ಪೊಲೀಸ್ ದಾಳಿ:ತಪ್ಪಿಸಿಕೊಳ್ಳುವಾಗ ಸೆಕ್ಸ್ ವರ್ಕರ್ಸ್‌ಗಳಿಬ್ಬರ ಸಾವು
Team Udayavani, Apr 12, 2018, 3:20 PM IST
ಮುಂಬಯಿ: ಪೊಲೀಸ್ ದಾಳಿಯ ವೇಳೆ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಈರ್ವರು ಲೈಂಗಿಕ ಕಾರ್ಯಕರ್ತೆಯರು ಕಟ್ಟಡವೊಂದರ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆಯು ದಕ್ಷಿಣ ಮುಂಬಯಿಯ ಗ್ರ್ಯಾಂಟ್ ರೋಡ್ ಪ್ರದೇಶದಲ್ಲಿ ಸಂಭವಿಸಿದೆ.
ಮಂಗಳವಾರ ರಾತ್ರಿ 10.30ರ ಸುಮಾರಿಗೆ ಡಿ.ಬಿ. ಮಾರ್ಗ ಪ್ರದೇಶದಲ್ಲಿರುವ ಓಂ ಬಿಲ್ಡಿಂಗ್‌ನಲ್ಲಿ ಈ ದುರದೃಷ್ಟಕರ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಹವ್ಯಾಪಾರ ದಂಧೆಗೆ ಹೆಸರಾಗಿರುವ ಆ ಪ್ರದೇಶದಲ್ಲಿ ಡಿ.ಬಿ. ಮಾರ್ಗ ಪೊಲೀಸ್ ಠಾಣೆಯ ತಂಡವೊಂದು ಗಸ್ತು ತಿರುಗುತ್ತಿತ್ತು. ಪೊಲೀಸರು ಕಟ್ಟಡದ ತಪಾಸಣೆಗೆಂದು ತೆರಳಿದಾಗ, ತಳಮಹಡಿಯಲ್ಲಿದ್ದ ವ್ಯಕ್ತಿಯೋರ್ವ ಇತರರನ್ನು ಎಚ್ಚರಿಸಿದ. ಇದರಿಂದ ಕಟ್ಟಡದ ಮೇಲ್ಮಹಡಿಯಲ್ಲಿದ್ದ ಲೈಂಗಿಕ ಕಾರ್ಯಕರ್ತರು ಗಾಬರಿಗೊಳ್ಳುವಂತೆ ಮಾಡಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ವೇಳೆ ಅವರಲ್ಲಿ ಈರ್ವರು ಮಹಿಳೆಯರು ಮೂರನೇ ಮಹಡಿಯ ಕಿಟಕಿಯಿಂದ ಹಗ್ಗದ ಸಹಾಯದಲ್ಲಿ ಇಳಿಯಲು ಯತ್ನಿಸಿದಾಗ ಕೈ ಜಾರಿ ಕೆಳಕ್ಕೆ ಬಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪೊಲೀಸರು ಕೂಡಲೇ ಬೈಕುಲಾದಲ್ಲಿರುವ ಸರಕಾರಿ ಸಂಚಾಲಿತ ಜೆ. ಜೆ. ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆಯ ವೇಳೆ ಈರ್ವರೂ ಮೃತಪಟ್ಟರು ಎಂದು ಅಧಿಕಾರಿ ಹೇಳಿದ್ದಾರೆ.
ಮೃತ ಮಹಿಳೆಯರ ಪೈಕಿ ಇಬ್ಬರೂ ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ. ಡಿ.ಬಿ.ಮಾರ್ಗ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.