ಬೈಕ್ ಕಳವು ಆರೋಪಿ ಸೆರೆ
Team Udayavani, Apr 11, 2018, 8:03 AM IST
ಮೂಲ್ಕಿ: ಬೈಕ್ ಕಳವು ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೆಡ್ಡಿಯಂಗಡಿ ಆದರ್ಶ ನಗರದ ನಿವಾಸಿ ಅಬ್ದುಲ್ ಅಮೀರ್ (18) ಆರೋಪಿ.
ರಾಷ್ಟ್ರೀಯ ಹೆದ್ದಾರಿಯ ಕೊಲಾ°ಡು ಬಳಿ ಮೂಲ್ಕಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಉಡುಪಿ ಕಡೆಯಿಂದ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದ ಆತ ತನಿಖೆಗೆ ಸೂಕ್ತ ದಾಖಲೆಗಳನ್ನು ಕೇಳಿದಾಗ ಅನುಮಾನಾಸ್ಪದವಾಗಿ ವರ್ತಿಸಿದಾಗ ಆತನ್ನು ವಶಕ್ಕೆ ಪಡೆಯಲಾಯಿತು.
ತನಿಖೆಗೆ ಒಳಪಡಿಸಿದಾಗ ಆತ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಸುರತ್ಕಲ್ ಪೆಡ್ಡಿಯಂಗಡಿ ಆದರ್ಶ ನಗರದ ವ್ಯಕ್ತಿಯೊಬ್ಬರ ಮನೆಯಿಂದ ಕಳವು ನಡೆಸಿದ್ದು ಎಂದು ತಿಳಿದು ಬಂತು.
ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರ ಮಾರ್ಗದರ್ಶನದಲ್ಲಿ ಉಪ ಆಯುಕ್ತರಾದ ಹನುಮಂತ ರಾಯ ಮತ್ತು ಉಮಾ ಪ್ರಶಾಂತ್ ಅವರ ನಿರ್ದೇಶನದಲ್ಲಿ ಪಣಂಬೂರು ಸಹಾಯಕ ಆಯುಕ್ತ ರಾಜೇಂದ್ರ ಅವರ ನೇತೃತ್ವದಲ್ಲಿ ಮೂಲ್ಕಿ ಇನ್ಸ್‌ಪೆಕ್ಟರ್ ಶ್ರೀಕಾಂತ್, ಎಸ್.ಐ. ಶೀತಲ್ ಅಲಗೂರು, ಎ.ಎಸ್.ಐ. ಚಂದ್ರಶೇಖರ್, ಸಿಬಂದಿ ಧರ್ಮೇಂದ್ರ, ಅಣ್ಣಪ್ಪ, ಸುರೇಶ್, ಮಹಮ್ಮದ್ ಹುಸೇನ್, ಬಸವರಾಜ್, ಮನೋಜ್ ಕುಮಾರ್ ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದರು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.