ಸಾಕ್ಷರ ಭಾರತ ಪ್ರೇರಕರಿಗೆ ವಿವಿ ಪ್ಯಾಟ್ ತರಬೇತಿ
Team Udayavani, Apr 14, 2018, 12:30 PM IST
ಕಲಬುರಗಿ: ಸಾಕ್ಷರ ಭಾರತ ಪ್ರೇರಕರು ತಮ್ಮ ಗ್ರಾಮದ ಎಲ್ಲ ಅನಕ್ಷರಸ್ಥ ಮತದಾರರಿಗೆ ಎಲೆಕ್ಟ್ರಾನಿಕ್ ಮತಯಂತ್ರ ಮತ್ತು
ವಿವಿ ಪ್ಯಾಟ್ ಕುರಿತು ಮಾಹಿತಿ ನೀಡುವಂತೆ ಜಿಪಂಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೋರ್ಲಪಾಟಿ ತಿಳಿಸಿದರು. ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಪಂ ಹಳೆ ಸಭಾಂಗಣದಲ್ಲಿ ಸಾಕ್ಷರ ಭಾರತ ಕಾರ್ಯಕ್ರಮದ ಪ್ರೇರಕರಿಗೆ ಇವಿಎಂ ಮತ್ತು ವಿವಿ ಪ್ಯಾಟ್ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಈ ಬಾರಿಯ ಚುನಾವಣೆಯಲ್ಲಿ ಮತದಾನ ಖಾತ್ರಿ ಯಂತ್ರ (ವಿವಿ ಪ್ಯಾಟ್) ಬಳಸಲಾಗುತ್ತಿದ್ದು, ಮತದಾರರು ತಾವು ಯಾರಿಗೆ ಮತದಾನ ಮಾಡಿದ್ದೇವೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ವಿವಿ ಪ್ಯಾಟ್ ಯಂತ್ರದಲ್ಲಿ ಮತದಾನ ಮಾಡಿದ ನಂತರ ಏಳು ಸೆಕೆಂಡುಗಳ ಕಾಲ ಮತದಾನ ಮಾಡಿದ ಬಗ್ಗೆ ಮಾಹಿತಿ ಪ್ರದರ್ಶನವಾಗುತ್ತದೆ.
ಈ ಮಾಹಿತಿಯಲ್ಲಿ ಅಭ್ಯರ್ಥಿಯ ಹೆಸರು, ಅಭ್ಯರ್ಥಿಯ ಕ್ರಮ ಸಂಖ್ಯೆ ಹಾಗೂ ಪಕ್ಷದ ಚಿಹ್ನೆ ಒಳಗೊಂಡಿರುತ್ತದೆ ಎಂದರು. ಸರ್ಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ರಾಘವೇಂದ್ರ ಅಳವಂಡಿ, ಸಹ ಪ್ರಾಧ್ಯಾಪಕ ಶಿವಶರಣ ಗೊಳ್ಳೆ, ರವೀಂದ್ರ ರಡ್ಡಿ ಎಲೆಕ್ಟ್ರಾನಿಕ್ ಮತಯಂತ್ರ ಮತ್ತು ವಿವಿ ಪ್ಯಾಟ್ ಕಾರ್ಯವಿಧಾನದ ಬಗ್ಗೆ ತರಬೇತಿ ನೀಡಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎನ್. ವಿ. ಶಿವಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.