15ಕ್ಕೆ ಬಿಜೆಪಿ ಎರಡನೇ ಪಟ್ಟಿ?
Team Udayavani, Apr 11, 2018, 7:00 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಏ.15ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ. ಏ.12 ಮತ್ತು 13ರಂದು ಅಮಿತ್ ಶಾ ರಾಜ್ಯ ಪ್ರವಾಸ ಮಾಡಲಿದ್ದು, ಏ.14 ರಂದು ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ತೆರಳಲಿದ್ದಾರೆ. ಏ.15ರಂದು ಕೇಂದ್ರ ಚುನಾವಣಾ ಸಮಿತಿ ಸಭೆಯಿದ್ದು ಅಂದು 60 ರಿಂದ 70 ಅಭ್ಯರ್ಥಿಗಳ ಮತ್ತೂಂದು ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಪಟ್ಟಿ 13ಕ್ಕೆ ಬಿಡುಗಡೆಯಾಗುವ ಸಾಧ್ಯತೆಯಿದ್ದು ಅದನ್ನು ನೋಡಿಕೊಂಡು ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ, ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಉಸ್ತುವಾರಿಗಳಾದ ಪ್ರಕಾಶ್ ಜಾವಡೇಕರ್, ಮುರಳೀಧರ್ರಾವ್, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಸಂಸದೆ ಶೋಭಾ ಕರಂದ್ಲಾಜೆ ಅವರು ಸಭೆ ನಡೆಸಿ ಎರಡನೇ ಪಟ್ಟಿ ಕುರಿತು ಚರ್ಚಿಸಿದರು.
ಈಗಾಗಲೇ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹಣೆ ಹಾಗೂ ರಾಜ್ಯ ಬಿಜೆಪಿ ನಡೆಸಿದ್ದ ಸಮೀಕ್ಷೆ ಆಧಾರದಲ್ಲಿ ಸಂಭವನೀಯರ ಪಟ್ಟಿ ಕೇಂದ್ರ ನಾಯಕರಿಗೆ ಕಳುಹಿಸಿರುವುದರಿಂದ ಅದರಲ್ಲಿ ಏನಾದರೂ ಬದಲಾವಣೆ ಮಾಡಬೇಕೇ? ಮೊದಲ ಪಟ್ಟಿಗೆ ಕಾಂಗ್ರೆಸ್ ಕಾರ್ಯತಂತ್ರ ಏನಿರಬಹುದು? ಅಸಮಾಧಾನಿತರ ಶಮನಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.