ಉಹಾಪೋಹಗಳಿಗೆ ಕಿವಿಗೊಡದಿರಲು ಬಿಜೆಪಿ ಮನವಿ

Team Udayavani, Apr 7, 2018, 2:15 PM IST

vij-1.jpg

ತಾಳಿಕೋಟೆ: ಭಾರತೀಯ ಜನತಾ ಪಕ್ಷದ ಬೆಳವಣಿಗೆಗಾಗಿ ದುಡಿದಿರುವ ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದೇವೆ ಹೊರತು ಅಸಮಾಧಾನಗೊಂಡು ಪಕ್ಷ ಬಿಡುವ ನಿರ್ಧಾರ ನಮ್ಮದಲ್ಲ ಎಂದು ಪುರಸಭೆ ಬಿಜೆಪಿ ಸದಸ್ಯ ಮಾನಸಿಂಗ್‌ ಕೊಕಟನೂರ ಹೇಳಿದರು.

ಶುಕ್ರವಾರ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬೆಳವಣಿಗೆಗೆ ಶ್ರಮಿಸಿದ ಮುದ್ದೇಬಿಹಾಳ ಕ್ಷೇತ್ರದ ನಾಯಕರಗೆ ಟಿಕೆಟ್‌ ನೀಡಬೇಕೆಂಬುವುದು ನಮ್ಮ ಒತ್ತಾಸೆಯಾಗಿದೆ. ವಲಸಿಗರಿಗೆ ಮಣೆ ಹಾಕದೇ ಪಕ್ಷದ ನಿಷ್ಠಾವಂತರಿಗೆ ಗುರುತಿಸುವಂತ ಕಾರ್ಯವಾಗಬೇಕು ಎಂದರು.

ಮುದ್ದೇಬಿಹಾಳ ಕ್ಷೇತ್ರದಲ್ಲಿ ಪಕ್ಷದ ಬೆಳವಣಿಗೆ ಗೆಲ್ಲುವ ತಾಕತ್ತು ನೋಡಿ ಪಕ್ಷಕ್ಕೆ ಸೇರ್ಪಡೆಗೊಂಡವರಿಗೆ ಮಣೆ ಹಾಕಬಾರದು. ಈಗಾಗಲೇ ರಾಜ್ಯ ನಾಯಕರ ಮೇಲೆಯೂ ಕಾರ್ಯಕರ್ತರು ಒತ್ತಡ ಹಾಕಿದ್ದೇವೆ. ಇದನ್ನೇ ರಾಜಕೀಯ ಲಾಭವನ್ನಾಗಿ ಪಡೆದುಕೊಳ್ಳಲು ಕೆಲವು ಅನ್ಯ ಪಕ್ಷದವರು ಉಹಾಪೋಹ ಸೃಷ್ಟಿ ಮಾಡಿ ಬಿಜೆಪಿ ಕಾರ್ಯಕರ್ತರಲ್ಲಿ ಕೆಲವರು ಅಸಮಾಧಾನಗೊಂಡು ಬಿಜೆಪಿ ಬಿಟ್ಟು ಮತ್ತೂಂದು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಎಬ್ಬಿಸಿರುವ ಸುದ್ದಿ ಸುಳ್ಳು. ನಮ್ಮನ್ನು ರಾಜಕೀಯವಾಗಿ ಬೆಳೆಸಿದ ನಾಯಕರು ಪಕ್ಷ ನಿಷ್ಠೆ ಪಾಠ ಕಲಿಸಿದ್ದಾರೆ ವಿನಃ ಪಕ್ಷಕ್ಕೆ ದ್ರೋಹ ಬಗೆಯುವಂತಹ ಪಾಠ ಕಲಿಸಿಲ್ಲ. ಇದನ್ನು ವಿರೋಧ ಪಕ್ಷದವರು ಅರ್ಥಮಾಡಿಕೊಳ್ಳಬೇಕೆಂದರು.

ಬಿಜೆಪಿ ಸಾಮಾಜಿಕ ಜಾಲತಾಣ ಜಿಲ್ಲಾ ಸಮಿತಿ ಸದಸ್ಯ ಸಂಗಮೇಶ ಬಳಿಗಾರ ಮಾತನಾಡಿ, ನಾವು ಬಿಜೆಪಿ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಬೆಳೆದು ಬಂದ್ದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂಬ ಉದ್ದೇಶ ಹೊಂದಿದ್ದೇವೆ. ಅನ್ಯ ಪಕ್ಷದವರು ಸೃಷ್ಟಿಸಿರುವ ವದಂತಿಗಳಿಗೆ ಯಾರೂ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಹಾಗೆ ಮುದ್ದೇಬಿಹಾಳದಲ್ಲಿಯ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಕಳುಹಿಸುವಂತಹ ಕಾರ್ಯ ಎಲ್ಲ ಕಾರ್ಯಕರ್ತರು ಮಾಡಲಿದ್ದೇವೆಂದರು.

ಬಿಜೆಪಿ ಯುವ ಘಟಕದ ತಾಲೂಕು ಪ್ರಧಾನ ಕಾರ್ಯದರ್ಶಿ ಮುನ್ನಾ ಠಾಕೂರ, ತಾಲೂಕು ಉಪಾಧ್ಯಕ್ಷ ಪ್ರಮೋದ ಕೋರಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದಂತ ಬಸನಗೌಡ ಪಾಟೀಲ (ಯತ್ನಾಳ) ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾಗಿದೆ. ಅವರೂ ಕೂಡಾ ಈಗಾಗಲೇ ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಸೂಚನೆಗಳನ್ನು ಕೊಟ್ಟಿದ್ದಾರೆ. ಪಕ್ಷವು ಯಾರನ್ನು ಅಭ್ಯರ್ಥಿಯನ್ನಾಗಿ ನಿಲ್ಲಿಸುತ್ತದೆಯೋ ಆ ವ್ಯಕ್ತಿಯನ್ನು ಆಯ್ಕೆಗೊಳಿಸುವಂತಹ ಕಾರ್ಯದಲ್ಲಿ ಮುಂದಾಗಿರಿ. ನಮ್ಮ ಉದ್ದೇಶ ಜಿಲ್ಲೆಯ 8 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಬೇಕು.

ಮುದ್ದೇಬಿಹಾಳ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ದುಡಿದಂತವರಿಗೆ ಟಿಕೆಟ್‌ ನೀಡುವ ಭರವಸೆ ಕೊಟ್ಟಿದ್ದಾರೆ. ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬೆಂಬಲವಾಗಿ ನಿಂತು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಹೇಳಿದ್ದಾರೆ. ಅವರ ಹಾಗೂ ಸ್ಥಳೀಯ ನಾಯಕರ ಮಾರ್ಗದರ್ಶನದಲ್ಲಿ ಎಲ್ಲ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದೇವೆ ಎಂದರು.

ಬಿಜೆಪಿ ಕಾರ್ಯಕಾರಣಿ ಸದಸ್ಯ ಬಸನಗೌಡ ಮಾಲಿಪಾಟೀಲ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ನದಿಂ ಕಡು, ಗಂಗಾರಾಮ ಕೊಕಡನೂರ, ಸಿದ್ದನಾಥ ಸಾಳುಂಕೆ, ಮಂಜು ಬಡಿಗೇರ, ಹರೀಶ ಮೂಲಿಮನಿ, ಸಿತಾರಾಮ ಮೂಲಿಮನಿ, ವೀರೇಶ ಸಾಸನೂರ, ಸೋಹನ ಹಜೇರಿ, ರಘುಸಿಂಗ್‌ ಹಜೇರಿ, ಶ್ರವಣ ಹಜೇರಿ, ನಂದಯ್ಯ ಮಠ, ರಾಜು ಕಟ್ಟಿಮನಿ, ರಾಘು ಸೋನಾರ, ರೋಹಿತ ನರಗುಂದ ಇದ್ದರು.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.