ಕಾಂಗ್ರೆಸ್ ಪರ ಪ್ರಗತಿಪರ ಸಾಹಿತಿಗಳ ಪ್ರಚಾರ
Team Udayavani, Apr 14, 2018, 12:52 PM IST
ಮೈಸೂರು: ವಿಧಾನಸಭೆ ಚುನಾವಣಾ ಕಣ ದಿನೇದಿನೇ ರಂಗೇರುತ್ತಿದ್ದು, ಸಾಹಿತಿಗಳು, ಪ್ರಗತಿಪರ ಚಿಂತಕರು ಶುಕ್ರವಾರ ಮೈಸೂರಿನಲ್ಲಿ ಕಾಂಗ್ರೆಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ರಾಮಕೃಷ್ಣನಗರದ ಆಂದೋಲನ ವೃತ್ತದಲ್ಲಿ ಆಯೋಜಿಸಿದ್ದ ಸಂವಿಧಾನ ಉಳಿವಿಗಾಗಿ, ಕೋಮುವಾದದ ಅಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂಬ ಘೋಷಣೆಯೊಂದಿಗೆ ಜನ-ರಾಜಕಾರಣ ಪ್ರಚಾರಾಂದೋಲನಕ್ಕೆ ಸಾಹಿತಿ ಡಾ.ಕೆ.ಮರುಳಸಿದ್ದಪ್ಪ, ಡಾ.ಎಸ್.ಜಿ.ಸಿದ್ದರಾಮಯ್ಯ, ಮುಖ್ಯಮಂತ್ರಿ ಚಂದ್ರು ಸೇರಿದಂತೆ ಇನ್ನಿತರರ ಸಾಹಿತಿಗಳು ಹಾಗೂ ಪ್ರಗತಿಪರ ಚಿಂತಕರು ಚಾಲನೆ ನೀಡಿದರು.
ಅಧೈರ್ಯ, ಆತಂಕವಿದೆ: ಡಾ.ಕೆ.ಮರುಳಸಿದ್ದಪ್ಪ ಮಾತನಾಡಿ, ಕಳೆದ 70 ವರ್ಷಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ ದೇಶದ ಜನತೆ ಜೀವನ ನಡೆಸುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದುರ್ಬಲರು, ಮಹಿಳೆಯರು, ಶೋಷಿತರು, ಬಡವರಿಗೆ ದಿನದಿಂದ ದಿನಕ್ಕೆ ಅಧೈರ್ಯ, ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ 8 ವರ್ಷದ ಬಾಲಕಿಯ ಮೇಲೆ ಕಿಡಿಗೇಡಿಗಳು ದೇವಸ್ಥಾನದಲ್ಲಿ ಅತ್ಯಾಚಾರವೆಸಗಿ ಆಕೆಯ ಹತ್ಯೆ ಮಾಡಿದ್ದು, ನಿಜಕ್ಕೂ ತಲೆತಗ್ಗಿಸುವ ಸಂಗತಿಯಾಗಿದೆ.
ಇಂತಹ ಕೊಲೆಗಡುಕರ ಪರವಾಗಿ ಬಿಜೆಪಿ ಹೋರಾಟ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮತದಾರರು ಸಿದ್ದರಾಮಯ್ಯ ಹಾಗೂ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಮಾದರಿಯನ್ನಾಗಿಟ್ಟುಕೊಂಡು ಗಮನಿಸಿದರೆ ಯಾವುದು ಉತ್ತಮ ಸರ್ಕಾರವೆಂಬುದು ತಿಳಿಯಲಿದೆ ಎಂದು ಟೀಕಿಸಿದರು.
ಈ ಚುನಾವಣೆ ನಿರ್ಣಾಯಕ: ದೇಶದ ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಜೈಲು ಸೇರಿದ ಉದಾಹರಣೆಯೇ ಇಲ್ಲ. ಹೀಗಾಗಿ ರಾಜ್ಯದ ಮತದಾರರು ಈ ಬಗ್ಗೆ ಎಚ್ಚೆತ್ತುಕೊಂಡು, ಚುನಾವಣೆಯಲ್ಲಿ ಮತದಾನ ಮಾಡಬೇಕಿದೆ.
ರಾಜ್ಯದ ಈ ಚುನಾವಣೆ ನಿರ್ಣಾಯಕವಾಗಿದ್ದು, ಈ ಚುನಾವಣೆಯ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮಬೀರಲಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೂಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶದ ಜನರೆಲ್ಲರೂ ಒಟ್ಟಾಗಿ ನಿಂತರೂ ಸಂವಿಧಾನ ಉಳಿಯುವುದಿಲ್ಲ. ಈಗಾಗಲೇ ಅದರ ಬಗ್ಗೆ ಅನೇಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದು, ಇನ್ನೂ ಕೆಲವರು ಪರೋಕ್ಷವಾಗಿ ಇಂತಹ ಹೇಳಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದರು.
ಮೋದಿ ಮಾತಿನಲ್ಲಿ ನಿಸ್ಸೀಮ: ಪ್ರಧಾನಿ ನರೇಂದ್ರ ಮೋದಿ ಕೇವಲ ಘೋಷಣೆ ಮತ್ತು ಮಾತಿನಲ್ಲಿ ನಿಸ್ಸೀಮರಾಗಿದ್ದು, ಮೋದಿ ಎಂದರೆ ಅವತಾರಪುರುಷ ಎಂಬ ಕಥೆಯನ್ನು ಜನರ ಮುಂದೆ ಹರಡುತ್ತಿದ್ದು, ಈ ಅವತಾರಪುರುಷ ಕಳೆದ ನಾಲ್ಕು ವರ್ಷದಲ್ಲಿ ಮಾತುಗಳನ್ನು ಬಿಟ್ಟು ಬೇರೇನನ್ನೂ ಕೊಟ್ಟಿಲ್ಲ.
ತಮ್ಮ ಸುತ್ತಲೂ ಸುಳ್ಳಿನ ಕೋಟೆಯನ್ನೇ ಕಟ್ಟಿಕೊಂಡಿದ್ದು, ಇದನ್ನು ಪ್ರಶ್ನಿಸಿದರೆ ಅವರ ವಿರುದ್ಧ ಸುಳ್ಳು ಆರೋಪ, ಹಲ್ಲೆಗಳನ್ನು ಮಾಡುವ ಅಥವಾ ಜೀವಕ್ಕೆ ಅಪಾಯವಿದೆ ಎಂಬುದು ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಗಳೇ ಬಿಂಬಿಸಿವೆ. ಈ ನಿಟ್ಟಿನಲ್ಲಿ ಕಳೆದ 5 ವರ್ಷದಲ್ಲಿ ಸ್ಥಿರ ಹಾಗೂ ಜನಪರ ಕಾರ್ಯಕ್ರಮಗಳನ್ನು ರೂಪಿಸಿರುವ ಸಿದ್ದರಾಮಯ್ಯ ಅವರ ಸರ್ಕಾರದ ಸಾಧನೆಗಳನ್ನು ಗಮನಿಸಿ ಮತದಾರರು ಮತಹಾಕಬೇಕಿದೆ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ, ಸಾಹಿತಿ ಪೊ›.ಎಚ್.ಜಿ.ಸಿದ್ದರಾಮಯ್ಯ, ಚಿಂತಕ ಪೊ›.ಮಹೇಶ್‌ಚಂದ್ರ ಗುರು, ಸಾಹಿತಿಗಳಾದ ಪೊ›.ಅರವಿಂದ ಮಾಲಗತ್ತಿ, ಪೊ›.ಕೆ.ಎಸ್.¸ಗವಾನ್, ಪ್ರಗತಿಪರ ಚಿಂತಕ ಪ.ಮಲ್ಲೇಶ್, ರಂಗಾಯಣ ಮಾಜಿ ನಿರ್ದೇಶಕ ಜನಾದìನ್(ಜನ್ನಿ), ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರ ¸ೂಪತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾವ…, ಕಾಂಗ್ರೆಸ್ ಮುಖಂಡ ಕೆ.ಮರೀಗೌಡ ಇನ್ನಿತರರು ಹಾಜರಿದ್ದರು.
ಬಿಜೆಪಿ ಅವರೇ ಭಾರತಬಿಟ್ಟು ತೊಲಗಿ: ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಬ್ರಿಟಿಷರೇ ಭಾರತಬಿಟ್ಟು ತೊಲಗಿ ಎಂದು ಹೋರಾಡಿದರೆ, ಇಂದು ಬಿಜೆಪಿ ಅವರೇ ಅಧಿಕಾರ ಬಿಟ್ಟು ತೊಲಗಿ, ಸಾಧ್ಯವಾದರೆ ದೇಶಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಹೋರಾಡಬೇಕಿದೆ ಎಂದು ಕಾಂಗ್ರೆಸ್ ಮುಖಂಡ ಮುಖ್ಯಮಂತ್ರಿ ಚಂದ್ರು ಟೀಕಿಸಿದರು.
ಜನ-ರಾಜಕಾರಣ ಪ್ರಚಾರಾಂದೋಲನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬ್ರಿಟಷರು ಏನು ಕೊಳ್ಳೆ ಹೊಡೆದರೋ ಅದನ್ನು ಬಿಜೆಪಿ ಅವರು ಮಾನವೀಯತೆ ದೃಷ್ಟಿಯಲ್ಲಿ ಕೊಳ್ಳೆ ಹೊಡೆಯುತ್ತಿದ್ದಾರೆ. ದೇಶಪ್ರೇಮದ ಹೆಸರಿನಲ್ಲಿ ದೇಶವನ್ನು ಕೊಳ್ಳೆ ಹೊಡೆಯುತ್ತಿರುವ ಬಿಜೆಪಿ ಅವರು ದೇಶಬಿಟ್ಟು ಹೋಗಬೇಕಿದೆ. ಜೆಡಿಎಸ್ ವಿರುದ್ಧ ಜಾತಿಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಹೋರಾಡಬೇಕಿದ್ದು,
ಬಿಜೆಪಿ ಇದೆ ಎಚ್ಚರಿಕೆ, ಜೆಡಿಎಸ್ ಇದೆ ಎಚ್ಚರಿಕೆ ಎಂಬ ಬೋರ್ಡ್ ಹಾಕಬೇಕಿದೆ. ಈ ಬಾರಿಯ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಚುನಾವಣೆಯಾಗದೆ, ಮೋದಿ ಮತ್ತು ಸಿದ್ದರಾಮಯ್ಯ ನಡುವಿನ ಚುನಾವಣೆ ಆಗಿದೆ. ಹೀಗಾಗಿ ರಾಜ್ಯದ ವಿಧಾನಸಬಾ ಚುನಾವಣೆ 2019ರ ಲೋಕಸಬಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಜ್ಯದಲ್ಲಿ ಸಿದ್ದರಾಮಯ್ಯ ಅಥವಾ ಅವರ ಸರ್ಕಾರವನ್ನು ಅಧಿಕಾರಕ್ಕೆ ತರದಿದ್ದರೆ ದೇಶಕ್ಕೆ ಅಪಾಯ ಎಂದರು.
ದೇಶದ ಸಂವಿಧಾನ ಮತ್ತು ಪ್ರಜಾಪ್ರ¸ುತ್ವಕ್ಕೆ ಸಂಚಕಾರ ಬಂದಿದ್ದು, ಕೆಲವು ಪಕ್ಷಗಳು ಸಂವಿಧಾನ ಬದಲಿಸುವ ಘೋಷಣೆಯೊಂದಿಗೆ ಆಡಳಿತ ನಡೆಸುತ್ತಿವೆ. ಹೀಗಾಗಿ ಎಲ್ಲರೂ ಒಂದಾಗಿ ಕೋಮುವಾದಿ ಪಕ್ಷಗಳನ್ನು ಅಧಿಕಾರದಿಂದ ಕಿತ್ತೂಗೆಯಬೇಕು.
-ಡಾ.ಯತೀಂದ್ರ ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.