ಪಿಎನ್ಬಿ: ಶೆಲ್ ಕಂಪನಿಗಳಿಂದ 5000 ಕೋಟಿ ರೂ. ವರ್ಗಾವಣೆ
Team Udayavani, Apr 10, 2018, 7:00 AM IST
ನವದೆಹಲಿ/ಬೀಜಿಂಗ್: ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13 ಸಾವಿರ ಕೋಟಿ ರೂ.ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) 5 ಸಾವಿರ ಕೋಟಿ ರೂ.ಮೊತ್ತವನ್ನು ನಕಲಿ ಕಂಪನಿಗಳ ಮೂಲಕ ನಡೆಸಿರಬಹುದು ಎಂದು ಕಂಡುಕೊಂಡಿದೆ. ಈ ಬಗ್ಗೆ ಇಬ್ಬರು ಅಧಿಕಾರಿಗಳನ್ನು ಉಲ್ಲೇಖೀಸಿ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಸ್ವರ್ಣೋದ್ಯಮಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಸ್ಕಿ 40 ನಕಲಿ ಕಂಪನಿಗಳನ್ನು ಆರಂಭಿಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಅವರಿಬ್ಬರ ವಿರುದ್ಧ ಒಂದು ತಿಂಗಳ ಒಳಗಾಗಿ ಕೇಸು ದಾಖಲಿಸಲು ಇ.ಡಿ.ಮುಂದಾಗಿದೆ. ನಕಲಿ ಕಂಪನಿಗಳ ಹೆಸರಲ್ಲಿ ದೊಡ್ಡ ಮೊತ್ತದ ಸಾಲವನ್ನೂ ಅವರು ಪಡೆದಿದ್ದಾರೆ. ಸಾಗರೋತ್ತರ ಕಂಪನಿಗಳಿಗೆ ನೇರವಾಗಿ ಮೊತ್ತ ವರ್ಗಾವಣೆ ಮಾಡುವ ಬದಲು, ಕಂಪನಿಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಸ್ವತಂತ್ರ ನಿರ್ಧಾರ: ಇದೇ ವೇಳೆ, ಪಿಎನ್ಬಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಹಾಂಕಾಂಗ್ ತನ್ನದೇ ಆದ ನಿರ್ಧಾರ ಕೈಗೊಳ್ಳಬಹುದು. ಹೀಗೆಂದು ಚೀನಾ ಸರ್ಕಾರ ಸೋಮವಾರ ಹೇಳಿದೆ. ನೀರವ್ ಮೋದಿ ವಿರುದ್ಧ ಹಾಂಕಾಂಗ್ನ ಸ್ಥಳೀಯ ಕಾನೂನು, ನಿಯಮಗಳ ಅನ್ವಯ ಕ್ರಮ ಕೈಗೊಳ್ಳಬಹುದು ಎಂದಿದೆ.
ಶೀಘ್ರ ತೀರ್ಮಾನ: ಈ ನಡುವೆ ಕೋರ್ಟ್ ಉಸ್ತುವಾರಿಯಲ್ಲಿ ಪಿಎನ್ಬಿ ಹಗರಣದ ತನಿಖೆ ನಡೆಯಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಪರಿಗಣಿಸಬೇಕೋ ಬೇಡವೋ ಎಂಬ ಬಗ್ಗೆ ಶೀಘ್ರವೇ ತೀರ್ಮಾನಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಸದ್ಯ ವಿವಿಧ ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ತನಿಖೆ ನಡೆಸುತ್ತಿವೆ ಎಂದು ಕೇಂದ್ರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.