ಮಹಾದೇವ ಭೈರಗೊಂಡ ಬಂಧನಕ್ಕೆ ತಾಕೀತು


Team Udayavani, Apr 10, 2018, 5:21 PM IST

vij-2.jpg

ವಿಜಯಪುರ: ಚಡಚಣ ತಾಲೂಕಿನ ಕೆರೂರ ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 200 ಲಾರಿ ಪ್ರಮಾಣದ ಮರಳು ಜಪ್ತಿ ಮಾಡಲಾಗಿದೆ. ರಾಜ್ಯದಲ್ಲೇ ಅತಿ ದೊಡ್ಡ ಮರಳು ಅಕ್ರಮ ದಾಸ್ತಾನು ಎನಿಸಿರುವ ಈ ಕೃತ್ಯದ ಹಿಂದೆ ಮಹಾದೇವ ಭೈರಗೊಂಡ ಅವರ ಕೈವಾಡವಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳು ತಕ್ಷಣ ಶರಣಾಗದಿದ್ದರೆ 24 ಗಂಟೆಯಲ್ಲಿ
ಬಂಧಿಸುವಂತೆ ತಾಕೀತು ಮಾಡಲಾಗಿದೆ ಎಂದು ಉತ್ತರ ವಲಯ ಐಜಿಪಿ ಅಲೋಕಕುಮಾರ ತಿಳಿಸಿದರು.

ಸೋಮವಾರ ಕೆರೂರ ಗ್ರಾಮದ ಅಕ್ರಮ ಮರಳು ದಾಸ್ತಾನು ಹಾಗೂ ಮಹಾದೇವ ಭೈರಗೊಂಡ ಮಾಲೀಕತ್ವದ ಭೈರವನಾಥ ಶಿಕ್ಷಣ ಸಂಸ್ಥೆ, ಕಲ್ಲಿನ ಖಡಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭಾರಿ ಪ್ರಮಾಣದ ಮರಳು ಅಕ್ರಮ ಸಂಗ್ರಹದ ಹಿಂದೆ ಇಂಡಿ ವಿಧಾನಸಭೆ ಕ್ಷೇತ್ರದ ಸ್ಪರ್ಧಾ ಆಕಾಂಕ್ಷಿ ಮಹಾದೇವ ಭೈರಗೊಂಡ ಅವರ ಕೈವಾಡ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಹಾದೇವ ಹಾಗೂ ಅವರ 12 ಸಹಚರರ ವಿರುದ್ಧ ಚಡಚಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ. 27ರಂದು ಮಹಾದೇವ ಮೇಲೆ ಚಡಚಣ ಠಾಣೆಯಲ್ಲಿ ರೌಡಿಶೀಟ್‌ ತೆರೆದಿದ್ದು ಪೊಲೀಸ್‌ ದಾಳಿ ಸಂದರ್ಭದಲ್ಲಿ ಪರಾರಿ ಆಗಿದ್ದಾನೆ ಎಂದರು. 

ಬುಧವಾರ ಸಂಜೆ 6 ಗಂಟೆಯೊಳಗೆ ಶರಣಾಗದಿದ್ದಲ್ಲಿ ಗಡಿಪಾರು ಮಾಡಲು ಜಿಲ್ಲಾಧಿಕಾರಿಗಳಿಗೆ ಶಿಫಾರಸು ಮಾಡಬೇಕು. ಮತ್ತೂಂದೆಡೆ 24 ಗಂಟೆಯಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಚಡಚಣ ಪಿಎಸ್‌ಐ ಗೋಪಾಲ ಹಳ್ಳೂರ ಅವರನ್ನು ಅಮಾನತು ಮಾಡುವಂತೆ ಎಸ್‌ಪಿ ಪ್ರಕಾಶ ನಿಕ್ಕಂ ಅವರಿಗೆ ಸೂಚಿಸಿದರು. 

ಭೀಮಾ ನದಿ ಪಾತ್ರದಲ್ಲಿ ಬೃಹತ್‌ ಪ್ರಮಾಣದ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಇತ್ತು. ಇದನ್ನು ಆಧರಿಸಿ ಶನಿವಾರ ಪೊಲೀಸರು ದಾಳಿ ನಡೆಸಿದಾಗ ಅಪಾರ ಪ್ರಮಾಣದ ಮರಳು, 5 ಲಾರಿ, 1 ಟಿಪ್ಪರ್‌ ಹಾಗೂ 5 ಬೋಟ್‌ ವಶಕ್ಕೆ ಪಡೆಯಲಾಗಿದೆ ಎಂದರು. ಇದಲ್ಲದೇ ಅಕ್ರಮ ಮರಳು ಹಾಗೂ ಖಡಿ ಸಾಗಿಸಲು ಬಳಸುತ್ತಿರುವ 1 ಜೆಸಿಬಿ, 4 ಟಿಪ್ಪರ್‌ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಭೀಮಾ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ, ಅಕ್ರಮ ಶಸ್ತ್ರಾಸ್ತ ಮಾರಾಟ, ಬಳಕೆಯಂಥ ಎಲ್ಲ ಅಕ್ರಮಗಳಿಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಂಪೂರ್ಣ ನಿಯಂತ್ರಣಕ್ಕೆ ತರಬೇಕು. ಇದಲ್ಲದೇ ಈ ನೆಲದಲ್ಲಿ ಯಾವುದೇ ರೀತಿಯಲ್ಲೂ ಸಮಾಜ ಬಾಹೀರ ಹಾಗೂ ಕಾನೂನು ಉಲ್ಲಂಘನೆ ಅಕ್ರಮ ಚಟುವಟಿಕೆಗೆ ಅವಕಾಶ ಇಲ್ಲದಂತೆ ಸಂಪೂರ್ಣ ಮಟ್ಟ ಹಾಕುವಂತೆ ಇಂಡಿ ಡಿಎಸ್ಪಿ ರವೀಂದ್ರ ಶಿರೂರ ಅವರಿಗೆ ಐಜಿಪಿ ಸೂಚಿಸಿದರು. ಪ್ರೊಷೇನರಿ ಎಸ್‌ಪಿ ಆರ್‌. ಶ್ರೀನಿವಾಸಗೌಡ, ಎಎಸ್ಪಿ ಶಿವಕುಮಾರ, ಎಂ.ಜೆ. ಪೃಥ್ವಿ, ಎಲ್‌.ನವೀನಕುಮಾರ ಸೇರಿದಂತೆ ಇತರೆ ಪೊಲೀಸ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.