ಪಾಕ್ ಮಾಜಿ ಪ್ರಧಾನಿ ಷರೀಫ್ ಸಾರ್ವಜನಿಕ, ರಾಜಕೀಯ ಜೀವನ ಅಂತ್ಯ
Team Udayavani, Apr 13, 2018, 1:56 PM IST
ಇಸ್ಲಮಾಬಾದ್: ವಿದೇಶಗಳಲ್ಲಿ ಅಕ್ರಮ ಆಸ್ತಿ ಸಂಗ್ರಹ ಬಗ್ಗೆ ಪನಾಮಾ ಪೇಪರ್’ ದಾಖಲೆ ಸೋರಿಕೆ ಕುರಿತಂತೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದ್ದು ಮಾಜಿ ಪ್ರಧಾನಿ ನವಾಜ್ ಷರೀಫ್ಗೆ ಜೀವಿತಾವಧಿ ಇರುವವರೆಗೆ ಚುನಾವಣೆಗೆ ಸ್ಪರ್ಧಿಸಲು ಮತ್ತು ಸಾರ್ವಜನಿಕ ಹುದ್ದೆ ಹೊಂದಲು ನಿಷೇಧ ಹೇರಿದೆ.
ಐವರು ನ್ಯಾಯಾಧೀಶರನ್ನೊಳಗೊಂಡ ಪೀಠ ಈ ಐತಿಹಾಸಿಕ ತೀರ್ಪು ನೀಡಿದ್ದು ನವಾಜ್ ಷರೀಫ್ ರಾಜಕೀಯ ಜೀವನ ಅಂತ್ಯಗೊಂಡಿದೆ. ಪಾಕ್ ರಾಜಕೀಯದಲ್ಲೂ ಭಾರೀ ಬದಲಾವಣೆಯಾಗುವ ಎಲ್ಲಾ ಸಾಧ್ಯತೆಗಳಿವೆ.
ಪಾಕ್ ಸಂವಿಧಾನದ ಕಲಂ 62(1)(ಎಫ್) ಅಡಿಯಲ್ಲಿ ಈ ನಿಷೇಧವನ್ನು ನ್ಯಾಯಾಲಯ ಹೇರಿದೆ. ಷರೀಫ್ ಮಾತ್ರವಲ್ಲದೆ ತೆಹರೀಕ್ -ಇ-ಇನ್‌ಸಾಫ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜಹಾಂಗೀರ್ ತಾರೀನ್ ಅವರಿಗೂ ನಿಷೇಧ ಹೇರಿದೆ.
2017 ರ ಜುಲೈ ತಿಂಗಳಲ್ಲಿ ಪನಾಮಾ ಪೇಪರ್ಸ್ ಪ್ರಕರಣದಲ್ಲಿ ಪಾಕ್ ಸುಪ್ರೀಂ ಕೋರ್ಟ್ ನವಾಜ್ ಷರೀಫ್ ದೋಷಿ ಎಂದು ತೀರ್ಪು ನೀಡಿದ್ದ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.