ವಾಟಾಳ್ ರಾಜಭವನ ಮುತ್ತಿಗೆ ಯತ್ನ ವಿಫಲ
Team Udayavani, Apr 13, 2018, 6:45 AM IST
ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಂಬಂಧ ತಮಿಳುನಾಡಿನ ಧೋರಣೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಹಮ್ಮಿಕೊಂಡಿದ್ದ
ರಾಜಭವನ ಮುತ್ತಿಗೆ ಕಾರ್ಯಕ್ರಮವನ್ನು ವಿಫಲಗೊಳಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿ ಇನ್ನಿತರ ಕನ್ನಡ ಪರ ಸಂಘಟನೆಗಳ ನಾಯಕರ ಜತೆಗೂಡಿ ವಾಟಾಳ್ ನಾಗರಾಜ್ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರೂ ಮಾರ್ಗ ಮಧ್ಯೆ ಅವರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆ ಮಾಡಿದರು.
ವಾಟಾಳ್ ನಾಗರಾಜ್, ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ, ಪ್ರತಿಪಕ್ಷ ಮುಖಂಡ ಸ್ಟಾಲಿನ್ ಸೇರಿ ಇನ್ನಿತರ ರಾಜಕೀಯ ಮುಖಂಡರು ನ್ಯಾಯಾಲಯದ ಆದೇಶಕ್ಕೂ ಮನ್ನಣೆ ನೀಡದೆ ರಾಜಕೀಯ ಉದ್ದೇಶಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ
ಎಂದರು. ಚ್.ಡಿ.ದೇವೇಗೌಡರನ್ನು ಹೊರತುಪಡಿಸಿ ರಾಜ್ಯದ ಯಾವುದೇ ಸಂಸದರು ಕಾವೇರಿ ವಿಚಾರದ ಬಗ್ಗೆ ಬಾಯಿ ಬಿಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸಂಸದರ ನಿವಾಸಗಳಿಗೆ ಬೀಗ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಚಿತ್ರ ವಿತರಣೆ, ಹಂಚಿಕೆ ಬೇಡ: ಕನ್ನಡಿಗರನ್ನು, ಕಾವೇರಿಯನ್ನು ರಾಜಕೀಯ ವಿಚಾರಕ್ಕೆ ಬಳಸಿಕೊಳ್ಳುತ್ತಿರುವ ಚಿತ್ರ ನಟ ಕಮಲ್ ಹಾಸನ್ ಮತ್ತು ರಜನಿಕಾಂತ್ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾ.ರಾ.ಗೋವಿಂದು, ಯಾವುದೇ ಕಾರಣಕ್ಕೂ ಈ ನಟರ ಚಿತ್ರಗಳನ್ನು ಕನ್ನಡಿಗರು ಹಂಚಿಕೆ ಮತ್ತು ವಿತರಣೆ ಮಾಡಬಾರದೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.