ಯುವಕರ ಸ್ವಾವಲಂಬನೆಯೇ ನಮ್ಮ ಗುರಿ: ಸೊರಕೆ
Team Udayavani, Apr 12, 2018, 7:20 AM IST
ಕಾಪು: ಯುವ ಶಕ್ತಿ ರಾಷ್ಟ್ರದ ಶಕ್ತಿ. ದೇಶದ ಅಭಿವೃದ್ಧಿಗೆ ಯುವಶಕ್ತಿಯ ಅಭಿವೃದ್ಧಿ ಅಗತ್ಯ. ಕ್ಷೇತ್ರದ ಯುವಜನರಲ್ಲಿ ಚೈತನ್ಯ ತುಂಬಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಕೆಲಸ ನಮ್ಮಿಂದ ನಡೆಯಬೇಕಿದೆ ಎಂದು ಕಾಪು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು.
ಅವರು ಕಾಪು ರಾಜೀವ ಭವನದಲ್ಲಿ ಮಂಗಳವಾರ ನಡೆದ ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ವಿಭಾಗದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡುತ್ತಿದ್ದರು. ಯುವಕರಲ್ಲಿ ಸಾಮರ್ಥ್ಯ ಅರಿತುಕೊಂಡು ಅವರನ್ನು ಸಧೃಢಗೊಳಿಸಲು ಯುವ ಕಾಂಗ್ರೆಸ್ ಮೂಲಕವಾಗಿಯೂ ಪ್ರಯತ್ನಿಸಲಾಗುತ್ತಿದೆ ಎಂದರು.ಈ ಸಂದರ್ಭ ಗ್ರಾಮೀಣ ಯುವ ಕಾಂಗ್ರೆಸ್ ಪದಾಧಿಕಾರಿಗಳ ನೇಮಕಾತಿ ಪತ್ರವನ್ನು ವಿತರಿಸಲಾಯಿತು
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಡಾ| ದೇವಿಪ್ರಸಾದ್ ಶೆಟ್ಟಿ, ಡಿಸಿಸಿ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಕಾಪು ಬ್ಲಾಕ್ ಉಸ್ತುವಾರಿ ಅಶೋಕ್ ಕುಮಾರ್ ಕೊಡವೂರು, ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾವತಿ ಸಾಲ್ಯಾನ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಅಜೀಜ್, ಪಕ್ಷದ ಮುಖಂಡರಾದ ಫರ್ಜಾನ, ಕಿಶೋರ್ ಕುಮಾರ್, ದೀಪಕ್ ಕುಮಾರ್ ಎರ್ಮಾಳ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಅಬ್ದುಲ್ ಅಜೀಜ್, ನವೀನ್ ಶೆಟ್ಟಿ, ನಿಯಾಜ್, ಇಮ್ರಾನ್, ಪ್ರಭಾಕರ ಆಚಾರ್ಯ ಉಪಸ್ಥಿತರಿದ್ದರು. ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿ.ಸೋಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.