ಆಟೋ ಚಾಲಕರಿಗೆ ವಸತಿ ಭರವಸೆ


Team Udayavani, Apr 10, 2018, 12:21 PM IST

auto-chal.jpg

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಆಟೋ ಚಾಲಕರಿಗೆ ಪ್ರತ್ಯೇಕ ನಿವೇಶನ ಗುರುತಿಸಿ, ಹೊಸ ಕಾಲೋನಿ ರಚನೆ ಮಾಡಿ, ವಸತಿ ಸಮುತ್ಛಯ ನಿರ್ಮಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ವತಿಯಿಂದ ಸೋಮವಾರ ನಗರದ ಜಸ್ಮಾದೇವಿ ಭವನದಲ್ಲಿ ಹಮ್ಮಿಕೊಂಡಿದ್ದ ಆಟೋ ಚಾಲಕರೊಂದಿಗಿನ ಸಂವಾದಕ್ಕೆ ಡಾಲರ್ ಕಾಲೋನಿಯಲ್ಲಿರುವ ತಮ್ಮ  ನಿವಾಸದಿಂದ ಆಟೋದಲ್ಲೇ  ಆಗಮಿಸಿದ ಅವರು ಆಟೋ ಚಾಲಕರ ಸಮಸ್ಯೆಗಳನ್ನು ಆಲಿಸಿದರು.

ನಂತರ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ 1.50 ಲಕ್ಷ ಹಾಗೂ ರಾಜ್ಯದಲ್ಲಿ 3.50 ಲಕ್ಷ ಆಟೋ ಚಾಲಕರಿದ್ದಾರೆ. ಅವರು ನಿತ್ಯವೂ ಹತ್ತು ಹನ್ನೊಂದು ಗಂಟೆ ಕೆಲಸ ಮಾಡಿದರೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಆಟೋ ಚಾಲಕರಿಗಾಗಿ ಪ್ರತ್ಯೇಕ ನಿವೇಶನ ಗುರುತಿಸಿ, ವಸತಿ ಸಮುತ್ಛಯ ನಿರ್ಮಿಸಿ, ಒಂದು ಅಥವಾ ಎರಡು ಕೋಣೆ ಹೊಂದಿರುವ ಫ್ಲ್ಯಾಟ್‌ಗಳನ್ನು ಹಂಚಿಕೆ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಚಾಲಕರ ಅಭಿವೃದ್ಧಿ ನಿಗಮ: ಆಟೋ, ಟ್ಯಾಕ್ಸಿ ಹಾಗೂ ಲಾರಿ ಸೇರಿದಂತೆ ಎಲ್ಲಾ ಬಾಡಿಗೆ ವಾಹನಗಳ ಚಾಲಕರ ಸಮಸ್ಯೆಯೂ ಒಂದೇ ರೀತಿಯಲ್ಲಿದೆ. ಚಾಲಕರ ಸಮಗ್ರ ಕಲ್ಯಾಣಕ್ಕಾಗಿ ಆಟೋ ಹಾಗೂ ಉಳಿದ ವಾಹನಗಳ ಚಾಲಕರ ಕ್ಷೇಮಾಭಿವೃದ್ಧಿ ನಿಗಮ ಸ್ಥಾಪಿಸಲಾಗುವುದು. ಈ ನಿಗಮದ ಮೂಲಕ ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ಜೀವನ ಮಟ್ಟ ಮತ್ತು ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದರು.

ಆಟೋ ಚಾಲಕರು ನಾಗರಿಕರ ಸೇವೆಯಲ್ಲಿ ಹಗಲಿರುಳು ದುಡಿಯುತ್ತಿರುತ್ತಾರೆ. ಜನರಿಗೆ ಉತ್ತಮವಾದ ಸಾರಿಗೆ ಸೇವೆಯನ್ನು ಕಲ್ಪಿಸುತ್ತಿದ್ದಾರೆ. ಕನ್ನಡ ಭಾಷೆಯ ಉಳಿವಿಕೆಗಾಗಿ ನಡೆಯುವ ಹೋರಾಟದಲ್ಲಿ ಆಟೋಚಾಲಕರ ಪಾತ್ರ ನಿರ್ಣಾಯಕವಾಗಿದೆ. ಸವಾಲಿನ ಮಧ್ಯೆ ಜೀವನ ನಡೆಸುವ ಆಟೋಚಾಲಕರು ಕನ್ನಡಾಭಿಮಾನದ ರಾಯಭಾರಿಗಳು ಎಂದು ಶ್ಲಾ ಸಿದರು.

ಸಂಸದ ಪಿ.ಸಿ.ಮೋಹನ್‌ ಮಾತನಾಡಿ, ರಾಜ್ಯ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷದಲ್ಲಿ ದಲಿತರ ಕೇರಿಗೆ ಹೋಗಿಲ್ಲ. ಆಟೋ ಚಾಲಕರನ್ನು ಮಾತನಾಡಿಸಿಲ್ಲ. ಯಾವ ವ್ಯವಸ್ಥೆಯನ್ನು ಸರಿಪಡಿಸಿಲ್ಲ ಎಂದು ದೂರಿದರು.

ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಕಳೆದ ಐದು ವರ್ಷದಲ್ಲಿ ಶಿವಾಜಿನಗರ ಏನೂ ಅಭಿವೃದ್ಧಿಯಾಗಿಲ್ಲ. ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿರುವ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಗಿತ ಮಾಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿ ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು.

ಇನ್ನು ಮೂರ್‍ನಾಲ್ಕು ದಿನದೊಳಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ. ಆ ಪ್ರಣಾಳಿಕೆಯಲ್ಲಿ ಆಟೋ ಚಾಲಕರ ಸಮಸ್ಯೆಗೆ ಪರಿಹಾರವನ್ನು ಸೂಚಿಸಲಾಗುವುದು . ಸರ್ಕಾರ ಬಂದ ನಂತರ ಅದನ್ನು ಅನುಷ್ಠಾನಕ್ಕೂ ತರಲಿದ್ದೇವೆ. ರಿಕ್ಷಾ ಖರೀದಿಸಲು ಬ್ಯಾಂಕ್‌ ಸಾಲ , ವಿಮೆ  ಶುಲ್ಕ ಕಡಿಮೆ ಮಾಡುವ ಸಂಬಂಧ ಪರಿಶೀಲಿಸಲಾಗುವುದು.
-ಬಿ.ಎಸ್‌.ಯಡಿಯೂರಪ್ಪ 

ಆಟೋಗಳಿಗೆ ಪ್ರತಿವರ್ಷ 8,500 ರೂ. ಇನ್ಸೂರೆನ್ಸ್‌ ಪಾವತಿಸಬೇಕು. ಇದು ತುಂಬಾ ದುಬಾರಿಯಾಗುತ್ತಿದೆ. ಇನ್ಸೂರೆನ್ಸ್‌ ಹಣವನ್ನು ಕಡಿಮೆ ಮಾಡಬೇಕು.
-ನಾಗರಾಜ, ಆಟೋ ಚಾಲಕ

ಆಟೋ ಚಾಲಕರಲ್ಲಿ ಬಾಂಗ್ಲ ವಲಸಿಗರೇ ಹೆಚ್ಚಿದ್ದಾರೆ. ಅವರಿಗೆ ರೇಷನ್‌ ಕಾರ್ಡ್‌, ಆಧಾರ್‌ ಕಾರ್ಡ್‌ ಮಾಡಿಸಿಕೊಡಲಾಗಿದೆ. ಇದರಿಂದ ಸ್ಥಳೀಯ ಆಟೋ ಚಾಲಕರಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು.
-ಬಾಲಕೃಷ್ಣ, ಆಟೋ ಚಾಲಕ

ಓಲಾ, ಉಬಾರ್‌ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಆಟೋ ಚಾಲಕರು ಪರದಾಡುವಂತಾಗಿದೆ. ಅಂತಹ ಟ್ಯಾಕ್ಸಿಗಳಿಗೆ ಕಡಿವಾಣ ಹಾಕಬೇಕು.
-ಅಣ್ಣಾದೊರೆ, ಆಟೋ ಚಾಲಕ

ಆಟೋ ಚಾಲಕರು ಹಗಲು ಇರುಳು ಎನ್ನದೇ ದುಡಿಯುತ್ತಾರೆ. ಆದರೆ, ಅವರಿಗೆ ಸ್ವಂತ ಮನೆ ಇರುವುದಿಲ್ಲ. ಬಹುತೇಕರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಹೀಗಾಗಿ ಆಟೋ ಚಾಲಕರಿಗೆ ವಸತಿ ನಿರ್ಮಾಣ ಮಾಡಿಕೊಡಬೇಕು.
-ದೊಡ್ಡಯ್ಯ, ಆಟೋ ಚಾಲಕ

ಟಾಪ್ ನ್ಯೂಸ್

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.