‘ಸ್ಮಾರ್ಟ್ ಸಿಟಿ’ಯೊಳಗೊಂದು ದುರ್ನಾತದ ತೋಡು


Team Udayavani, Apr 8, 2018, 10:49 AM IST

8-April-6.jpg

ಮಹಾನಗರ: ಸ್ಮಾರ್ಟ್‌ಸಿಟಿ ಹೊಂಗನಸಿನಲ್ಲಿರುವ ಮಂಗಳೂರಿನ ಮುಖ್ಯ ಭಾಗದಲ್ಲಿ ಸಾಗುವ ತೋಡು ಕಸ, ಕಡ್ಡಿ, ತ್ಯಾಜ್ಯಗಳ ರಾಶಿಯಿಂದಾಗಿ ವಾಸನೆ ಹಾಗೂ ಸಾಂಕ್ರಾಮಿಕ ರೋಗಕ್ಕೆ ಆಹ್ವಾನ ನೀಡುವ ಸ್ಥಿತಿಯಲ್ಲಿದೆ. ಸ್ವಚ್ಛ ಪರಿಸರದ ಬಗ್ಗೆ ಯೋಜನೆ ಕೈಗೊಳ್ಳಬೇಕಾದ ಆಡಳಿತ ವ್ಯವಸ್ಥೆ ಮಾತ್ರ ತೋಡಿನ ಸ್ಥಿತಿಯನ್ನು ಕಂಡೂ ಕಾಣದಂತೆ ವರ್ತಿಸುತ್ತಿದೆ. ಪರಿಣಾಮವಾಗಿ ಮಂಗಳೂರಿನ ಬಹುಮುಖ್ಯ ತೋಡಿನ ಪರಿಸರದಲ್ಲಿ ಗಬ್ಬು ವಾಸನೆ ಬರುತ್ತಿದೆ.

ಕುದ್ರೋಳಿ ಸಮೀಪದಲ್ಲಿ ಹರಿದು ಹೋಗುವ ಅಳಕೆ ತೋಡಿನಲ್ಲಿ ತ್ಯಾಜ್ಯ ತುಂಬಿ ಕೊಳೆತ ವಾಸನೆ ಪರಿಸರದ ಹರಡಿದೆ. ಸಮೀಪ ನೂತನ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣದಿಂದ ಇಲ್ಲಿನ ತೋಡಿನ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ, ಅಳಕೆ ವ್ಯಾಪ್ತಿಯಲ್ಲಿ ಕಸ, ಕಡ್ಡಿ, ತ್ಯಾಜ್ಯಗಳು ತುಂಬಿ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ಲಾಸ್ಟಿಕ್‌ ರಾಶಿ
ನಗರದ ಮಧ್ಯೆ ಹಾದುಹೋಗುವ ಈ ತೋಡಿಗೆ ನಿತ್ಯ ಪ್ಲಾಸ್ಟಿಕ್‌ ಎಸೆಯುವವರ ಸಂಖ್ಯೆ ಇಲ್ಲಿ ಕಡಿಮೆಯಾಗಿಲ್ಲ. ಕಸ, ಪ್ಲಾಸ್ಟಿಕ್‌ ಎಲ್ಲ ಸೇರಿಕೊಂಡು ನೀರೆಲ್ಲ ಇಲ್ಲಿ ಮಲಿನವಾಗಿದೆ. ತೊರೆಯ ಪಕ್ಕದಲ್ಲಿ ನಡೆದುಕೊಂಡು ಹೋಗಲು ಕೂಡ ಕಷ್ಟವಾಗಿದೆ. ಈ ತೋಡಿನ ಸಮೀಪದಲ್ಲಿಯೇ ಹಲವಾರು ಮನೆಗಳಲ್ಲಿ ಜನರು ವಾಸವಾಗಿದ್ದು, ನಿತ್ಯ ಅವರೆಲ್ಲ ವಾಸನೆಯಿಂದ ಸಂಕಷ್ಟ ಎದುರಿಸಬೇಕಾಗಿದೆ.

ತೋಡಿನ ನೀರು ಕಪ್ಪಾಗಿದ್ದು, ನೋಡುವಾಗಲೇ ವಿಷಮಯ ಸ್ಥಿತಿ ಸ್ಪಷ್ಟವಾಗುತ್ತದೆ. ಈ ಮಧ್ಯೆ ಅಳಕೆಯ ತೋಡಿನ ನೀರು ಕುದ್ರೋಳಿ ದಾಟಿ, ಫಲ್ಗುಣಿ ನದಿಗೆ ಸೇರುತ್ತದೆ. ಮೊದಲೇ ವಾಸನೆಯಿಂದ ಕೂಡಿದ ತೋಡಿನ ನೀರಿನಿಂದಾಗಿ ಫಲ್ಗುಣಿಯ ಕಥೆ ಏನಾಗಬಹುದು ಎಂಬ ಆತಂಕ ಪರಿಸರವಾಸಿಗಳದ್ದು.

ಹಿಂದೆ ಈಜು ಕಲಿಸಿದ ತೋಡು..!
ಕುದ್ರೋಳಿ ವ್ಯಾಪ್ತಿಯ ಈ ತೋಡು ಹಲವು ವರ್ಷದ ಹಿಂದೆ ಮಕ್ಕಳಿಗೆ ಈಜು ಕಲಿಕಾ ಕೇಂದ್ರವೂ ಆಗಿತ್ತಂತೆ! ಅಂದರೆ ಅಷ್ಟು ಪರಿಶುದ್ಧವಾಗಿ ಇಲ್ಲಿ ನೀರಿನ ಹರಿವಿತ್ತು. ಹಲವು ವಿದ್ಯಾರ್ಥಿಗಳು, ಮಕ್ಕಳು ಇದೇ ನೀರಿನಲ್ಲಿ ಈಜಾಟವಾಡುತ್ತಿದ್ದರು ಎಂದು ಸ್ಥಳೀಯ ಹಿರಿಯರೊಬ್ಬರು ನೆನಪು ಮಾಡುತ್ತಾರೆ. ಆದರೆ, ಈಗ ಪರಿಸ್ಥಿತಿ ಇಲ್ಲಿ ಬದಲಾವಣೆಗೊಂಡಿದೆ. ಮನೆ, ಅಂಗಡಿಯ ಕಸ, ತ್ಯಾಜ್ಯ, ಪ್ಲಾಸ್ಟಿಕ್‌ ಸಾಮಗ್ರಿಗಳೆಲ್ಲ ಈ ನೀರಿನಲ್ಲಿ ವಿಲೀನಗೊಂಡಿದೆ.

ಸ್ಮಾರ್ಟ್‌ ಸಿಟಿಯಾಗಲು ಹೊರಟಿರುವ ಮಂಗಳೂರಿಗೆ ಇದು ಭೂಷಣ ಅಲ್ಲ. ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ಆಲಯವಾಗುತ್ತಿರುವ ನಗರದಲ್ಲಿ ತೋಡುಗಳ ಸ್ವತ್ಛತೆಗೆ ವಿಶೇಷ ಒತ್ತು ನೀಡದಿದ್ದರೆ, ಸರ್ವರಿಗೂ ಆರೋಗ್ಯ ಎಂಬ ಪರಿಕಲ್ಪನೆ ಪರಿಪೂರ್ಣಗೊಳ್ಳುವುದು ಹೇಗೆ ಎಂಬುದಕ್ಕೆ ಪಾಲಿಕೆ ಉತ್ತರ ನೀಡಬೇಕಾಗಿದೆ.

11 ಕೋ.ರೂ.ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ 
ಡೊಂಗರಕೇರಿ ವಾರ್ಡ್‌ಗೆ ಸಂಬಂಧಪಟ್ಟ ಮಣ್ಣಗುಡ್ಡ ದುರ್ಗಾಮಹಲ್‌ನಿಂದ ಕಾರ್‌ಸ್ಟ್ರೀಟ್‌ವರೆಗೆ 11 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಬಹುತೇಕ ಭಾಗದ ರಸ್ತೆ ಕಾಂಕ್ರೀಟ್‌ ಕೆಲಸ ಪೂರ್ಣಗೊಂಡಿದೆ. ಇದೇ ಅನುದಾನದಲ್ಲಿ ಅಳಕೆ ಸೇತುವೆಯೂ ನಿರ್ಮಾಣವಾಗುತ್ತಿದೆ. ರಸ್ತೆ ನಿರ್ಮಾಣಕ್ಕೆ ಯೋಜನೆ ಮಾಡಿದಾಗ ಅಳಕೆ ಸೇತುವೆ ಪಿಲ್ಲರ್‌ ಹಾಕಿ ನಿರ್ಮಿಸಲು ನಕ್ಷೆ ರಚಿಸಲಾಗಿತ್ತು. 10.5 ಮೀ.ಗಿಂತ ಹೆಚ್ಚು ಉದ್ದ ಇದ್ದರೆ ಪಿಲ್ಲರ್‌ ಹಾಕಿಯೇ ನಿರ್ಮಿಸಬೇಕಿದೆ. ಪ್ರಸ್ತುತ ಸೇತುವೆ 13 ಮೀ. ಉದ್ದ ಇದೆ. ಆದ್ದರಿಂದ ಎನ್‌ಐಟಿಕೆ ತಜ್ಞರಿಂದ ಹೊಸ ನಕ್ಷೆ ತಯಾರಿಸಿ ಸರಕಾರದಿಂದ ಅನುಮೋದನೆ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈಗ ಸೇತುವೆ ಕಾಮಗಾರಿ ನಡೆಯುತ್ತಿದೆ. 

ದಿನೇಶ್‌ ಇರಾ

ಟಾಪ್ ನ್ಯೂಸ್

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.