ಅರುಣಕುಮಾರ ಪಾಟೀಲ ಹಠಾವೋ: ಮುಸ್ತಾಜರ
Team Udayavani, Apr 7, 2018, 11:27 AM IST
ಸೇಡಂ: ಶಾಸಕ ಮಾಲೀಕಯ್ಯ ಗುತ್ತೇದಾರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಭರದಲ್ಲಿ ಆರ್ಯ ಈಡಿಗ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ ಜಿಪಂ ಸದಸ್ಯ ಅರುಣಕುಮಾರ ಪಾಟೀಲ ಅವರನ್ನು ಜಿಪಂ ಸ್ಥಾನದಿಂದ ರದ್ದುಗೊಳಿಸಿ, ಜೈಲಿಗಟ್ಟಬೇಕು ಎಂದು ಆರ್ಯ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ವೆಂಕಟಯ್ಯ ಗೌಡ ಮುಸ್ತಾಜರ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಡೀಗ ಸಮಾಜದಧೀಮಂತ ನಾಯಕರಾಗಿ ಗುರುತಿಸಿಕೊಳ್ಳುವ ಶಾಸಕ ಮಾಲೀಕಯ್ಯ ಗುತ್ತೇದಾರ ಅವರ ಕುರಿತು ಮನಸ್ಸಿಗೆ ಬಂದಂತೆ ಅರುಣಕುಮಾರ ಪಾಟೀಲ ಮಾತನಾಡಿದ್ದಾರೆ. ಅಲ್ಲದೆ ಈಡೀಗ ಕೋಣ ಕಡಿಬೇಕು ಎಂದು ಬೆದರಿಕೆ ಹಾಕಿದರಲ್ಲದೆ, ಅವಾಚ್ಯ ಶಬ್ದಗಳಿಂದ ಬಹಿರಂಗವಾಗಿ ನಿಂದಿಸಿದ್ದಾರೆ. ಈ ರೀತಿಯ ಬೆಳವಣಿಗೆ ಇಡೀ ರಾಜ್ಯದ ಈಡೀಗ ಸಮಾಜಕ್ಕೆ ಅವಮಾನ ಮಾಡಿದಂತಾಗಿದೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಖಂಡ ಪಾಪಯ್ಯ ಗೌಡ ಮಾತನಾಡಿ, ಪ್ರತಿ ಬಾರಿ ಒಂದಿಲ್ಲೊಂದು ಕಾರಣಗಳಿಂದ ಈಡೀಗ ಸಮಾಜವನ್ನು ನಿಂದಿಸಲಾಗುತ್ತಿದೆ. ಅಂತವರನ್ನು ಪೊಲೀಸರು ಬಂಧಿ ಸುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಎಸ್ಪಿಗೆ ಬರೆದ ಪತ್ರವನ್ನು ತಹಶೀಲ್ದಾರ್ ಕೀರ್ತಿ ಚಾಲಾಕ ಅವರಿಗೆ ಸಲ್ಲಿಸಿದರು. ನೀರಾ ಘಟಕ ಅಧ್ಯಕ್ಷ ಶರಣಯ್ಯ ಕಲಾಲ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಗುತ್ತೇದಾರ ಮದರಿ, ಹುಸೇನಯ್ಯಗೌಡ, ಸತ್ತಯ್ಯಗೌಡ ಇಟಕಾಲ, ಅಂಜಯ್ಯಗೌಡ ಕುರಕುಂಟಾ, ಅನಂತಯ್ಯ ಕಡಚರ್ಲಾ, ಬಾಲರಾಜಗೌಡ, ಅಂಜಯ್ಯಗೌಡ ಮದಕಲ್, ಪ್ರಶಾಂತ ಸೂರವಾರ, ರಾಜು ಸೇಡಂ, ಕೊಟ್ರೇಶಗೌಡ ಸೂರವಾರ ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.