ಗೋ ಹತ್ಯೆ ನಿಷೇಧಕ್ಕೆ ಕಠಿಣ ಕಾನೂನು ಅಗತ್ಯ

Team Udayavani, Apr 10, 2018, 1:30 PM IST

shiv-1.jpg

ಶಿವಮೊಗ್ಗ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸುವ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಗಟ್ಟುಲು ಕಠಿಣ ಕಾನೂನು ಜಾರಿಗೆ ತರುವ ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ಹೆಚ್ಚಾಗುತ್ತಿದೆ. ಗೋ ಹತ್ಯೆ ಸಂಪೂರ್ಣ ನಿಲ್ಲಬೇಕು. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಗೋ ಹತ್ಯೆ ನಿಷೇಧಕ್ಕೆ ಪ್ರಜಾಪ್ರಭುತ್ವದಡಿಯಲ್ಲಿ ಬಿಲ್‌ ಪಾಸ್‌ ಮಾಡಲಾಗಿತ್ತು. ಆದರೆ ಅಂದಿನ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಇದಕ್ಕೆ ಅಡ್ಡಿಬಂದು ಬಿಲ್‌ನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು. ಇದರಿಂದಾಗಿ ಕಾನೂನು ಜಾರಿಗೆ ಅಡ್ಡಿಯುಂಟಾಯಿತು ಎಂದರು.

ಅಕ್ರಮ ಕಸಾಯಿಖಾನೆಗೆ ಬೀಗ: ದೇಶದ ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ತಜ್ಞರೊಂದಿಗೆ ಚರ್ಚಿಸಿ ರಾಜ್ಯದಲ್ಲೂ ಕಾನೂನು ಜಾರಿಗೆ ತರುವ ಪ್ರಯತ್ನ ಮಾಡಲಾಗುವುದು ಹಾಗೂ ರಾಜ್ಯದಲ್ಲಿ ಎಲ್ಲೆಲ್ಲಿ ಅಕ್ರಮ ಕಸಾಯಿ ಖಾನೆಗಳಿವೆಯೋ ಅವುಗಳಿಗೆ ಬೀಗ ಹಾಕಿಸಲಾಗುವುದು ಎಂದು ಹೇಳಿದರು. ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಗಟ್ಟಲು ಹಲವು ರಾಜ್ಯಗಳಲ್ಲಿ ಕಠಿಣ ಕಾನೂನು ಜಾರಿಯಲ್ಲಿದೆ. ರಾಜ್ಯದಲ್ಲೂ ಕಠಿಣ ಕಾನೂನು ಜಾರಿಗೆ ತರಲು ಆದ್ಯತೆ ನೀಡುವುದಾಗಿ ತಿಳಿಸಿದರು.

ಈಗಾಗಲೇ ದೇಶದ 21 ರಾಜ್ಯಗಳಲ್ಲಿ ಕಾಂಗ್ರೆಸ್‌ ನಿರ್ನಾಮವಾಗಿದೆ. ಈ ಬಾರಿ ಕರ್ನಾಟಕದಲ್ಲೂ ಕಾಂಗ್ರೆಸ್‌ ಸೋಲು ಅನುಭವಿಸಲಿದೆ. ಕಾಗಿನೆಲೆಯಲ್ಲಿ ಬಿಜೆಪಿ ಏರ್ಪಡಿಸಿದ್ದ ಸಮಾವೇಶದಲ್ಲಿ ಸೇರಿದ್ದ ಜನರನ್ನು ಕಂಡು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನಡುಕ
ಹುಟ್ಟಿದೆ ಎಂದು ಲೇವಡಿ ಮಾಡಿದರು. ಗೋಷ್ಠಿಯಲ್ಲಿ ಮುಖಂಡರಾದ ಡಿ.ಎಸ್‌.ಅರುಣ್‌, ಕೆ.ಜಿ.ಕುಮಾರಸ್ವಾಮಿ, ಎಸ್‌.ಎನ್‌.ಚನ್ನಬಸಪ್ಪ, ಎನ್‌.ಜೆ.ರಾಜಶೇಖರ್‌, ಎಸ್‌. ಜ್ಞಾನೇಶ್ವರ್‌, ಎಸ್‌.ದತ್ತಾತ್ರಿ, ಮೋಹನ್‌ ರೆಡ್ಡಿ, ಅರುಣ್‌ ಕುಮಾರ್‌, ಕೆ.ವಿ.ಅಣ್ಣಪ್ಪ ಇನ್ನಿತರರು ಉಪಸ್ಥಿತರಿದ್ದರು.

ಏ.19ರಂದು ಬೆಳಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ಹೊರಟು 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ. ಏ.17 ಮತ್ತು 18ರಂದು ನಗರದ ಎಲ್ಲಾ 32 ವಾರ್ಡ್‌ಗಳ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಗುವುದು ಹಾಗೂ ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಗುವುದು.
 ಕೆ.ಎಸ್‌. ಈಶ್ವರಪ್ಪ, ಪ್ರತಿಪಕ್ಷ ನಾಯಕ.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.