ಬೀದಿ ನಾಯಿಗಳ ದಾಳಿಗೆ ನೀರನ್ನರಿಸಿ ಬಂದ ಜಿಂಕೆ ಬಲಿ
Team Udayavani, Apr 12, 2018, 4:47 PM IST
ತರೀಕೆರೆ: ಬೀದಿನಾಯಿಗಳ ದಾಳಿಗೆ ಸಿಲುಕಿ ಜಿಂಕೆಯೊಂದು ಮೃತಪಟ್ಟ ಘಟನೆ ಘಟನೆ ಎ.ರಾಮನಹಳ್ಳಿಯಲ್ಲಿ ಮಂಗಳವಾರ ಸಂಭವಿಸಿದೆ. ಸುಮಾರು ನಾಲ್ಕು ವರ್ಷದ ಜಿಂಕೆ ನೀರನ್ನು ಅರಸುತ್ತ ಕಾಡಿನಿಂದ ಊರಿನ ಕೆರೆಯತ್ತ ಆಗಮಿಸಿದೆ. ಈ ಸಂದರ್ಭದಲ್ಲಿ ಜಿಂಕೆ ಮೇಲೆ ಎರಗಿದ ಬೀದಿನಾಯಿಗಳು ಕಚ್ಚಿ ತೀವ್ರ ಗಾಯಗೊಳಿಸಿದವು. ಇದನ್ನು ಕಂಡ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದರೂ ಫಲಕಾರಿಯಾಗದೆ ಗಾಯಗೊಂಡಿದ್ದ ಜಿಂಕೆ ಮೃತಪಟ್ಟಿದೆ. ಮೃತ ಜಿಂಕೆಯ ಕಳೆಬರವನ್ನು ಪಟ್ಟಣದ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತಂದು, ಸಹಾಯಕ ಉಪ ಅರಣ್ಯಸಂರಕ್ಷಣಾಧಿಕಾರಿ ಬಿ.ಎಂ. ರವೀಂದ್ರಕುಮಾರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಸುಟ್ಟುಹಾಕಲಾಯಿತು. ವನಪಾಲಕ ಕೆ.ಕೆ. ಕೃಷ್ಣಮೂರ್ತಿ, ಅರಣ್ಯ ರಕ್ಷಕರಾದ ರಾಬರ್ಟ್, ಎ.ಆರ್. ಕೃಷ್ಣಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.