ಶಿಥಿಲಗೊಂಡಿದೆ ನಗರಸಭೆ ಮಳಿಗೆ


Team Udayavani, Apr 13, 2018, 4:44 PM IST

13-April-20.jpg

ರಾಣಿಬೆನ್ನೂರ: ಜನನಿಬಿಡ ಪ್ರದೇಶವಾದ ನಗರದ ಮಧ್ಯೆ ಭಾಗದ ಎಂ.ಜಿ. ರಸ್ತೆಯಲ್ಲಿರುವ ಜನತಾ ಬಜಾರದ 20
ಮಳಿಗೆಗಳು ಶಿಥಿಲಗೊಂಡಿದ್ದು, ಇಂದು ನಾಳೆ ಕುಸಿಯುವ ಆತಂಕವಿದ್ದು, ವ್ಯಾಪಾರಸ್ಥರು ಜೀವ ಕೈಯಲ್ಲಿ ಹಿಡಿದುಕೊಂಡು ವ್ಯಾಪಾರ ಮಾಡುತ್ತಿದ್ದಾರೆ.

ಸುಮಾರು 60 ವರ್ಷಗಳ ಹಿಂದೆಯೇ ಎಂ.ಜಿ. ರಸ್ತೆಯಲ್ಲಿ ಸಣ್ಣ ಪುಟ್ಟ ವ್ಯಾಪಾರಸœರಿಗೆ ಹಾಗೂ ಸಹಕಾರಿ ಸಂಘ-ಸಂಸ್ಥೆಗಳಿಂದ ಜನತೆಗೆ ಕಡಿಮೆ ದರದಲ್ಲಿ ದಿನ ಬಳಕೆ ವಸ್ತುಗಳನ್ನು ವಿರಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರಸಭೆ ಜನತಾ ಬಜಾರ್‌ ನಿರ್ಮಿಸಿತ್ತು. ಅಂದು ನಗರಭೆಯ 32 ಮಳಿಗೆಗಳ ಸಂಕೀರ್ಣವನ್ನು ಹೊರತುಪಡಿಸಿ ಬೇರಾವ ಮಳಿಗೆಯೂ ಇಲ್ಲಿ ಇರಲಿಲ್ಲ. ಈ ಕಟ್ಟಡದಲ್ಲೇ ಶಾಸಕರಾದ ಕೆ.ಬಿ. ಕೋಳಿವಾಡ ಅವರು ಕಂಜುಮರ್ಸ್‌ ಕೋ ಆಪ್‌ ಸೊಸೈಟಿಯನ್ನು ಪ್ರಾರಂಭಿಸಿದ್ದರು. ಆದರೆ ಅದು ನಷ್ಟವಾಗಿ ಹರಾಜಿನಲ್ಲಿ ಅಲ್ಲಿಯ ಎಲ್ಲಾ ವಸ್ತುಗಳ ಮಾರಾಟವನ್ನು ಮಾಡಲಾಯಿತು.

ಜನತಾ ಬಜಾರ್‌ ಕಟ್ಟಡದಲ್ಲಿ ಸುಮಾರು 25ರಿಂದ 30 ಅಂಗಡಿಗಳಿವೆ. ಇದರಲ್ಲಿ ಬಣ್ಣದ ಅಂಗಡಿಗಳು, ಪುಸ್ತಕ, ಔಷಧಿ, ಹೋಟೆಲ್‌, ಪಾತ್ರೆ, ಪಾನಬೀಡಾ ಅಂಗಡಿಗಳು ಸೇರಿದಂತೆ ಇತರ ಅಂಗಡಿಗಳಿವೆ. ಇಲ್ಲಿ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ. ಕಡಿಮೆ ಬಾಡಿಗೆಗೆ ಜನನಿಬಿಡ ಪ್ರದೇಶದಲ್ಲಿ ದೊಡ್ಡ ದೊಡ್ಡ ಮಳಿಗೆಗಳು ಸಿಕ್ಕಿರುವುದರಿಂದ ವ್ಯಾಪಾರಸ್ಥರು ನಿಶ್ಚಿಂತೆಯಿಂದಿದ್ದಾರೆ. ಆದರೆ ಕಟ್ಟಡ ಶಿಥಿಲಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ಬೀಳುವ ಹಂತದಲ್ಲಿದೆ.

ಈ ಕಟ್ಟಡದ ಬಗ್ಗೆ ನಗರ ಸಭೆಯ ಯಾವುದೇ ಅಧಿಕಾರಿಗಳು, ಜನ ಪ್ರತಿನಿಧಿಗಳು ತಲೆ ಕೆಡಿಸಿಕೊಳ್ಳುವ ಗೋಜಿಗೆ ಹೋಗಿಲ್ಲ. ಈ ಹಿಂದೆ ಕಟ್ಟಡದಲ್ಲಿ ಸಾರ್ವಜನಿಕ ಗ್ರಂಥಾಲಯವಿತ್ತು. ಸುಮಾರು 10 ವರ್ಷಗಳ ಹಿಂದೆಯೇ ಗ್ರಂಥಾಲಯಕ್ಕೆ ಬರುವ ಓದುಗರು ಕಟ್ಟಡದ ಭದ್ರತೆಯ ವಿರುದ್ಧ ಹೋರಾಟ ಮಾಡಿದಾಗ ನಗರ ಸಭೆಯ ಅಧಿಕಾರಿಗಳು ಗ್ರಂಥಾಲಯವನ್ನು ನಗರಸಭೆಯ ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಈ ಕಟ್ಟಡ ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ ಸಾರ್ವಜನಿಕರು ನಗರಸಭೆಗೆ ಅನೇಕ ಬಾರಿ ಮನವಿ ಸಲ್ಲಿಸುತ್ತಾ ಬಂದಿದ್ದರೂ ಈವರೆಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಇದೇ ರೀತಿ ಜನತಾ ಬಜಾರ್‌ ಎದುರಿಗೆ ಎಂ.ಜಿ. ರಸ್ತೆಯಲ್ಲಿ 32 ಮಳಿಗೆಗಳು ಕೂಡ ಶಿಥಿಲಾವಸ್ಥೆಗೆ ತಲುಪಿದ್ದರು ಸಹ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಆಗ ರವಿ ಟೆಕ್ಸಟೈಲ್ಸ್‌ ಕುಸಿದು ಕೆಲಸಗಾರನೊಬ್ಬ ಮೃತಪಟ್ಟು ಒಂದು ವರ್ಷದ ಬಳಿಕ ನಗರ ಸಭೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಮಳಿಗೆಗಳನ್ನು ನೆಲಸಮಗೊಳಿಸಿ ಹೊಸ ಮಳಿಗೆಗಳನ್ನು ನಿರ್ಮಾಣ ಮಾಡಿದ್ದಾರೆ. ಈಗ ಜನತಾ ಬಜಾರ ಕಟ್ಟಡವನ್ನು ತುರ್ತಾಗಿ ನೆಲಸಮಗೊಳಿಸದಿದ್ದರೆ ಅನಾಹುತವಾಗುವ ಸಾಧ್ಯತೆಯಿದೆ. ಈಗಾಗಲೇ ಸೋರುತ್ತಿರುವ ಮಳಿಗೆಗಳಲ್ಲಿ ಬಿರುಕು ಬಿಟ್ಟಿದೆ. ಅಲ್ಲದೆ ಮೇಲ್ಚಾವಣೆ ಕಾಂಕ್ರೀಟ್‌ ಕಿತ್ತು ಹೋಗಿ ಕಬ್ಬಿಣದ ಸಲಾಕೆಗಳು ಹೊರಗೆ ಕಾಣಿಸುತ್ತಿವೆ. ನಿತ್ಯ ಸಾವಿರಾರು ಜನರು ಒಡಾಡುವ ಪ್ರದೇಶದಲ್ಲಿ ಕಟ್ಟಡ ಕುಸಿದು ಅನಾಹುತ ಸಂಭವಿಸುವ ಪೂರ್ವದಲ್ಲಿ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

 ಮಂಜುನಾಥ ಎಚ್‌. ಕುಂಬಳೂರ 

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.