ಎಸ್ಸೆಸ್ಸೆಲ್ಸಿ ವಿಜ್ಞಾನ, ಗಣಿತಕ್ಕೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕ
Team Udayavani, Apr 14, 2018, 12:01 PM IST
ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಎಸ್ಸೆಸ್ಸೆಲ್ಸಿ ವಿಜ್ಞಾನ ಮತ್ತು ಗಣಿತ ವಿಷಯಕ್ಕೆ ಹೊಸ ಪಠ್ಯಪುಸ್ತಕ ಅನುಷ್ಠಾನಕ್ಕೆ ಸರ್ಕಾರ ನಿರ್ಧರಿಸಿದೆ.
ಇದರಿಂದಾಗಿ ಈ ಕುರಿತು ವಿದ್ಯಾರ್ಥಿಗಳು, ಪಾಲಕ-ಪೋಷಕರು ಹಾಗೂ ಶಿಕ್ಷಕರಲ್ಲಿ ಎದ್ದಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಹೊಸ ಪಠ್ಯಕ್ರಮದಿಂದಾಗಿ ರಾಷ್ಟ್ರಮಟ್ಟದಲ್ಲಿ ರಾಜ್ಯದ ವಿದ್ಯಾರ್ಥಿಗಳು ಸ್ಪರ್ಧೆ ಮಾಡಲು ಅನುಕೂಲವಾಗಲಿದೆ.
ರಾಜ್ಯದಲ್ಲಿರುವ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿ ಪ್ರತ್ಯೇಕ ಪಠ್ಯಕ್ರಮ ಇದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ರಾಜ್ಯ ಪಠ್ಯಕ್ರಮಕ್ಕೂ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್(ಎನ್‌ಸಿಇಆರ್‌ಟಿ) ಸಿದ್ಧಪಡಿಸುವ ಪಠ್ಯಕ್ರಮಕ್ಕೂ ಬಹಳಷ್ಟು ವ್ಯತ್ಯಾಸ ಇದೆ.
ಪದವಿಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ಎನ್‌ಸಿಇಆರ್‌ಟಿ ಪಠ್ಯಕ್ರಮ ಅಳವಡಿಸಿಕೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ 9ನೇ ತರಗತಿಯ ವಿಜ್ಞಾನ ಮತ್ತು ಗಣಿತ ವಿಷಯಕ್ಕೆ ಎನ್‌ಸಿಇಆರ್‌ಟಿ ಪಠ್ಯಕ್ರಮ ಜೋಡಿಸಿದೆ. 2018-19ನೇ ಸಾಲಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿಜ್ಞಾನ ಮತ್ತು ಗಣಿತ ವಿಷಯವು ಎನ್‌ಸಿಇಆರ್‌ಟಿ ಪಠ್ಯದಲ್ಲೇ ಇರಲಿದೆ.
ಪುಸ್ತಕ ಮುದ್ರಣ: ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೇಕಾದ ವಿಜ್ಞಾನ ಮತ್ತು ಗಣಿತ ವಿಷಯದ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಇಲಾಖೆ ನೀಡಿರುವ ಅಂಕಿ-ಸಂಖ್ಯೆಗೆ ಅನುಗುಣವಾಗಿ ಮುದ್ರಿಸಿ ಕೊಡಲು ಸಿದ್ಧತೆ ಮಾಡಿಕೊಂಡಿದೆ. ಏಪ್ರಿಲ್ ಅಂತ್ಯದೊಳಗೆ ಮುದ್ರಣ ಕಾರ್ಯ ಪೂರ್ಣವಾಗಲಿದ್ದು, ಮೇ ಎರಡು ಅಥವಾ ಮೂರನೇ ವಾರದೊಳಗೆ ಮಾರುಕಟ್ಟೆಯಲ್ಲಿ ಪುಸ್ತಕ ಲಭ್ಯವಾಗಲಿದೆ ಎಂದು ಸೊಸೈಟಿಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಏಳು ಮಾಧ್ಯಮದಲ್ಲಿ ಪಠ್ಯ: ಪಠ್ಯಪುಸ್ತಕ ಸೊಸೈಟಿಯಿಂದ ಎನ್‌ಸಿಇಆರ್‌ಟಿ ಪಠ್ಯಪುಸ್ತವನ್ನು ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲಗು, ಮರಾಠಿ ಹಾಗೂ ಉರ್ದು ಹೀಗೆ ಏಳು ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿ ವಿಜ್ಞಾನ ಹಾಗೂ ಗಣಿತ ಪುಸ್ತಕವನ್ನು ಮುದ್ರಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಯಾ ಮಾಧ್ಯಮದ ಪುಸ್ತಕವನ್ನು ಅಭ್ಯಾಸ ಮಾಡಬಹುದಾಗಿದೆ. ಸೊಸೈಟಿಯಿಂದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ನಂತರ ಪುಸ್ತಕವನ್ನು ಆನ್‌ಲೈನ್ ಮೂಲಕವೇ ಡೌನ್‌ಲೋಡ್ ಮಾಡಿಕೊಳ್ಳಬಹುದು.
2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಹಾಗೂ ಗಣಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಏಳು ಭಾಷೆಯಲ್ಲಿ ಮುದ್ರಣ ಮಾಡುತ್ತಿದ್ದೇವೆ. ಇಲಾಖೆ ನೀಡಿರುವ ಸಂಖ್ಯೆಗೆ ಅನುಗುಣವಾಗಿ ಮುದ್ರಣಕಾರ್ಯ ನಡೆಯುತ್ತಿದೆ. ಅತಿಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿದೆ.
-ನರಸಿಂಹಯ್ಯ, ರಾಜ್ಯ ಪಠ್ಯಪುಸ್ತಕ ಸೊಸೈಟಿ, ವ್ಯವಸ್ಥಾಪಕ ನಿರ್ದೇಶಕ.
ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಕ್ರಮ ಅಳವಡಿಸುವಂತೆ ಏಳೆಂಟು ವರ್ಷದಿಂದ ಇಲಾಖೆಯಲ್ಲಿ ಬೇಡಿಕೆ ಇಟ್ಟಿದ್ದೇವೆ. ಕರ್ನಾಟಕದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸಲು ಎನ್‌ಸಿಇಆರ್‌ಟಿ ಪಠ್ಯ ಅವಶ್ಯಕ. ರಾಜ್ಯ ಪಠ್ಯಕ್ರಮ ಪರಿಷ್ಕರಣೆಯೂ ವ್ಯವಸ್ಥಿತವಾಗಿ ಮಾಡಬೇಕು.
-ಡಿ.ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ
* ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.