ಶಾಸಕ ಸತೀಶ್ ಸೈಲ್ಗೆ ಗೋವಾ ಎಸ್ಐಟಿ ಸಮನ್ಸ್
Team Udayavani, Apr 10, 2018, 6:40 AM IST
ಪಣಜಿ: ಗೋವಾದಲ್ಲಿನ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಸಂಬಂಧವಿರುವ ಹಿನ್ನೆಲೆಯಲ್ಲಿ ಗೋವಾ ಎಸ್ಐಟಿ ತಂಡದಿಂದ ಸೋಮವಾರ ಎರಡನೇ ಬಾರಿ ಸಮನ್ಸ್ ಜಾರಿಗೊಳಿಸಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಎಸ್ಐಟಿ ತಂಡದ ವಿಚಾರಣೆಗೆ ಸತೀಶ್ ಸೈಲ್ ಸೋಮವಾರ ಹಾಜರಾಗುವಂತೆ ಮೊದಲ ಸಮನ್ಸ್ನಲ್ಲಿ ಸೂಚಿಸಲಾಗಿತ್ತು. ಆದರೆ ಸೋಮವಾರ ಅವರು ವಿಚಾರಣೆಗೆ ಹಾಜರಾಗದ ಕಾರಣ ಇದೀಗ ಮತ್ತೂಂದು ಸಮನ್ಸ್ ಜಾರಿಗೊಳಿಸಲಾಗಿದ್ದು ಏ.13ರಂದು ಹಾಜರಾಗುವಂತೆ ಸೂಚಿಸಲಾಗಿದೆ. ಶಾಸಕ ಸತೀಶ್ ಸೈಲ್, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿರುವುದು ಎಸ್ಐಟಿ ತಂಡಕ್ಕೆ ಪುರಾವೆ ಲಭಿಸಿದೆ ಎನ್ನಲಾಗಿದೆ. ವಿಶೇಷವಾಗಿ ಅದಿರು ರಪು¤ ಪ್ರಕರಣದಲ್ಲಿ ಅವರ ಸಹಭಾಗವಿದೆ ಎನ್ನಲಾಗಿದೆ. ಇದೀಗ ಎರಡನೇ ಬಾರಿ ಸೈಲ್ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿದೆ. ಮೂರು ಬಾರಿ ಸಮನ್ಸ್ ಜಾರಿಗೊಂಡ ನಂತರ ಸೈಲ್ ವಿಚಾರಣೆಗೆ ಹಾಜರಾಗದಿದ್ದರೆ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ. ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ.ಲಿ ಎಂಬ ರಪು¤ದಾರ ಕಂಪನಿಗೆ ಸತೀಶ್ ಸೈಲ್ ಸಂಚಾಲಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.