ಚುಚ್ಚುಮದ್ದಿಗೆ ಮತ್ತೂಂದು ಹಸುಗೂಸು ಬಲಿ
Team Udayavani, Apr 7, 2018, 6:00 AM IST
ಮಂಡ್ಯ: ಪೆಂಟಾವಲೆಂಟ್ ಚುಚ್ಚುಮದ್ದು ಹಾಕಿಸಿದ ಹೆಣ್ಣು ಶಿಶುವೊಂದು ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ಸೂನಗಹಳ್ಳಿಯಲ್ಲಿ ನಡೆದಿದೆ. ಎರಡು ತಿಂಗಳ ಹಿಂದಷ್ಟೇ ಇದೇ ಚುಚ್ಚುಮದ್ದಿನಿಂದ ಮೂರು ಹಸುಗೂಸು ಸಾವನ್ನಪ್ಪಿದ್ದವು. ಇದೀಗ ಮತ್ತೂಂದು ಶಿಶು ಮೃತಪಟ್ಟಿದ್ದು, ಜಿಲ್ಲೆಯ ಜನರಲ್ಲಿ ಮತ್ತೆ ಚುಚ್ಚುಮದ್ದಿನ ಬಗ್ಗೆ ಆತಂಕ ಹೆಚ್ಚುವಂತೆ ಮಾಡಿದೆ.
ತಾಲೂಕಿನ ಸೂನಗಹಳ್ಳಿಯ ಶಿಲ್ಪಾ ಮತ್ತು ನಂದೀಶ್ ದಂಪತಿಯ ಎರಡೂವರೆ ತಿಂಗಳ ಹೆಣ್ಣು ಶಿಶು ಸಾವನ್ನಪ್ಪಿದೆ. ಶಿಲ್ಪಾ ಜನವರಿ 31ರಂದು ಹೆಣ್ಣು ಶಿಶುವಿಗೆ ಜನ್ಮ ನೀಡಿದ್ದರು. ಮಗುವಿಗೆ ಒಂದೂವರೆ ತಿಂಗಳಿದ್ದಾಗ ಪೆಂಟಾವಲೆಂಟ್ ಚುಚ್ಚುಮದ್ದಿಗೆ ಕರೆತಂದಿದ್ದರು. ಆದರೆ, ಕೆಮ್ಮು ಇದ್ದ ಕಾರಣ ಚುಚ್ಚುಮದ್ದು ಹಾಕುವುದನ್ನು ಮುಂದೂಡಲಾಗಿತ್ತು. ಗುರುವಾರ ಸೂನಗಹಳ್ಳಿಗೆ ಮಗುವಿನೊಂದಿಗೆ ತೆರಳಿದ ಶಿಲ್ಪಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೆಂಟಾವಲೆಂಟ್ ಚುಚ್ಚುಮದ್ದು ಹಾಕಿಸಿದ್ದರು. ಶುಕ್ರವಾರ ಬೆಳಗ್ಗೆ ಮಗುವಿಗೆ ಫಿಟ್ಸ್ ಬಂದಂತಾಗಿದೆ. ಇದರಿಂದ ಹೆದರಿದ ಶಿಲ್ಪಾ ಮಗುವನ್ನು ಮತ್ತೆ ಸೂನಗಹಳ್ಳಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಪರೀಕ್ಷಿಸಿದ ವೈದ್ಯರು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು. ಚಿಕಿತ್ಸೆಗಾಗಿ ಕರೆತರುವ ಸಮಯದಲ್ಲಿ ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.