾಡು ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆಂದು ಆಗ್ರಹಿಸಿ ಬಂದ್‌ ನಡೆಸುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ತಮಿಳುನಾಡು ಸರ್ಕಾರದ ಕ್ರಮ ಖಂಡನೀಯ. ತಮಿಳುನಾಡಿನ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿದರೆ, ರಾಜ್ಯದ ಜನತೆಗೆ ಮೋಸ ಮಾಡಿದಂತಾಗಲಿದೆ.

ಆದರಿಂದ ಕೇಂದ್ರ ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸೇನಾ ಪಡೆಯ ಅಧ್ಯಕ್ಷ ತೇಜೇಶ್‌ ಲೋಕೇಶ್‌ಗೌಡ, ಸುನೀಲ್‌ ಕುಮಾರ್‌, ಗುರುಮಲ್ಲಪ್ಪ, ತಿಪ್ಪಯ್ಯ, ಶಾಂತರಾಜ ಅರಸ್‌, ಹರೀಶ್‌, ನಂಜುಂಡಸ್ವಾಮಿ ಪಾಲ್ಗೊಂಡಿದ್ದರು.

ತಮಿಳುನಾಡು ಬಂದ್‌ ಖಂಡಿಸಿ ಪ್ರತಿಭಟನೆ
ಚಾಮರಾಜನಗರ:
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ತಮಿಳುನಾಡು ಬಂದ್‌ಗೆ ಕರೆ ನೀಡಿರುವುದನ್ನು ಖಂಡಿಸಿ, ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಚಾಮರಾಜೇಶ್ವರ ಉದ್ಯಾನವನ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಭುವನೇಶ್ವರಿ ವೃತ್ತಕ್ಕೆ ತೆರಳಿ ತಮಿಳುನಾಡು ಸರ್ಕಾರ, ಅಲ್ಲಿನ ರಾಜಕೀಯ ಪಕ್ಷಗಳ ವಿರುದ್ದ ಧಿಕ್ಕಾರ ಕೂಗಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾ ಪಡೆಯ ರಾಜಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡು ಕಾವೇರಿ ನೀರು ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ.

ಅಲ್ಲದೆ, ಸುಪ್ರೀಂಕೋರ್ಟ್‌ ತೀರ್ಪಿಗೆ ಗೌರವ ನೀಡದೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ತಮಿಳುನಾಡು ಬಂದ್‌ಗೆ ಕರೆ ಕೊಟ್ಟಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜಾದ್ಯಂತ ಒಂದು ತಿಂಗಳವರಗೆ ಪ್ರತಿಭಟನೆ ಹಮ್ಮಿಕೊಂಡು ತಮಿಳನಾಡಿಗೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸೇನಾ ಪಡೆಯ ಗೌರವ ಅಧ್ಯಕ್ಷ ಶಾ.ಮುರಳಿ ಮಾತನಾಡಿ, ತಮಿಳುನಾಡು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಬಂದ್‌ಗೆ ಕರೆ ನೀಡಿರುವುದು ನಾಚಿಗೇಡಿನ ಸಂಗತಿಯಾಗಿದೆ. ಕಾವೇರಿ ನೀರು ವಿಚಾರದಲ್ಲಿ ತಮಿಳುನಾಡು ಸರ್ಕಾರ ಬೀದಿಗಿಳಿದು ಪದೇಪದೇ ಕ್ಯಾತೆ ತೆಗೆಯುವ ಪರಿಪಾಠ ಬಿಡಬೇಕು.

ಇಲ್ಲದಿದ್ದರೆ, ಕನ್ನಡಿಗರು ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಕನ್ನಡ ಚಳವಳಿ ಮುಖಂಡರಾದ ಗು.ಪುರುಷೋತ್ತಮ, ಪಣ್ಯದಹುಂಡಿರಾಜು, ನಿಜದ್ವನಿ ಗೋವಿಂದರಾಜು, ಡಾ.ಶಿವರುದ್ರಸ್ವಾಮಿ, ನಟರಾಜು, ರಮೇಶ್‌ಕಾರ್ಮಿಕ್‌, ಮಿಠಾಯಿಲಿಂಗಣ್ಣ, ಸುರೇಶ್‌ನಾಗ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.