ಸಿದ್ಧಸೂತ್ರ ಬಿಟ್ಟ ಲವ್ ಸ್ಟೋರಿ
Team Udayavani, Apr 13, 2018, 7:30 AM IST
ಕಿರುತೆರೆಯಲ್ಲಿ ಅನುಭವ ಪಡೆದ ಮಂದಿಯ ಮುಂದಿನ ಪಯಣ ಆರಂಭವಾಗೋದು ಹಿರಿತೆರೆಯಲ್ಲಿ. ಅದು ನಟ-ನಟಿಯರಿಂದ ಹಿಡಿದು ಕಲಾವಿದರವರೆಗೂ. ಈಗಾಗಲೇ ಸಾಕಷ್ಟು ಮಂದಿ ಕಿರುತೆರೆಯಿಂದ ಹಿರಿತೆರೆಗೆ ಬಂದು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ. ಈಗ ಅದಕ್ಕೆ ಹೊಸ ಸೇರ್ಪಡೆ ಜೆ.ಕೆ.ಆದಿ. ಧಾರಾವಾಹಿಗಳನ್ನು ನಿರ್ದೇಶಿಸಿ ಅನುಭವಿರುವ ಆದಿ ಈಗ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ಅವರಿಟ್ಟ ಹೆಸರು “ಭಾನು ವೆಡ್ಸ್ ಭೂಮಿ’.
ಚಿತ್ರದ ಟೈಟಲ್ ಕೇಳಿದ ಮೇಲೆ ಇದೊಂದು ಲವ್ ಸ್ಟೋರಿ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಆದರೆ, ನಿರ್ದೇಶಕ ಆದಿ ರೆಗ್ಯುಲರ್ ಪ್ಯಾಟರ್ನ್ ಬಿಟ್ಟು ಬೇರೆ ತರಹ ಪ್ರಯತ್ನಿಸುತ್ತಿದ್ದಾರಂತೆ. “ಗಾಂಧಿನಗರದ ಸಿದಟಛಿಸೂತ್ರಗಳನ್ನು ಬಿಟ್ಟು ಸಿನಿಮಾ ಮಾಡುತ್ತಿದ್ದೇನೆ. ಐಟಂ ಸಾಂಗ್, ಇಂಟ್ರೋಡಕ್ಷನ್, ಫೈಟ್, ಬಿಲ್ಡಪ್‌ಗ್ಳಿಲ್ಲದೇ ಕಥೆಗೆ ಹೆಚ್ಚು ಒತ್ತುಕೊಟ್ಟು ಈ ಸಿನಿಮಾ ಮಾಡುತ್ತಿದ್ದೇನೆ’ ಎನ್ನುವುದು ಆದಿ ಮಾತು. ಚಿತ್ರದ ಕ್ಲೈಮ್ಯಾಕ್ಸ್ ತುಂಬಾ ಭಿನ್ನವಾಗಿರುತ್ತದೆಯಂತೆ. ಮೈಸೂರನ್ನು ಹಿನ್ನೆಲೆಯಾಗಿಟ್ಟುಕೊಂಡು ಒಂದು ಕಾಲ್ಪನಿಕ ಕಥೆಯನ್ನು ಹೆಣೆಯಲಾಗಿದೆಯಂತೆ.
ಸೂರ್ಯಪ್ರಭ್ ಈ ಚಿತ್ರದ ನಾಯಕ. ಸಿನಿಮಾ ಮೇಲಿನ ಪ್ರೀತಿಯಿಂದ ಉದ್ಯೋಗ ತೊರೆದ ಸೂರ್ಯಪ್ರಭ್ ನಟನೆಗೆ ಬರಲು
ಡಾ.ರಾಜ್ ಪ್ರೇರಣೆಯಂತೆ. ಇನ್ನು ಕ್ಯಾಮರಾ ಮುಂದೆ ನಿಲ್ಲುವ ಮುನ್ನ ಸಿದಟಛಿತೆ ಬೇಕೆಂಬ ಕಾರಣಕ್ಕೆ ಆ್ಯಕ್ಟಿಂಗ್ ಕೋರ್ಸ್ ಕೂಡಾ ಮಾಡಿದ್ದಾಗಿ ಹೇಳಿಕೊಳ್ಳುತ್ತಾರೆ ಅವರು. ಇಲ್ಲಿ ಅವರು ಶ್ರೀಮಂತ ಹಿನ್ನೆಲೆಯಿರುವ ಲವರ್‌ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಚಿತ್ರದಲ್ಲಿ ರಿಶಿತಾ ಮಲಾ°ಡ್ ನಾಯಕಿ. ಮೈಸೂರಿಗೆ ಬಂದಾಗ ನಾಯಕ ಪ್ರೀತಿಗೆ ಬೀಳುವ ಪಾತ್ರ ಅವರದು. ಚಿತ್ರದಲ್ಲಿ ಶೋಭರಾಜ್
ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರವನ್ನು ಕಿಶೋರ್ ಶೆಟ್ಟಿ ನಿರ್ಮಿಸುತ್ತಿದ್ದಾರೆ.
ಚಿತ್ರಕ್ಕೆ ಲೋಕಿ ಸಂಗೀತವಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಮಡಿಕೇರಿ ಹಾಗೂ ಕಾರವಾರ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.