ತಿಪ್ಪೇಸ್ವಾಮಿಗೆ ಅನ್ಯಾಯವಾಗೋಕೆ ಬಿಡಲ್ಲ
Team Udayavani, Apr 13, 2018, 12:38 PM IST
ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ತಿಪ್ಪೇಸ್ವಾಮಿಯವರಿಗೂ ಅವಕಾಶ ಕಲ್ಪಿಸಿಕೊಡಲಾಗುವುದು. ಅವರಿಗೆ ಅನ್ಯಾಯವಾಗಲೂ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಅವರನ್ನು ಮನೆಗೆ ಕರೆಯಿಸಿ ಮಾತುಕತೆ ನಡೆಸಲಾಗುವುದು ಎಂದು ಸಂಸದ ಬಿ. ಶ್ರೀರಾಮುಲು ಹೇಳಿದರು.
ನಗರದ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಅವರ ಬಗ್ಗೆ ನನಗೆ ಬಹಳಷ್ಟು ಗೌರವವಿದೆ. ಕಳೆದ 2013ರ ಚುನಾವಣೆಯಲ್ಲಿ ನಮ್ಮ (ಬಿಎಸ್‌ಆರ್) ಪಕ್ಷದಿಂದಲೇ ಸ್ಪರ್ಧಿಸಿ ಶಾಸಕರಾಗಿದ್ದರು. ಹೀಗಾಗಿ ಕೂಡಲೇ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದರು.
ಅವರು ನನಗೆ ಹಲವು ವರ್ಷಗಳಿಂದ ಚಿರಪರಿಚಿತ. ಕಳೆದ ಪರಿವರ್ತನಾ ಯಾತ್ರೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೇಳಿ ನಾನೇ ಟಿಕೆಟ್ ಘೋಷಣೆ ಮಾಡಿಸಿದ್ದೆ. ಅವರು ಯಾವುದೇ ಕಾರಣಕ್ಕೂ ಗಾಬರಿಯಾಗುವುದು ಬೇಡ ಎಂದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಹ ಬಿ.ಎಸ್. ಯಡಿಯೂರಪ್ಪ ಹೊರತುಪಡಿಸಿ ಸಂಸದರಿಗೆ ಯಾರಿಗೂ ಟಿಕೆಟ್ ಇಲ್ಲ ಎಂದು ಹೇಳಿದ್ದರಿಂದ ನಾನು ಸಹ ಎಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿರಲಿಲ್ಲ. ಆದರೆ, ರಾಜಕೀಯ ಲೆಕ್ಕಾಚಾರ ಪ್ರಕಾರ ರಾಜ್ಯದ 15 ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ರಾಮುಲು ಅವರಿಗೂ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಟಿಕೇಟ್ ಘೋಷಿಸಲಾಗಿದೆ. ಇದರಿಂದ ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗೂ ಅನುಕೂಲವಾಗಲಿದೆ ಎಂದರು.
ಎಲ್ಲ ಕ್ಷೇತ್ರಗಳಲ್ಲೂ ರಾಮುಲು ನಿಲ್ಲಬೇಕು ಎನ್ನುವುದಿದೆ. ಆದರೆ, ಪಕ್ಷ ನಿರ್ಣಯ ಕೈಗೊಂಡು ಎರಡು ಕಡೆ ನಿಲ್ಲುವಂತೆ ಸೂಚಿಸಿದರೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದರು. ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಮಾಜಿ ಸಂಸದರಾದ ಜೆ.ಶಾಂತಾ, ಸಣ್ಣ ಪಕ್ಕೀರಪ್ಪ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್. ಗುರುಲಿಂಗನಗೌಡ, ಪಾಲಿಕೆ ಸದಸ್ಯರಾದ ಎಸ್. ಮಲ್ಲನಗೌಡ, ಶ್ರೀನಿವಾಸ ಮೋತ್ಕರ್, ಕೆ.ಎ. ರಾಮಲಿಂಗಪ್ಪ, ಮುರುಹರಗೌಡ, ಕೆ. ಶಶಿಕಲಾ, ಎಂ. ಶಿವರುದ್ರಪ್ಪ ಇತರರು ಇದ್ದರು.
ಉಪಮುಖ್ಯಮಂತ್ರಿ ಸ್ಥಾನ ಕಾರ್ಯಕರ್ತರ ಅಭಿಪ್ರಾಯ
ಬಳ್ಳಾರಿ: ನನಗೆ ಉಪಮುಖ್ಯಮಂತ್ರಿ ಸ್ಥಾನಮಾನ ನೀಡಬೇಕೆಂಬುದು ಕಾರ್ಯಕರ್ತರ ಅಭಿಪ್ರಾಯ ಹಾಗೂ ಪರಿಶಿಷ್ಟ ಪಂಗಡದ ಕೂಗು ಸಹ ಇದೆ. ಆದರೆ, ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ನಾನೂ ಸಹ ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಸಂಸದ ಬಿ. ಶ್ರೀರಾಮುಲು ಪರೋಕ್ಷವಾಗಿ ಹೇಳಿದರು. ನಗರದ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನೆರೆಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಇದರಲ್ಲಿ ಯಾವುದೇ ಬದಲಾವಣೆಯಿಲ್ಲ. ಅದರೆ, ಒಂದುವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾರ್ಯಕರ್ತರು ಕೋರುತ್ತಿದ್ದಾರೆ. ವಾಲ್ಮೀಕಿ ಸಮುದಾಯಕ್ಕೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಸಹ ಕೇಳಿಬರುತ್ತಿದೆ. ಹೀಗಾಗಿ ಪಕ್ಷ ಕೈಗೊಳ್ಳುವ ನಿರ್ಣಯಕ್ಕೆ ಬದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.