ಟಿಕೆಟ್‌ ಕೈತಪ್ಪಲು ಅನಂತಕುಮಾರ್‌ ಕಾರಣ


Team Udayavani, Apr 10, 2018, 12:21 PM IST

ticket.jpg

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈತಪ್ಪಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪಾಲಿಕೆ ಮಾಜಿ ಸದಸ್ಯ ಎನ್‌.ಆರ್‌.ರಮೇಶ್‌ ತಮಗೆ ಟಿಕೆಟ್‌ ಕೈತಪ್ಪಿರುವುದಕ್ಕೆ ಕೇಂದ್ರ ಸಚಿವ ಅನಂತಕುಮಾರ್‌ ಅವರೇ ಕಾರಣ ಎಂದು ನೇರ ಆರೋಪ ಮಾಡಿದ್ದಾರೆ.

ಯಡಿಯೂರಿನ ತಮ್ಮ ನಿವಾಸದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೇಂದ್ರ ಸಚಿವ ಅನಂತಕುಮಾರ್‌ ಅವರಿಗೆ ಚಿಕ್ಕಪೇಟೆಯಿಂದ ಸ್ಪರ್ಧಿಸಲು ರಬ್ಬರ್‌ ಸ್ಟಾಂಪ್‌ ವ್ಯಕ್ತಿ ಬೇಕೆ ಹೊರತು ಹೋರಾಟಗಾರರಲ್ಲ. ಅವರು ಭ್ರಷ್ಟಾಚಾರ ಆರೋಪ ಹೊತ್ತ ಉದ್ಯಮಿಗೆ ಟಿಕೆಟ್‌ ಕೊಡಿಸುವ ಮೂಲಕ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ, ಮುಖಂಡರ 64 ಹಗರಣಗಳನ್ನು ಬಯಲಿಗೆಳೆದಿದ್ದು, ಪಕ್ಷದ ಬೇರೆ ಯಾವ ನಾಯಕರು ಇಷ್ಟು ಹಗರಣಗಳನ್ನು ಬೆಳಕಿಗೆ ತಂದಿಲ್ಲ. 17 ಬಾರಿ ನನ್ನ ಹತ್ಯೆಗೆ ಸಂಚು ನಡೆದರೂ ಎದೆಗುಂದದೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಸಿದ್ದೇನೆ. ಟಿಕೆಟ್‌ ಕೈತಪ್ಪಿರುವು ಆಘಾತ ತಂದಿದೆ ಎಂದು ಹೇಳಿದರು.

ಚಿಕ್ಕಪೇಟೆ ಶಾಸಕರ ವಿರುದ್ಧ ನಾಲ್ಕು ಹಗರಣ ಬಯಲಿಗೆಳೆದಿದ್ದು, ಎರಡು ಪ್ರಕರಣದಲ್ಲಿ  ಶಾಸಕರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಈ ಹೋರಾಟದಲ್ಲಿ ಉದಯ್‌ ಗರುಡಾಚಾರ್‌ ಎಂದಿಗೂ ಕೈಜೋಡಿಸಿಲ್ಲ. 2013ರ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಎಂದೂ ಚಿಕ್ಕಪೇಟೆಯತ್ತ ಸುಳಿಯದ ಉದಯ್‌ ಗರುಡಾಚಾರ್‌ ಮೂರು ತಿಂಗಳ ಹಿಂದೆ ಪ್ರತ್ಯಕ್ಷರಾಗಿದ್ದಾರೆ. ಸಚಿವ ಕೆ.ಜೆ.ಜಾರ್ಜ್‌, ಆರ್‌.ವಿ.ದೇವರಾಜ್‌ ವಿರುದ್ಧ ನಾನು ಹೋರಾಟ ನಡೆಸುತ್ತಿದ್ದು, ಅವರೊಂದಿಗೆ ವ್ಯವಹಾರ ಪಾಲುದಾರರಾಗಿರುವ ವ್ಯಕ್ತಿಗೆ ಟಿಕೆಟ್‌ ನೀಡಿರುವುದು ಶೋಚನೀಯ ಎಂದರು.

ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಸರಿಪಡಿಸಿ ಅವಕಾಶ ಕಲ್ಪಿಸುವುದಾಗಿ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಭರವಸೆ ನೀಡಿದ್ದು, ದುಡುಕಿನ ನಿರ್ಧಾರ ಕೈಗೊಳ್ಳದಂತೆ ಸೂಚಿಸಿದ್ದಾರೆ. ಹಾಗಾಗಿ ಪಕ್ಷದಲ್ಲೇ ಉಳಿದಿದ್ದೇನೆ. ಸ್ಪಂದನೆ ದೊರೆಯದಿದ್ದರೆ ಬುಧವಾರ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದರು.

ಎನ್‌.ಆರ್‌.ರಮೇಶ್‌ ಮನೆ ಬಳಿ ಜಮಾಯಿಸಿದ್ದ ಬೆಂಬಲಿಗರು, ಕಾರ್ಯಕರ್ತರು ಅನಂತಕುಮಾರ್‌, ಆರ್‌.ಅಶೋಕ್‌ ವಿರುದ್ಧ ಘೋಷಣೆ ಕೂಗಿದರು. ರಾಜೇಂದ್ರ ನಾಯ್ದು ಎಂಬುವರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು. ತಕ್ಷಣವೇ ಸ್ಥಳದಲ್ಲಿದ್ದವರು ಸಮಾಧಾನಪಡಿಸಿದರು. ಪೊಲೀಸರು ಭದ್ರತೆ ಒಗದಿದ್ದರು.

ಕಿಕ್‌ಬ್ಯಾಕ್‌ ಶಂಕೆ: ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದಯ್‌ ಗರುಡಾಚಾರ್‌ ಅವರಿಗೆ ಟಿಕೆಟ್‌ ಸಿಕ್ಕಿದ್ದು, 2 ಕೋಟಿ ರೂ. ಹಣ ನೀಡಲಾಗಿದೆ. ಹಾಗಾಗಿ ಶಾಸಕರ (ಆರ್‌.ವಿ.ದೇವರಾಜ್‌) ಗೆಲುವು ಸುಲಭ ಎಂಬರ್ಥದ ಸಂದೇಶವನ್ನು ದೇವರಾಜ್‌ ಅಭಿಮಾನಿಯೊಬ್ಬರು ಮಾ.30ರಂದೇ ಫೇಸ್‌ಬುಕ್‌ನಲ್ಲಿ ಹಾಕಿದ್ದರು. 2 ಕೋಟಿ ರೂ. ಕಿಕ್‌ಬ್ಯಾಕ್‌ ಪಡೆದಿರುವ ಆರೋಪಕ್ಕೆ ಯಾರೊಬ್ಬರೂ ಸ್ಪಷ್ಟನೆ ನೀಡದ ಕಾರಣ ಕಿಕ್‌ಬ್ಯಾಕ್‌ ಪಡೆದಿರಬಹುದು ಎಂಬ ಅನುಮಾನ ಮೂಡುವುದು ಸಹಜ ಎಂದು ಮಾರ್ಮಿಕವಾಗಿ ಹೇಳಿದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.