ಕುಂದಾಪುರ ತಾ.ಪಂ.ಕಿರಿಯ ಎಂಜಿನಿಯರ್ ಮನೆ, ಕಚೇರಿಗೆ ಎಸಿಬಿ ದಾಳಿ
Team Udayavani, Apr 11, 2018, 7:52 AM IST
ಕುಂದಾಪುರ: ಆದಾಯ ಮೀರಿ ಆಸ್ತಿ, ಹಣ ಸಂಪಾದಿಸಿದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕುಂದಾಪುರ ತಾ.ಪಂ.ಕಿರಿಯ ಎಂಜಿನಿಯರ್ (ಎಡಬ್ಲೂಇ) ರವಿಶಂಕರ್ ಅವರ ಕುಂದಾಪುರದ ನಾನಾ ಸಾಹೇಬ್ ರಸ್ತೆಯಲ್ಲಿರುವ ಮನೆ, ತಾ.ಪಂ.ನಲ್ಲಿರುವ ಅವರ ಕಚೇರಿ ಹಾಗೂ ಹೊನ್ನಾವರದ ಮಾವನ ಮನೆಗೆ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಏಕಕಾಲದಲ್ಲಿ ದಾಳಿ ನಡೆಸಿದೆ.
ಪಶ್ಚಿಮ ವಲಯದ ಭ್ರಷ್ಟಚಾರ ನಿಗ್ರಹ ದಳದ ಎಸ್‌ಪಿ ಶ್ರುತಿ ನೇತೃತ್ವದ ತಂಡ ಖಚಿತ ಮಾಹಿತಿ ಆಧರಿಸಿ ಮಂಗಳವಾರ ಬೆಳಗ್ಗೆ 6 ಗಂಟೆಗೆ ದಾಳಿ ನಡೆಸಿದ್ದು, ದಾಳಿ ವೇಳೆ ರವಿಶಂಕರ್ ಹಾಗೂ ಅವರ ಮನೆಯವರ ಹೆಸರಲ್ಲಿರುವ ಆಸ್ತಿ ದಾಖಲೆಗಳು, ನಗದು, ಚಿನ್ನಾಭರಣಗಳ ಕುರಿತ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ರವಿಶಂಕರ್ ಮೂಲತಃ ಕುಂದಾಪುರ ದವರೇ ಆಗಿದ್ದು, ವೃತ್ತಿಜೀವನ ಆರಂಭ ವಾದ 1989ರಿಂದಲೂ ಕುಂದಾಪುರ ತಾ.ಪಂ. ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಬೆಳಗ್ಗಿನಿಂದ ಸಂಜೆಯವರೆಗೂ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರಿದಿದ್ದು, ಈ ವೇಳೆ ಸ್ವಲ್ಪ ನಗದು ಹಾಗೂ ಚಿನ್ನಾಭರಣಗಳು ಸಿಕ್ಕಿವೆ. ಅವರ ಹೆಸರಲ್ಲಿರುವ ಸೈಟು ಗಳು ಹಾಗೂ ಮನೆಯ ಕುರಿತು ದಾಖಲೆಗಳನ್ನು ಪರಿಶೀಲನೆ ನಡೆಸಲಾಗು ವುದು. ಒಂದು ಲಾಕರ್ ತಪಾಸಣೆ ಬಾಕಿಯಿದ್ದು, ಅದನ್ನು ಬುಧವಾರ ತೆರೆಯುವುದಾಗಿ ಎಸಿಬಿ ಎಸ್ಪಿ ಶ್ರುತಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಎಸಿಬಿ ಡಿವೈಎಸ್‌ಪಿಗಳಾದ ಉಡುಪಿಯ ದಿನಕರ್ ಶೆಟ್ಟಿ, ಮಂಗಳೂರಿನ ಸುಧೀರ್ ಹೆಗ್ಡೆ, ಇನ್ಸ್ ಪೆಕ್ಟರ್‌ಗಳಾದ ಜಯರಾಮ ಡಿ. ಗೌಡ, ಸತೀಶ್ ಕುಮಾರ್ ಹಾಗೂ ಸಿಬಂದಿ ದಾಳಿ ನಡೆಸಿದ ಎಸಿಬಿ ತಂಡದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Kollywood: ಕಾರ್ತಿಕ್ ಸುಬ್ಬರಾಜ್ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್ ಆಗಿದೆ ಮಾಸ್
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.