ವಲಸಿಗರಿಗೆ ಟಿಕೆಟ್‌: ಖರ್ಗೆ ಆಕ್ಷೇಪ

Team Udayavani, Apr 12, 2018, 6:25 AM IST

Mallikarjun-Kharge–223030.jpg

ಬೆಂಗಳೂರು:ವಲಸಿಗರಿಗೆ ಟಿಕೆಟ್‌  ನೀಡುವುದು ಸೇರಿದಂತೆ ಕಾಂಗ್ರೆಸ್‌ ಅಭ್ಯರ್ಥಿಗಳ ಟಿಕೆಟ್‌ ಆಯ್ಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರ ನಡೆಗೆ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಭ್ಯರ್ಥಿಗಳ ಆಯ್ಕೆ ಹಾಗೂ ಬೇರೆ ಪಕ್ಷದಿಂದ ಕರೆತರುವ ಸಂದರ್ಭದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಕೂಡ ಸಮ್ಮತಿಸುತ್ತಿರುವುದರ ಬಗ್ಗೆ ದೆಹಲಿಯಲ್ಲಿ ಮಂಗಳವಾರ ನಡೆದ ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಖರ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ವಿಶೇಷವಾಗಿ ಬೇರೆ ಪಕ್ಷಗಳಿಂದ ಕರೆತಂದಿರುವ ಎಲ್ಲರಿಗೂ ಟಿಕೆಟ್‌ ನೀಡುವ ಭರವಸೆ ನೀಡಿರುವುದಕ್ಕೆ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದು, ಪಕ್ಷದಲ್ಲಿ ಕಳೆದ ಚುನಾವಣೆಯಲ್ಲಿ ಸೋತವರು, ಪಕ್ಷಕ್ಕಾಗಿ ಕೆಲಸ ಮಾಡಿದವರು, ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳು ಇರುವಂತಹ ಕ್ಷೇತ್ರಗಳಿಗೂ ಬೇರೆ ಪಕ್ಷದಿಂದ ಕರೆದುಕೊಂಡು ಬಂದು ಅಂತವರಿಗೆ ಟಿಕೆಟ್‌ ನೀಡಿದರೆ, ಪಕ್ಷದ ಸಂಘಟನೆಯ ಜವಾಬ್ದಾರಿ ಯಾರು ನೋಡಿಕೊಳ್ಳುತ್ತಾರೆ ಎಂದು ನೇರವಾಗಿಯೇ ಅಸಮಾಧಾನ ಹೊರ ಹಾಕಿದರು.

ವಿಶೇಷವಾಗಿ ಬೀದರ್‌ ದಕ್ಷಿಣ ಕ್ಷೇತ್ರದಲ್ಲಿ ಅಶೋಕ್‌ ಖೇಣಿಯನ್ನು ಕರೆದುಕೊಂಡು ಬಂದು ಟಿಕೆಟ್‌ ನೀಡಲು ಮುಂದಾಗಿರುವುದು ಪಕ್ಷಕ್ಕೆ ದುಡಿದ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಅಶೋಕ್‌ ಖೇಣಿ ಚುನಾವಣೆಯಲ್ಲಿ ಸೋತರೆ, ಅವರು, ಆ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆಯೇ ಎಂದು ಖರ್ಗೆ ಖಾರವಾಗಿಯೇ ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಪುಲಕೇಶಿ ನಗರ ಕ್ಷೇತ್ರದಲ್ಲಿಯೂ 2013 ರಲ್ಲಿ ಪಕ್ಷದ ಪರಾಜಿತ ಅಭ್ಯರ್ಥಿ ಪ್ರಸನ್ನ ಕುಮಾರ್‌ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯ ಹೊಂದಿದ್ದು, ಅವರನ್ನು ಪರಿಗಣಿಸದೆ ಒಂದು ರಾಜಸಭೆ ಸೀಟಿಗಾಗಿ ಜೆಡಿಎಸ್‌ ಬಂಡಾಯ ಶಾಸಕರನ್ನೆಲ್ಲ ಸೇರಿಸಿಕೊಂಡು ಅವರೆಲ್ಲರಿಗೂ ಟಿಕೆಟ್‌ ನೀಡುವ ಭರವಸೆ ನೀಡಿದ್ದು ಸರಿಯಲ್ಲ. ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿಯೂ ಭೀಮಾನಾಯ್ಕಗೆ ಟಿಕೆಟ್‌ ನೀಡಲು ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹೂವಿನ ಹಡಗಲಿ ಕ್ಷೇತ್ರದಲ್ಲಿ ಪಿ.ಟಿ. ಪರಮೇಶ್ವರ್‌ ನಾಯಕ್‌ ಅವರ ನಡವಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದ್ದು, ಅವರ ಬದಲಿಗೆ ಕೃಷ್ಣಾ ನಾಯಕ್‌ಗೆ ಟಿಕೆಟ್‌ ನೀಡುವಂತೆ ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದೇ ಜಿಲ್ಲೆಯಲ್ಲಿ ಇಬ್ಬರೂ ಬಂಜಾರಾ ಸಮುದಾಯಕ್ಕೆ ಟಿಕೆಟ್‌ ನೀಡುವುದಕ್ಕೂ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.