ಕನ್ನಡ ಕಲಿತ ಮಲೇಷಿಯಾ ವೈದ್ಯ ವಿದ್ಯಾರ್ಥಿ

Team Udayavani, Apr 14, 2018, 12:01 PM IST

kannada.jpg

ಬೆಂಗಳೂರು: ಕನ್ನಡಿಗರೇ ಕನ್ನಡದಲ್ಲಿ ವ್ಯವಹರಿಸಲು ಹಿಂಜರಿಯುವ ದಿನಗಳದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಮಲೇಷಿಯಾದಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಪದವಿ ಮುಗಿಯುವುದರೊಳಗೇ ಕನ್ನಡ ಕಲಿತು, ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಆರಂಭಿಸಿದ್ದಾರೆ. ಇದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಮಲೇಷಿಯಾ ಸರ್ಕಾರದಿಂದ ವಿದ್ಯಾರ್ಥಿ ವೇತನ ಪಡೆದು ದಾವಣಗೆರೆ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್‌ ಪದವಿಯನ್ನು ನಾಲ್ಕು ಚಿನ್ನದ ಪದಕಗಳೊಂದಿಗೆ ಪೂರೈಸಿರುವ ಡಾ.ಲಿಮ್‌ ಬೂನ್‌ ಹ್ಯೂ, ಈಗಾಗಲೇ ಒಂದು ವರ್ಷದ ಇಂಟರ್ನ್ಶಿಪ್‌ ಕೂಡ ಪೂರ್ಣಗೊಳಿಸಿದ್ದಾರೆ. ಅಧ್ಯಯನದ ಸಂದರ್ಭದಲ್ಲಿಯೇ ರೋಗಿಗಳೊಂದಿಗೆ ವ್ಯವಹರಿಸಲು ಅಗತ್ಯವಿರುವಷ್ಟು ಕನ್ನಡವನ್ನು ಅಧ್ಯಯನದ ಮೂಲಕ ತಿಳಿದುಕೊಂಡಿದ್ದಾರೆ. ಕನ್ನಡ ಓದುವುದು, ಬರೆಯುವುದು ಮತ್ತು ವ್ಯವಹಾರವನ್ನು ಕೂಡ ಕರಗತ ಮಾಡಿಕೊಂಡಿದ್ದಾರೆ.

ಬಿಡಿಎಸ್‌ ಕೋರ್ಸ್‌ನಲ್ಲಿ ಗರಿಷ್ಠ ಅಂಕ, ರೆಡಿಯಾಲಜಿ ಮತ್ತು ಮೆಡಿಸಿನ್‌ನಲ್ಲಿ ಗರಿಷ್ಠ ಅಂಕ, ಪೆಡೋಡಾಂಟಿಕ್ಸ್‌ನಲ್ಲಿ ಗರಿಷ್ಠ ಅಂಕ ಹಾಗೂ ದಂತ ವೈದ್ಯಕೀಯ ಅಂತಿಮ ವರ್ಷದಲ್ಲಿ ಎಲ್ಲಾ ವಿಷಯದಲ್ಲಿ ಹೆಚ್ಚಿನ ಅಂಕ ಪಡೆದಿರುವುದಕ್ಕಾಗಿ ಗುರುವಾರ ನಗರದ ನಿಮ್ಹಾನ್ಸ್‌ ಸೆಂಟರ್‌ನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ನಾಲ್ಕು ಚಿನ್ನದ ಪದಕ ಪಡೆದರು.

ಆಸಕ್ತಿಯ ವಿಷಯ: ನಂತರ ತಮ್ಮ ಅನುಭವ ಹಂಚಿಕೊಂಡ ಡಾ. ಲಿಮ್‌, ಕನ್ನಡ ಕಲಿಯುವುದೇ ಒಂದು ಆಸಕ್ತಿಯ ವಿಷಯವಾಗಿತ್ತು. ರೋಗಿಗಳನ್ನು ಆರೈಕೆ ಮಾಡಲು ಪೂರಕವಾಗುವ ಉದ್ದೇಶದಿಂದ ಕೆಲವೊಂದು ಪದ ಹಾಗೂ ಪ್ಯಾರಾಗಳನ್ನು ಉದ್ದೇಶ ಪೂರ್ವಕವಾಗಿ ವಿಶೇಷ ಒತ್ತುಕೊಟ್ಟು ಅಧ್ಯಯನ ಮಾಡಿದ್ದೇನೆ. ನೋವು ಇದೆಯಾ? ಎಲ್ಲಿ ನೋವು? ಎಷ್ಟು ದಿನದಿಂದ ಸಮಸ್ಯೆ ಇದೆ ಇತ್ಯಾದಿ ಪದಗಳು ಸ್ಥಳೀಯ ಅಥವಾ ಗ್ರಾಮೀಣ ಭಾಗದ ರೋಗಿಗಳೊಂದಿಗೆ ವ್ಯವಹರಿಸಲು ಉಪಯೋಗವಾಗಿದೆ ಎಂದರು.

ಮಲೇಷಿಯಾ ಸರ್ಕಾರ ಕೂಡ ಭಾರತದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಹಿಂದಿ, ಕನ್ನಡ, ತಮಿಳು ಇತ್ಯಾದಿ ಭಾಷೆಗಳ ಅಧ್ಯಯನಕ್ಕೆ ಪೂರಕವಾಗುವಂತೆ ಅಲ್ಪಾವಧಿಯ ಕೋರ್ಸ್‌ಗಳನ್ನು ನಡೆಸುತ್ತದೆ. ಅದರಲ್ಲೂ ಭಾಗವಹಿಸಿದ್ದೇನೆ ಎಂದರು. ರಾಜ್ಯ ಸರ್ಕಾರ ಗ್ರಾಮೀಣ ಸೇವೆ ಕಡ್ಡಾಯ ಮಾಡಿರುವ ನಿರ್ಧಾರ ಚೆನ್ನಾಗಿದೆ. ಸದ್ಯ ಮಲೇಷಿಯಾದ ಸರ್ಕಾರಿ ಆಸ್ಪತ್ರೆಯ ದಂತ ಚಿಕಿತ್ಸಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ ಎಂದರು.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.