ಬೈಕ್ ಸವಾರನ ಬೆದರಿಸಿ ದರೋಡೆ
Team Udayavani, Apr 12, 2018, 1:05 PM IST
ಕೆ.ಆರ್.ಪುರ: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ಹೆಲ್ಮೆಟ್‌ಧಾರಿ ದುಷ್ಕರ್ಮಿಗಳು, ಮಾರಕಾಸ್ಟ್ರದಿಂದ ಬೆದರಿಸಿ ದರೋಡೆ ಮಾಡಿರುವ ಘಟನೆ ಕೆ.ಆರ್.ಪುರದ ಪೈ ಲೇಔಟ್‌ನಲ್ಲಿ ನಡೆದಿದೆ.
ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಮುಂಜಾನೆ ಐದು ಘಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಕೆಲಸದ ಸ್ಥಳಕ್ಕೆ ಹೋಗುವಾಗ, ಅವರನ್ನು ಎರಡು ದ್ವಿಚಕ್ರ ವಾಹನಗಳಲ್ಲಿ ಹಿಂಬಾಲಿಸಿದ ಮೂವರು ದುಷ್ಕರ್ಮಿಗಳು, ಪೈ ಲೇಔಟ್‌ನಲ್ಲಿ ಬೈಕ್ ತಡೆದಿದ್ದಾರೆ. ನಂತರ ವ್ಯಕ್ತಿಗೆ ಲಾಂಗ್ ತೋರಿಸಿ, ಹಣ ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಈ ಕೃತ್ಯ ಪಕ್ಕದಲ್ಲೆ ಇರುವ ಅಪಾರ್ಟಮೆಂಟ್ ಒಂದರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ದರೋಡೆಗೆ ಒಳಗಾದ ವ್ಯಕ್ತಿ ಯಾರೆಂಬುದು ತಿಳಿದುಬಂದಿಲ್ಲ. ಜತೆಗೆ ಆ ವ್ಯಕ್ತಿ ಯಾವ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿಲ್ಲ. ಸಿಸಿಟಿವಿಯಲ್ಲಿ ಸೆರೆಯಾಗಿರುವ ದರೋಡೆ ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಎಚ್ಚತ್ತ ಮಹದೇವಪುರ ಠಾಣೆ ಪೋಲಿಸರು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಕೋಲಾರ ಭಾಗದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತವಾಗಿದೆ. ಈ ರೀತಿ ಘಟನೆಗಳು ನಡೆದಾಗ ಸಾರ್ವಜನಿಕರು ಭಯಪಡದೆ ಪೊಲೀಸ್ ಠಾಣೆಗೆ ಬಂದು ದೂರು ನೀಡಬೇಕು. ಪ್ರಸ್ತುತ ಪ್ರಕರಣದ ಆರೋಪಿಗಳ ಪತ್ತೆಗೆ ಈಗಾಗಲೇ ವಿಶೇಷ ತಂಡ ರಚಿಸಲಾಗಿದ್ದು, ಕೆಲವೇ ದಿನಗಳಲ್ಲಿ ದುಷ್ಕರ್ಮಿಗಳ ಪತ್ತೆ ಮಾಡುವುದಾಗಿ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.