ಕುಂದಾಪುರ: ಚುನಾವಣಾಧಿಕಾರಿಗಳ ಮೇಲೆ ದಾಳಿ ಯತ್ನ;2 ಸೆರೆ
Team Udayavani, Apr 10, 2018, 10:34 AM IST
ಕುಂದಾಪುರ: ಇಲ್ಲಿನ ಕೋಟೇಶ್ವರದಲ್ಲಿರುವ ಖಾಸಗಿ ವಸತಿ ಗೃಹದಲ್ಲಿ ಚುನಾವಣಾಧಿಕಾರಿಗಳ ಮೇಲೆ ದಾಳಿ ನಡೆಸಲು ಯತ್ನಿಸಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಪರವಾನಿಗೆ ಇಲ್ಲದೆ ಮದ್ಯವನ್ನು ಸರಬರಾಜು ಮಾಡುತ್ತಿರುವ ಕುರಿತು ಸಾರ್ವಜನಿಕರು ನೀಡಿದ ದೂರಿನ ಅನ್ವಯ ದಾಳಿ ನಡೆಸಿದ ಕುಂದಾಪುರ ಸಹಾಯಕ ಕಮಿಷನರ್ ಭೂಬಾಲನ್ ಮತ್ತು ಐಎಎಸ್ ಅಧಿಕಾರಿ ಪೂವಿತಾ ಅವರ ಮೇಲೆಯೇ ದಾಳಿ ನಡೆಸಲು ಮುಂದಾಗಿದ್ದು ಕೂಡಲೇ ಕುಂದಾಪುರ ಠಾಣಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ದಾಳಿ ವೇಳೆ ಹೊಟೇಲ್ನವರು ಮತ್ತು ಅಧಿಕಾರಿಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.