ಕಾರ್ಕಳ: ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
Team Udayavani, Apr 13, 2018, 7:05 AM IST
ಕಾರ್ಕಳ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಒಂದೆರಡು ದಿನಗಳ ಒಳಗಾಗಿ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿಯ ಘೋಷಣೆಯಾಗಲಿದೆ. ಅನಂತರ ಪಕ್ಷದ ಚುನಾವಣಾ ಪ್ರಕ್ರಿಯೆಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಭಾವ ಅವರು ಎ. 12ರಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಭ್ಯರ್ಥಿ ಆಯ್ಕೆಯ ವಿಚಾರಕ್ಕೆ ಸಂಬಂಧಸಿದಂತೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಗೊಂದಲಗಳಿಲ್ಲ. ಆಕಾಂಕ್ಷಿಗಳಿದ್ದಾರೆ ಎನ್ನುವ ಕಾರಣಕ್ಕೆ ಗೊಂದಲವಿದೆ ಎನ್ನುಲು ಸಾಧ್ಯವಿಲ್ಲ. ಈ ಹಿಂದೆ ಮೂವರೂ ಆಕಾಂಕ್ಷಿಗಳು ಹೆಬ್ರಿಯಲ್ಲಿ ಒಟ್ಟಾಗಿದ್ದು ಸಭೆ ನಡೆಸಲಾಗಿದೆ. ಎಲ್ಲರೂ ಒಗ್ಗಟ್ಟಾಗಿಯೇ ಈ ಭಾರಿಯ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಭರತ್ ಮುಂಡೋಡಿ, ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಪಕ್ಷಕ್ಕೆ ಅದರದೇ ಆದ ಕೆಲವು ನಿಲುವುಗಳನ್ನು ಹೊಂದಿದೆ. ಸದ್ಯ ಪ್ರತಿಯೊಬ್ಬ ಕಾರ್ಯಕರ್ತರು ಕಾಂಗ್ರೆಸ್‌ನ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆದಿದೆ. ಗ್ರಾಮ ಮಟ್ಟದಲ್ಲಿ ಸಂಘಟನೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ನ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಉಸ್ತುವಾರಿ ಶೇಖರ್ ಮಡಿವಾಳ, ಸುಭೋದ್ ಶೆಟ್ಟಿ, ಪಕ್ಷದ ಬ್ಲಾಕ್ ಅಧ್ಯಕ್ಷ ಸುಧಾಕರ ಕೋಟ್ಯಾನ್, ಜಾರ್ಜ್ ಕ್ಯಾಸ್ತೆಲಿನೋ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.