ಡಿಜಿಪಿ ನೀಲಮಣಿ ರಾಜುಗೆ ತುರ್ತು ನೋಟಿಸ್
Team Udayavani, Apr 10, 2018, 12:21 PM IST
ಬೆಂಗಳೂರು: ಸಿವಿಲ್ ನ್ಯಾಯಾಂಗ ನಿಂದನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಹಾಗೂ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಪೊಲೀಸ್ ಕಾಲೋನಿಗಳಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಪರ ಪ್ರಚಾರ ನಡೆಸಲು ಅನುಮತಿ ನೀಡುವ ಸಂಬಂಧ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ ಡಿಜಿಪಿ ಹಾಗೂ ಪೊಲೀಸ್ ಆಯುಕ್ತರ ವಿರುದ್ಧ ರಕ್ಷಕ ಸೇನೆ ( ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ನೇತೃತ್ವದ ಪಕ್ಷ ) ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧಿಸಿದಂತೆ ನ್ಯಾ.ಬಿ.ಎಸ್.ಪಾಟೀಲ್ ಹಾಗೂ ನ್ಯಾ.ಎಸ್.ಸುನೀಲ್ ದತ್ ಯಾದವ್ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿಗಳಾದ ಡಿಜಿಪಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏ. 24ಕ್ಕೆ ಮುಂದೂಡಿದೆ.
ರಕ್ಷಕ ಸೇನೆ ಪಕ್ಷ ಚುನಾವಣಾ ಆಯೋಗದಿಂದ ನೋಂದಣಿಯಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ. ಪೊಲೀಸ್ ಸಿಬ್ಬಂದಿ ಕಲ್ಯಾಣದ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದಿರುವ ಈ ಪಕ್ಷ ಕೋರಮಂಗಲ, ಆಡುಗೋಡಿ, ಮೈಸೂರು ರಸ್ತೆಯಲ್ಲಿರುವ ಪೊಲೀಸ್ ಕಾಲೋನಿಗಳಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಪ್ರಚಾರ ನಡೆಸಲು ಮುಂದಾಗಿತ್ತು.
ಆದರೆ, ಪೊಲೀಸ್ ಇಲಾಖೆ ರಕ್ಷಕ ಸೇನೆಯ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ನಿರ್ಬಂಧ ತೆರವು ಕೋರಿ ರಕ್ಷಕ ಸೇನೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥಗೊಳಿಸಿದ್ದ ಹೈಕೋರ್ಟ್, ಆರು ವಾರಗಳಲ್ಲಿ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶಿಸಿ ಜನವರಿ 23ರಂದು ಆದೇಶಿಸಿತ್ತು. ಆದರೆ, ರಕ್ಷಕ ಸೇನೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿರುವ ಮನವಿ ಸಂಬಂಧ ಡಿಜಿಪಿ ಹಾಗೂ ಆಯುಕ್ತರು ಇದುವರೆಗೆ ರ್ಧಾರ ತಿಳಿಸಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.