ಪಿಯು ಕಾಲೇಜಿನ ಶೈಕ್ಷಣ ಚಟುಟಿಕೆ ವೇಳಾಪಟ್ಟಿ ಪ್ರಕಟ
Team Udayavani, Apr 12, 2018, 6:25 AM IST
ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು 2018-19ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಹಾಗೂ ರಜಾದಿನದ ವೇಳಾಪಟ್ಟಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ.
ಮೇ 2ರಿಂದ ದ್ವಿತೀಯ ಪಿಯುಸಿ ಹಾಗೂ ಮೇ 14ರಿಂದ ಪ್ರಥಮ ಪಿಯುಸಿ ತರಗತಿಗಳು ಆರಂಭವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಲಾಖೆಯು ವಾರ್ಷಿಕ ವೇಳಾಪಟ್ಟಿಗಿಂತಲೂ ಮೊದಲೇ ಪರೀಕ್ಷೆ ನಡೆಸಿದೆ. ಫೆ.21ಕ್ಕೆ ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿದ್ದು, ವಿದ್ಯಾರ್ಥಿಗಳಿಗೆ 69 ದಿನ ರಜೆ ಸಿಕ್ಕಿದೆ. ಪ್ರಥಮ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 2ರಿಂದ ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದೆ ಎಂದು ಪಿಯು ಇಲಾಖೆಯ ನಿರ್ದೇಶಕಿ ಸಿ.ಶಿಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ.17ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದಿದ್ದು, ಮಾ.18ರಂದಲೇ ಘೋಷಣೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮುಂದಿನ ವರ್ಷಕ್ಕೆ ಪ್ರಥಮ ಪಿಯುಸಿ ಸೇರುವ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಂಚಿಕೆಯಾಗಿರುವ ಪ್ರಾಯೋಗಿಕ ತರಗತಿ ಮತ್ತು ಥಿಯರಿ ತರಗತಿಗೆ ಅನುಕೂಲವಾಗುವಂತೆ ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಇಲಾಖೆಯಿಂದ ಸಿದ್ಧಪಡಿಸಿರುವ ಕ್ವೆಶ್ಚನ್ ಬ್ಯಾಂಕ್ ಅನ್ನು ಪ್ರಾಯೋಗಿಕ ತರಗತಿಯಲ್ಲಿ ಉಪಯೋಗಿಸಿಕೊಳ್ಳಲಾಗುತ್ತದೆ. ಸರ್ಕಾರಿ ಕಾಲೇಜುಗಳು ಶೈಕ್ಷಣಿಕ ಚಟುವಟಿಕೆ ಆರಂಭಿಸುವ ಪೂರ್ವದಲ್ಲಿ ದಾಖಲಾತಿ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಕ್ಟೋಬರ್ 14ರಿಂದ 28ರ ತನಕ ಮಧ್ಯಂತರ ರಜೆ ಹಾಗೂ ಮಾ.20ರಿಂದ ಬೇಸಿಗೆ ರಜೆ ಆರಂಭವಾಗುತ್ತದೆ. ಶೈಕ್ಷಣಿಕ ವರ್ಷದಲ್ಲಿ ಆಚರಿಸಬೇಕಾದ ಹಬ್ಬಗಳು, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಬಗ್ಗೆಯೂ ಪರಿಷ್ಕೃತ ವೇಳಾಪಟ್ಟಿಯಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.