ರಾಜಧಾನಿಯಲ್ಲಿ ಕನ್ನಡದ ಅಸ್ಮಿತೆ ಉಳಿಸಿಕೊಳ್ಳುವುದೇ ಸವಾಲು
Team Udayavani, Apr 8, 2018, 12:15 PM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಭಾಷೆ ಉಸಿರುಗಟ್ಟಿದ ಸ್ಥಿತಿಯಲ್ಲಿದೆ ಎಂದು ಸಾಹಿತಿ ಬೇಂದ್ರೆ ಕೃಷ್ಣಪ್ಪ ಕಳವಳ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ಶನಿವಾರ ಮಲ್ಲೇಶ್ವರದ ಸರ್ಕಾರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ 2ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದರು.
ಆಂಗ್ಲ ಭಾಷೆಯ ಮೋಹ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ಹೆಚ್ಚಳದಿಂದ ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳುವುದೇ ಸವಾಲಾಗಿದೆ. ಕರ್ನಾಟಕದಲ್ಲಿದ್ದವರು ಕನ್ನಡಿಗರಾಗಿ ಬಾಳಬೇಕು ಎಂದು ಹೇಳಿದರು. ಎಲ್ಲರಿಗೂ ಕನ್ನಡ ಕಲಿಸುವುದರ ಜತೆಗೆ ಪ್ರತಿ ಮನೆಯಲ್ಲೂ ಕನ್ನಡ ವ್ಯವಹಾರಿಕ ಭಾಷೆಯಾಗಬೇಕು.
ಮಕ್ಕಳಿಗೆ ಮೊದಲು ಕನ್ನಡ ಕಲಿಸಬೇಕಿದೆ. ಕನ್ನಡ ಭಾಷಾ ಕಲಿಕಾ ನಿಯಮದಂತೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಬೇಕು. ಕನ್ನಡಿಗರೇ ಖಾಸಗಿ ಶಾಲೆ ನಡೆಸುತ್ತಿದ್ದಾರೆ. ಕನ್ನಡ ಉಳಿಸಲು ಸರ್ಕಾರಿ ಅಧಿಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಇಂದಿನ ಅಗತ್ಯ ಎಂದರು.
ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯಲ್ಲಿ ಅಕ್ಷರ, ಕಾಗುಣಿತದ ಮೂಲಕ ಕನ್ನಡ ಕಲಿಸುವ ಪದ್ಧತಿ ಜಾರಿಯಾಗಬೇಕು. ಪದ ಕಲಿಸಿ ಅನಂತರ ಅಕ್ಷರ ಕಲಿಸುವ ಕೃತಕ ಕಲಿಕಾ ಪದ್ಧತಿಯಿಂದ ಭಾಷೆಯ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳು ಒತ್ತಕ್ಷರ, ದೀರ್ಘಾಕ್ಷರಗಳ ಬಳಕೆಯಲ್ಲಿ ಎಡವುತ್ತಿದ್ದಾರೆ. ಇದರಿಂದಲೇ ಕನ್ನಡ ಮಕ್ಕಳ ಮನಸ್ಸನ್ನು ಪ್ರವೇಶಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇಂದಿನ ಪಠ್ಯದಲ್ಲಿ ಸ್ವರಾಕ್ಷರ, ಕಂಠ್ಯ, ತಾಲವ್ಯ, ಮೂರ್ಧನ್ಯ, ದಂತ್ಯ, ಓಷ್ಯಂ ಎಂಬಿತ್ಯಾದಿ ಮೂಲ ಪಾಠವನ್ನು ಪ್ರಾಥಮಿಕ ಶಾಲಾ ಮಕ್ಕಳಿಗೆ ಹೇಳಿಕೊಡಲಾಗುತ್ತಿಲ್ಲ. ಅವರ್ಗೀಯ ವ್ಯಂಜನಗಳನ್ನು ಪ್ರತ್ಯೇಕ ಗುಂಪೆಂದು ಕ್ರಮಬದ್ಧ ಕಲಿಕೆಯ ರೀತಿ ಹೇಳಿಕೊಡುತ್ತಿಲ್ಲ. ಕನ್ನಡ ಭಾಷೆಯ ಮೂಲಬೇರನ್ನು ನಾವೇ ನಮ್ಮ ಕನ್ನಡ ಶಿಕ್ಷಣ ಕಲಿಕೆಯ ಮೂಲಕ ಕತ್ತರಿಸುತ್ತಿದ್ದೇವೆ ಎಂದರು.
ಪ್ರೌಢ ಶಿಕ್ಷಣ ಮುಗಿದರೂ, ಅಲ್ಪಪ್ರಾಣ, ಮಹಾಪ್ರಾಣ ಬರೆಯಲು, ಉಚ್ಚರಿಸಲು ಅನೇಕರು ಎಡವುತ್ತಾರೆ. ಭಾಷೆಯ ಅರಿವು, ಭಾವದ ಕಾವು ಕಮರಿ ಹೋಗುತ್ತಿದೆ. ಹೀಗಾಗಿ ಸರ್ಕಾರ ಇಂತಹ ವ್ಯವಸ್ಥೆಯನ್ನು ಬದಲಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಾಯಣ್ಣ, ಶಾಸಕ ಅಶ್ವಥ್ ನಾರಾಯಣ, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ. ಗಣೇಶರಾವ್ ಕೇಸರ್ಕರ್, ಪ್ರಧಾನ ಕಾರ್ಯದರ್ಶಿ ಮಂಜುನಾಥ ಕನ್ಯಾಡಿ, ಶೇಷಾದ್ರಿಪುರ ಕಾಲೇಜು ಪ್ರಧಾನ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣ, ಸಾಹಿತಿ ಬೈರಮಂಗಲ ರಾಮೇಗೌಡ ಮೊದಲಾದವರು ಇದ್ದರು.
ಸಾಹಿತ್ಯ ಸಮ್ಮೇಳನದಲ್ಲಿ ವಿದೇಶಿಗ: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ 2ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯು ಮಲ್ಲೇಶ್ವರ ವೃತ್ತದಿಂದ ಸರ್ಕಾರಿ ಶಾಲೆಯ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ವಿದೇಶಿ ಯುವಕನೊಬ್ಬ ಆಕರ್ಷಿತನಾಗಿ ನೇರವಾಗಿ ಸಮ್ಮೇಳನದ ಸಭಾಂಗಣದೊಳಗೆ ಬಂದಿದ್ದರು. ನಂತರ ಸಂಘಟಕರು ಅವರಿಗೆ ಕನ್ನಡ ಧ್ವಜ ನೀಡಿ, ಶಾಲು ಹಾಕಿದರು.
ಸಭಾ ಕಾರ್ಯಕ್ರಮ ಆರಂಭದಲ್ಲಿ ನಡೆದ ಸಾಂಸ್ಕೃತಿಕ ವೈಭವನ್ನು ಕ್ಯಾಮೆರಾದ ಮೂಲಕ ಸೆರೆಹಿಡಿದು ಎಲ್ಲರ ಗಮನ ಸೆಳೆದರು. ಪ್ರವಾಸಕ್ಕೆಂದು ಬೆಂಗಳೂರಿಗೆ ಬಂದಿದ್ದೇನೆ. ನಮ್ಮದು ಸೈಬೀರಿಯಾ, ಇಲ್ಲಿನ ಉತ್ಸವ, ಆಚರಣೆಗಳನ್ನು ನೋಡಿ ತುಂಬಾ ಆಕರ್ಷಿತನಾಗಿದ್ದೇನೆ ಎಂದು ಡೀಮಾ ತನ್ನ ಅನುಭವವನ್ನು “ಉದಯವಾಣಿ’ಯೊಂದಿಗೆ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.