ಏಶ್ಯನ್ ಪೇಟೆಯಲ್ಲಿ ದೃಢತೆ : ಮುಂಬಯಿ ಶೇರು 125 ಅಂಕ ಜಿಗಿತ
Team Udayavani, Apr 9, 2018, 11:50 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ದೃಢತೆಯ ಪ್ರವೃತ್ತಿಯಿಂದ ಪ್ರೇರಿತರಾದ ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂಚೂಣಿ ಶೇರುಗಳ ಖರೀದಿಗೆ ತೊಡಗಿಕೊಂಡ ಕಾರಣ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು.
ಬೆಳಗ್ಗೆ 11.45 ಹೊತ್ತಿಗೆ ಸೆನ್ಸೆಕ್ಸ್ 124.67 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,751.64 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 43.70 ಅಂಕಗಳ ಮುನ್ನಡೆಯನ್ನು ಕಾಯ್ದುಕೊ,ಡು10,375.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಐಸಿಐಸಿಐ ಬ್ಯಾಂಕ್, ಟೈಟಾನ್ಕಂಪೆನಿ, ಟಾಟಾ ಸ್ಟೀಲ್, ಭಾರ್ತಿ ಏರ್ಟೆಲ್, ಹಿಂಡಾಲ್ಕೊ ಶೇರುಗಳು ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ತೀವ್ರವಾಗಿ ಸಕ್ರಿಯವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು ಬೆಳಗ್ಗೆ 12 ಪೈಸೆಯಷ್ಟು ಚೇತರಿಸಿಕೊಂಡು 64.85 ರೂ. ಮಟ್ಟದಲ್ಲಿ ದಾಖಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.