ಮಾಜಿ ಸಚಿವರ ಮನೆಗೆ ಮಧು ಬಂಗಾರಪ್ಪ ಭೇಟಿ
Team Udayavani, Apr 11, 2018, 7:00 AM IST
ಬೆಂಗಳೂರು/ಮೈಸೂರು: ಮಾಜಿ ಸಚಿವ, ಬಿಜೆಪಿಯ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಜೆಡಿಎಸ್‌ಗೆ ಸೆಳೆಯುವ ಪ್ರಯತ್ನ ನಡೆದಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಮಧು ಬಂಗಾರಪ್ಪ ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ.
ಮೈಸೂರು ಪ್ರವಾಸದಲ್ಲಿರುವ ಮಧು ಬಂಗಾರಪ್ಪ ಮಂಗಳವಾರ ಜಯಲಕ್ಷ್ಮೀಪುರದಲ್ಲಿರುವ ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದು, ತಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ಆದರೆ, ಶ್ರೀನಿವಾಸ ಪ್ರಸಾದ್ ಈ
ವಯಸ್ಸಿನಲ್ಲಿ ಪಕ್ಷಾಂತರ ಸರಿ ಹೋಗುವುದಿಲ್ಲವೆಂದು ಹೇಳಿದರು ಎಂದು ತಿಳಿದು ಬಂದಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಶತಾಯ-ಗತಾಯ ಪ್ರಯತ್ನ ನಡೆಸಿರುವ ಜೆಡಿಎಸ್, ಶ್ರೀನಿವಾಸ ಪ್ರಸಾದ್ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಲಾಭವಾಗುವುದರ ಜತೆಗೆ ಹಳೇ ಮೈಸೂರು
ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಬಹುದೆಂಬ ಉದ್ದೇಶದಿಂದ ಈ ಪ್ರಯತ್ನಕ್ಕೆ ಕೈಹಾಕಿದೆ ಎನ್ನಲಾಗಿದೆ.
ಶ್ರೀನಿವಾಸ ಪ್ರಸಾದ್ ಅವರು ಹಿರಿಯ ನಾಯಕರು. ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರೊ. .ಎಸ್.ರಂಗಪ್ಪ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿದ್ದೆ. ಅದನ್ನು ಬಿಟ್ಟರೆ ಬೇರೆನಿಲ್ಲ.
● ಮಧು ಬಂಗಾರಪ್ಪ, ಶಾಸಕ
ನನ್ನ ಹಾಗೂ ಮಧು ಬಂಗಾರಪ್ಪ ಅವರದ್ದು ವಿಶ್ವಾಸದ ಭೇಟಿ. ನಾನು ಕಂದಾಯ ಸಚಿವನಾಗಿದ್ದ ಅವಧಿಯಲ್ಲಿ ಅವರಿಗೆ
ಅನುಕೂಲ ಮಾಡಿಕೊಟ್ಟಿದ್ದ ಕಾರಣಕ್ಕೆ ಕೃತಜ್ಞತೆ ತಿಳಿಸಲು ಮನೆಗೆ ಬಂದಿದ್ದರು.
● ಶ್ರೀನಿವಾಸಪ್ರಸಾದ್, ಮಾಜಿ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.