ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಿ
Team Udayavani, Apr 13, 2018, 12:58 PM IST
ಶೃಂಗೇರಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಜನ ಪರ ಆಡಳಿತ ನೀಡಿದ್ದು,ಇದನ್ನು ಮತದಾರರಿಗೆ ಮುಟ್ಟಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಕಾಂಗ್ರೆಸ್ ಮುಖಂಡ ಟಿ.ಡಿ.ರಾಜೇಗೌಡ ಹೇಳಿದರು. ಅವರು ಪಟ್ಟಣದಲ್ಲಿ ಏರ್ಪಡಿಸಿದ್ದ ಪಟ್ಟಣ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ
ಸಭೆಯಲ್ಲಿ ಮಾತನಾಡಿದರು.
ಕಳೆದ ಚುನಾವಣೆಯಲ್ಲಿ ಸೋತ ನಂತರವೂ ಜನರ ಬಳಿ ಇದ್ದು,ಅವರ ಕಷ್ಟ ಸುಖವನ್ನು ಆಲಿಸಿ, ಸರಕಾರದಿಂದ ಮತ್ತು ವೈಯಕ್ತಿಕವಾಗಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಿದ್ದೇನೆ. ತಾಲೂಕಿನಲ್ಲಿ ಅಭಿವೃದ್ಧಿಗೆ ಮತದಾರರ ಆಶೀರ್ವಾದವಿದ್ದರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಟ್ಟಣದ ಅಭಿವೃದ್ಧಿಗೆ ಕ್ರಮ
ಕೈಗೊಳ್ಳಲಾಗುತ್ತದೆ. ಸರಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ. ಈಗಾಗಲೇ ತಾಲೂಕಿನ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿದೆ ಎಂದರು.
ಕಾಂಗ್ರೆಸ್ ವಕ್ತಾರ ಉಮೇಶ್ ಪುದುವಾಳ್ ಮಾತನಾಡಿ, ಕಳೆದ ಚುನಾವಣೆಯಲ್ಲಿ ಅಲ್ಪ ಮತದ ಅಂತರದಿಂದ ಪರಾಭವಗೊಂಡಿದ್ದು, ಈ ಬಾರಿ ಅತಿ ಹೆಚ್ಚು ಮತದಿಂದ ಖಚಿತವಾಗಿ ಜಯ ಗಳಿಸಲಿದ್ದಾರೆ. ಆದರೆ ಚುನಾವಣೆಯನ್ನು ಹಗುರವಾಗಿ ಪರಿಗಣಿಸದೆ, ಟಿ.ಡಿ.ರಾಜೇಗೌಡರ ಗೆಲುವಿಗೆ
ಶಕ್ತಿ ಮೀರಿ ಪ್ರಯತ್ನಿಸಬೇಕು. ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯನ್ನು ಮತದಾರರು ನಿರೀಕ್ಷಿಸಿದ್ದು, ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು. ಮಹಿಳಾ ಕಾಂಗ್ರೆಸ್ ಕಾರ್ಯಧ್ಯಕ್ಷೆ ಸೌಮ್ಯ ಮಾತನಾಡಿ, ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸವಿದ್ದು, ಈ ಬಾರಿ ಬದಲಾವಣೆ ಬಯಸಿದ್ದಾರೆ. ಮಹಿಳೆಯರಿಗೆ ಅನೇಕ ಕಾರ್ಯಕ್ರಮ ನೀಡಿರುವ ಕಾಂಗ್ರೆಸ್ ಸರಕಾರ ಮತ್ತೆ ಅಧಿ ಕಾರಕ್ಕೆ ತರಲು ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಅತ್ಯಧಿಕ ಮತದಿಂದ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಸಭೆಯ ಅಧ್ಯಕ್ಷತೆಯನ್ನು ಪ.ಪಂ.ಬೂತ್ ಸಮಿತಿ ಅಧ್ಯಕ್ಷ ಸ್ಟೈಲೋ ದಿನೇಶ್ ಶೆಟ್ಟಿ ವಹಿಸಿದ್ದರು. ಮುಖಂಡರಾದ ಕಾನುವಳ್ಳಿ ಕೃಷ್ಣಪ್ಪ ಗೌಡ, ಕೆ.ಎಂ.ರಮೇಶ್ ಭಟ್, ಕೆ.ಸಿ.ವೆಂಕಟೇಶ್, ರಫಿಕ್ ಅಹಮದ್, ಎಚ್. ಕೆ.ಸುಬ್ರಹ್ಮಣ್ಯ, ನಾರಾಯಣ,ನಾಗರಾಜ್, ವಸಂತಿ, ಶಕೀಲಾ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.