ಬಾಂಗ್ಲಾದೇಶದಲ್ಲಿ ಸರಕಾರಿ ಉದ್ಯೋಗ ಮೀಸಲಾತಿ ವ್ಯವಸ್ಥೆ ರದ್ದು
Team Udayavani, Apr 12, 2018, 3:48 PM IST
ಢಾಕಾ : ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸುವ “ಕೋಟಾ ಸಿಸ್ಟಮ್’ ಅನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ವಿದ್ಯಾರ್ಥಿಗಳ ಚಳವಳಿಗೆ ಮಣಿದು ರದ್ದು ಮಾಡಲು ನಿರ್ಧರಿಸಿದ್ದಾರೆ.
ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ಕೋಟಾ ಕಲ್ಪಿಸುವ ವ್ಯವಸ್ಥೆಯ ವಿರುದ್ಧ ಢಾಕಾದಲ್ಲಿ ವಿದ್ಯಾರ್ಥಿಗಳು ಪ್ರಬಲ ಪ್ರತಿಭಟನೆ ನಡೆಸಿ ಪ್ರಮುಖ ರಸ್ತೆಗಳನ್ನು ತಡೆದು ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದರು.
ಢಾಕಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಹಿಂಸಾತ್ಮಕ ಪ್ರತಿಭಟನೆಯನ್ನು ಹತ್ತಿಕ್ಕಲು ಸರಕಾರ ಪೊಲೀಸರನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಿತ್ತು. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಘರ್ಷದಲ್ಲಿ ಅಶ್ರುವಾಯ ಮತ್ತು ರಬ್ಬರ್ ಗುಂಡುಗಳು ಪ್ರಯೋಗಿಸಲ್ಪಟ್ಟ ಕಾರಣ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು.
ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಮಣಿದ ಪ್ರಧಾನಿ ಹಸೀನಾ ಅವರು ಸರಕಾರಿ ಉದ್ಯೋಗದಲ್ಲಿರುವ ಕೋಟಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದು ಪಡಿಸುವ ನಿರ್ಧಾರ ಕೈಗೊಂಡರು ಎಂದು ವರದಿಗಳು ತಿಳಿಸಿವೆ.
ಹಾಗಿದ್ದರೂ ಸರಕಾರ ವಿಕಲಾಂಗರಿಗೆ ಮತ್ತು ಜನಾಂಗೀಯವಾಗಿ ಹಿಂದುಳಿದ ಅಲ್ಪಸಂಖ್ಯಾಕರಿಗೆ ಸರಕಾರಿ ಉದ್ಯೋಗದಲ್ಲಿರುವ ಮೀಸಲಾತಿಯನ್ನು ಮುಂದುವರಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್ ರಾಡಾರ್
Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.