ಪೊಲೀಸ್ ಸಿಬಂದಿ ಕಾರಿನಲ್ಲೇ ಹೆರಿಗೆ
Team Udayavani, Apr 13, 2018, 8:40 AM IST
ಮಂಗಳೂರು: ಮಹಿಳೆಯೊಬ್ಬರು ಹೆರಿಗೆ ನೋವು ಕಾಣಿಸಿಕೊಂಡು ಸಕಾಲದಲ್ಲಿ ಆಸ್ಪತ್ರೆಗೆ ತೆರಳುವುದಕ್ಕೆ ಸಾಧ್ಯವಾಗದೆ ಪೊಲೀಸ್ ಪೇದೆಯೊಬ್ಬರ ಕಾರಿನಲ್ಲೇ ಮಗುವಿಗೆ ಜನ್ಮನೀಡಿದ ಘಟನೆ ಗುರುವಾರ ನಗರದಲ್ಲಿ ಸಂಭವಿಸಿದೆ. ವಾಮಂಜೂರು ಠಾಣೆಯ ಹೆಡ್ ಕಾನ್ಸ್ಟೆಬಲ್ ರವಿ ಕುಮಾರ್ ಅವರು ಎಕ್ಕೂರಿನ ಕೇಂದ್ರೀಯ ವಿದ್ಯಾಲಯಕ್ಕೆ ತನ್ನ ಮಕ್ಕಳನ್ನು ಬಿಟ್ಟು ವಾಪಸ್ ಹೋಗುತ್ತಿದ್ದಾಗ ಎಕ್ಕೂರಿನ ಫಿಶರೀಸ್ ಕಾಲೇಜಿನ ಮುಂಭಾಗದಲ್ಲಿ ರಿಕ್ಷಾದವರೊಬ್ಬರು ಕಾರನ್ನು ತಡೆದು ನಿಲ್ಲಿಸಿದ್ದಾರೆ. ತನ್ನ ರಿಕ್ಷಾದಲ್ಲಿ ‘ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ತತ್ಕ್ಷಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿದೆ. ರಿಕ್ಷಾದಲ್ಲಿ ಹೋಗಲು ಆಗುತ್ತಿಲ್ಲ, ಸಹಾಯ ಮಾಡಿ’ ಎಂದು ಕೇಳಿಕೊಂಡರು.
ಕೂಡಲೇ ರವಿ ಅವರು ಆ ಮಹಿಳೆಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಮಂಗಳೂರಿನ ಆಸ್ಪತ್ರೆ ಕಡೆಗೆ ಸಾಗುತ್ತಿದ್ದಾಗ ಪಂಪ್ವೆಲ್ ತಲುಪುತ್ತಿದ್ದಂತೆ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ತಾಯಿ- ಮಗುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ರವಿ ಮಾನವೀಯತೆ ಮೆರೆದಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆ. ರವಿ ಕುಮಾರ್ ಅವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದ್ದು, ಸಾಮಾಜಿಕ ತಾಣಗಳಲ್ಲಿಯೂ ಈ ವಿಚಾರ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.