ಜಿಲ್ಲಾ ಸ್ವೀಪ್ ವತಿಯಿಂದ ಮತದಾರರ ಜಾಗೃತಿಗಾಗಿ ಮಾನವ ಸರಪಳಿ
Team Udayavani, Apr 7, 2018, 4:25 PM IST
ಮಹಾನಗರ: ದ.ಕ. ಜಿಲ್ಲಾ ಸ್ವೀಪ್ ವತಿಯಿಂದ ಮತದಾರರ ಜಾಗೃತಿ ಅಂಗವಾಗಿ ಮನಪಾ ಕಚೇರಿ ಕಟ್ಟಡದ ಹೊರ ಆವರಣದಲ್ಲಿ ಆಯೋಜಿಸಲಾದ ಮಾನವ ಸರಪಳಿಯಲ್ಲಿ ನಗರದ ಕಾಲೇಜು ವಿದ್ಯಾರ್ಥಿಗಳ ಜತೆ ಮಂಗಳೂರು ಮಹಾನಗರ ಪಾಲಿಕೆಯ ಸಿಬಂದಿ ಹಾಗೂ ಅಧಿಕಾರಿಗಳು ಪಾಲ್ಗೊಂಡರು.
ದ.ಕ. ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್. ರವಿ, ಮನಪಾ ಆಯುಕ್ತ ಮಹಮ್ಮದ್ ನಝೀರ್ ಉಪಸ್ಥಿತಿಯಲ್ಲಿ ಪ್ರತಿಜ್ಞಾ ವಿಧಿ ಬಳಿಕ ಮತದಾನದ ಮಹತ್ವವನ್ನು ಸಾರುವ ಭಿತ್ತಿ ಪತ್ರಗಳೊಂದಿಗೆ ಮಾನವ ಸರಪಳಿ ರಚಿಸಲಾಯಿತು.
ಇದೇ ವೇಳೆ ಸ್ವೀಪ್ ವತಿಯಿಂದ ನಗರದ ವಿವಿಧ ಕಡೆ ಸಂಚರಿಸುತ್ತಿರುವ ಪ್ರಚಾರ ವಾಹನದ ಮೂಲಕವೂ ಪ್ರಚಾರ ನಡೆಸಲಾಯಿತು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ| ಎಂ.ಆರ್. ರವಿ, ಮತದಾರರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ವಿಶೇಷ ಮಾನವ ಸರಪಳಿ ನಡೆಸಲಾಗಿದೆ. ನಗರ ಪಾಲಿಕೆ ಉದ್ಯೋಗಿಗಳು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 500ರಷ್ಟು ಮಂದಿ ಭಾಗವಹಿಸಿದ್ದಾರೆ. ಯುವ ಮತದಾರರನ್ನು ಮತಗಟ್ಟೆಗೆ ಸೆಳೆಯುವ ಪ್ರಯತ್ನವಾಗಿ ಈ ಕಾರ್ಯಕ್ರಮ ನಡೆಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.