ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ಇಬ್ಬರಿಗೆ ಶಿಕ್ಷೆ
Team Udayavani, Apr 7, 2018, 12:50 PM IST
ಹುಣಸೂರು: ಪಕ್ಕದ ಜಮೀನಿನವರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ಅಪ್ಪ ಮತ್ತು ಇಬ್ಬರು ಮಕ್ಕಳಿಗೆ ಜಿಲ್ಲಾ 8ನೇ ಹೆಚ್ಚುವರಿ ನ್ಯಾಯಾಲಯ 5 ವರ್ಷ ಜೈಲು, 50 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.
ಪಿರಿಯಾಪಟ್ಟಣ ತಾಲೂಕಿನ ಕಗ್ಗಂಡಿ ಗ್ರಾಮದ ರಾಜೇಗೌಡ, ಪುತ್ರರಾದ ಹರೀಶ್, ಸ್ವಾಮಿಗೌಡ ಶಿಕ್ಷೆಗೊಳಗಾದವರು. 2011ರ ಆಗಸ್ಟ್ ನಲ್ಲಿ ತಂಬಾಕು ಬೇಸಾಯದ ವೇಳೆ ಪಕ್ಕದ ಜಮೀನಿನ ರಾಮೇಗೌಡ ಮತ್ತವರ ಇಬ್ಬರು ಮಕ್ಕಳ ಮೇಲೆ ಶಿಕ್ಷೆಗೊಳಗಾದ ರಾಜೇಗೌಡ, ಪುತ್ರರಾದ ಹರೀಶ್, ಸ್ವಾಮಿಗೌಡ ಸೇರಿಕೊಂಡು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆದು ಹಲ್ಲೆ ನಡೆಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮೂವರಿಗೂ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ತಲಾ ಐದು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದು,
ಗಾಯಾಳುವಿಗೆ ದಂಡದ ಹಣ ನೀಡುವಂತೆ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕಿ ಮಂಜುಳಾ ವಾದ ಮಂಡಿಸಿದ್ದರು. ಗಾಯಗೊಂಡಿದ್ದ ರಾಮೇಗೌಡ, ಪುತ್ರ ತಿಮ್ಮೇಗೌಡ ಕಳೆದ 6 ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಕಸ್ಟ$rಡಿಗೆ ಕಳುಹಿಸಿದ್ದಾರೆ.
ದರೋಡೆ ಕೋರರಿಗೆ 5 ವರ್ಷ ಜೈಲು: ಬ್ಯಾಂಕ್ ಅಧಿಕಾರಿಯನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ 8 ಮಂದಿ ಆರೋಪಿಗಳಿಗೆ ಹುಣಸೂರಿನ 8ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಐದು ವರ್ಷ ಜೈಲು ಶಿಕ್ಷೆ ಹಾಗೂ ತಲಾ 25 ಸಾವಿರ ರೂ. ದಂಡ ವಿಧಿಸಿ ತೀರ್ಪಿತ್ತಿದೆ.
ಕೇರಳಾ ರಾಜ್ಯದ ವೈನಾಡು ನಿವಾಸಿಗಳಾದ ಜೋಸೆಫ್ ಕ್ರಿಸ್ಟಿ, ಶ್ರೀಕುಮಾರ್, ಕೊಡಗು ಜಿಲ್ಲೆಯ ಕುಶಾಲನಗರದ ಕಿರಣ್ ಮತ್ತು ಮಹಮದ್ ಅರಾಪತ್, ಪಿರಿಯಾಪಟ್ಟಣ ಚನ್ನಪ್ಪ ಹಾಗೂ ವಿಠಲ, ಹುಣಸೂರು ನಗರದ ಕಲ್ಕುಣಿಕೆ ನಿವಾಸಿ ಕೃಷ್ಣ ಜೈಲು ಶಿಕ್ಷೆಗೊಳಗಾದವರು. ಮತ್ತೂರ್ವ ಪ್ರಮುಖ ಆರೋಪಿ ಈವರೆಗೂ ಪತ್ತೆಯಾಗಿಲ್ಲ.
2012 ಆಗಸ್ಟ್‌ನಲ್ಲಿ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ$ಟಿಬೇಟಿಯನ್ ನಿರಾಶ್ರಿತ ಕೇಂದ್ರದಲ್ಲಿರುವ ಕಾರ್ಪೊರೇಷನ್ ಬ್ಯಾಂಕ್‌ನ ವ್ಯವಸ್ಥಾಪಕ ಗಿರೀಶ್ ಬೈಕಿನಲ್ಲಿ ಕುಶಾಲನಗರಕ್ಕೆ ಕರ್ತವ್ಯದ ಮೇಲೆ ತೆರಳುತ್ತಿದ್ದಾಗ ಆರೋಪಿಗಳು ಅವರನ್ನು ಅಡ್ಡಗಟ್ಟಿ ಹಣ ದರೋಡೆಗೆ ಯತ್ನಿಸಿದ್ದರು.
ಆ ವೇಳೆ ಗಿರೀಶ್ ಜೋರಾಗಿ ಕೂಗಿಕೊಂಡಿದ್ದರಿಂದ ಹತ್ತಿರದಲ್ಲಿದ್ದ ಪೋಲೀಸರು ಅವರನ್ನು ರಕ್ಷಿಸಿ, 8 ಮಂದಿ ಆರೋಪಿಗಳ ಪೈಕಿ 7 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು. ವಿಚಾರಣೆಯಲ್ಲಿ ಆರೋಪಿಗಳ ಕೃತ್ಯ ಸಾಬೀತಾಗಿದ್ದರ ಹಿನ್ನೆಲೆಯಲ್ಲಿ ಎಲ್ಲಾ ಆಪಾದಿತರಿಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ತಲಾ 25 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶೆ ಬಿ.ಎಸ್.ಜಯಶ್ರೀಯವರು ತೀರ್ಪಿತ್ತರು.
ಆರೋಪಿಗಳನ್ನು ಪೊಲೀಸರು ಸ್ಥಳದಲ್ಲೇ ಕಸ್ಟಡಿಗೆ ಪಡೆದು ಜೈಲಿಗೆ ಕಳುಹಿಸಿದರು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಮಂಜುಳಾ ವಾದಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ
Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.