ಬಂದ್‌ ಅಸಾಂವಿಧಾನಿಕ: ಹೈಕೋರ್ಟ್‌

Team Udayavani, Apr 12, 2018, 6:15 AM IST

High-court-Karnataka-New.jpg

ಬೆಂಗಳೂರು:”ಬಂದ್‌ ಆಚರಣೆ’ ಅಸಂವಿಧಾನಿಕ ಎಂದು ಪುನರುತ್ಛರಿಸಿರುವ ಹೈಕೋರ್ಟ್‌, ಬಂದ್‌ ವೇಳೆ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಕ್ರಮ ವಹಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದೆ.

ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಏಪ್ರಿಲ್‌ 12ರಂದು ನೀಡಿದ್ದ ಬಂದ್‌ ಕರೆ ಸೇರಿದಂತೆ ಕನ್ನಡ ವಾಟಾಳ್‌ ಪಕ್ಷ ಕರೆ ನೀಡುವ ಬಂದ್‌ ಆಚರಣೆಗೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಬುಧವಾರ  ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿತು.

ವಿಚಾರಣೆ ವೇಳೆ ನ್ಯಾಯಪೀಠ, ಬಂದ್‌ಗೆ ಸರ್ಕಾರವೇ ಪರೋಕ್ಷವಾಗಿ ಬೆಂಬಲ ನೀಡುತ್ತದೆ ಎಂದು ಅರ್ಜಿದಾರರು ಆರೋಪಿಸುತ್ತಿದ್ದಾರೆ. ಇದಕ್ಕೆಲ್ಲಾ ಸರ್ಕಾರ ಅವಕಾಶ ಮಾಡಿಕೊಡಬಾರದು. ಬಂದ್‌ಗೆ ಕರೆ ನೀಡುವವರು ನಡುವೆ ಯಾವುದೇ ರೀತಿಯ ಹೊಂದಾಣಿಕೆ ಇರಬಾರದು. ಬಸ್‌ ಸೇವೆ ಸಂಚಾರ ಸ್ಥಗಿತ ಸೇರಿದಂತೆ ಯಾವುದೇ ಸಹಕಾರವಿರಬಾರದು. ಜತೆಗೆ ಸಾರ್ವಜನಿಕರ ಜೀವನಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು  ಮೌಖೀಕ ಸಲಹೆ ನೀಡಿತು. ಒಂದು ವೇಳೆ ಬಂದ್‌ ನಡೆದರೆ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿತು.

ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಬಂದ್‌ಗೆ ಸರ್ಕಾರ ಯಾವುದೇ ರೀತಿಯ ಬೆಂಬಲವೂ ನೀಡುತ್ತಿಲ್ಲ. ಕೋರ್ಟ್‌ ಆದೇಶಕ್ಕೆ ಬದ್ಧವಾಗಿದೆ. ಬಂದ್‌ ನಡೆದರೆ  ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ  ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಬಂದ್‌  ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್‌  ಸ್ಪಷ್ಟ ಆದೇಶವಿದೆ. ಈ ಕೋರ್ಟ್‌ ಕೂಡ ಆದೇಶ ನೀಡಿದ್ದು,  ಈ ಆದೇಶ ಜಾರಿಗೊಳಿಸಬೇಕು. ಅರ್ಜಿದಾರರು ಎತ್ತಿರುವ ಇನ್ನಿತರೆ  ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಸರ್ಕಾರ  ಸೂಕ್ತ ಲಿಖೀತ ರೂಪದ ಆಕ್ಷೇಪಣೆಗಳನ್ನು ಸಲ್ಲಿಸಿದ ಬಳಿಕ ಸುದೀರ್ಘ‌ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ ಏಪ್ರಿಲ್‌ 26ಕ್ಕೆ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.